Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊರ್ಬಿ ಸೇತುವೆ ಕುಸಿತ ಭಾರೀ ದುರಂತ:...

ಮೊರ್ಬಿ ಸೇತುವೆ ಕುಸಿತ ಭಾರೀ ದುರಂತ: ಸುಪ್ರೀಂ ಕೋರ್ಟ್

ನಿಯಮಿತ ವಿಚಾರಣೆ ನಡೆಸಲು ಗುಜರಾತ್ ಹೈಕೋರ್ಟ್ ಗೆ ಸೂಚನೆ

21 Nov 2022 9:34 PM IST
share
ಮೊರ್ಬಿ ಸೇತುವೆ ಕುಸಿತ ಭಾರೀ ದುರಂತ: ಸುಪ್ರೀಂ ಕೋರ್ಟ್
ನಿಯಮಿತ ವಿಚಾರಣೆ ನಡೆಸಲು ಗುಜರಾತ್ ಹೈಕೋರ್ಟ್ ಗೆ ಸೂಚನೆ

ಹೊಸದಿಲ್ಲಿ,ನ.21: 140ಕ್ಕೂ ಅಧಿಕ ಜನರನ್ನು ಬಲಿ ತೆಗೆದುಕೊಂಡ ಗುಜರಾತಿನ ಮೊರ್ಬಿ ತೂಗುಸೇತುವೆ (Morbi suspension bridge)ಕುಸಿತ ಭಾರೀ ದುರಂತವಾಗಿದೆ ಎಂದು ಸೋಮವಾರ ಹೇಳಿದ ಸರ್ವೋಚ್ಚ ನ್ಯಾಯಾಲಯವು,ಈ ಬಗ್ಗೆ ಈಗಾಗಲೇ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿರುವ ಗುಜರಾತ ಉಚ್ಚ ನ್ಯಾಯಾಲಯಕ್ಕೆ ನಿಯಮಿತವಾಗಿ ವಿಚಾರಣೆಗಳನ್ನು ನಡೆಸುವಂತೆ ಸೂಚಿಸಿತು.

ಇದೊಂದು ದೊಡ್ಡ ದುರಂತವಾಗಿದ್ದು,ಗುತ್ತಿಗೆ ನೀಡಿಕೆ,ಗುತ್ತಿಗೆ ಪಡೆದವರ ಅರ್ಹತೆ,ತಪ್ಪಿತಸ್ಥರ ಉತ್ತರದಾಯಿತ್ವ ಇತ್ಯಾದಿಗಳನ್ನು ಪರಿಶೀಲಿಸಲು ವಾರಕ್ಕೊಮ್ಮೆ ಮೇಲ್ವಿಚಾರಣೆಯ ಅಗತ್ಯವಿದೆ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (DY Chandrachud)ಮತ್ತು ನ್ಯಾ.ಹಿಮಾ ಕೊಹ್ಲಿ (Justice Hima Kohli)ಅವರ ಪೀಠವು,ಗುಜರಾತ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ನೇತೃತ್ವದ ಪೀಠವು ಈಗಾಗಲೇ ಘಟನೆಯನ್ನು ಸ್ವಯಂಪ್ರೇರಿತವಾಗಿ ಗಣನೆಗೆ ತೆಗೆದುಕೊಂಡಿರುವ ಮತ್ತು ಮೂರು ಆದೇಶಗಳನ್ನು ಹೊರಡಿಸಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ತಾನು ಅರ್ಜಿಗಳ ವಿಚಾರಣೆಯನ್ನು ನಡೆಸುವುದಿಲ್ಲ ಎಂದು ಹೇಳಿತು.

ಆದಾಗ್ಯೂ ಸರ್ವೋಚ್ಚ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರು ಮತ್ತು ದುರಂತದಲ್ಲಿ ತಮ್ಮ ಇಬ್ಬರು ಬಂಧುಗಳನ್ನು ಕಳೆದುಕೊಂಡಿರುವ ಇನ್ನೋರ್ವ ಅರ್ಜಿದಾರರಿಗೆ ಉಚ್ಚ ನ್ಯಾಯಾಲಯಕ್ಕೆ ತೆರಳಲು ಅನುಮತಿ ನೀಡಿತು. ಘಟನೆಯ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಹಾಗೂ ಮೃತರ ಕುಟುಂಬಗಳಿಗೆ ಗೌರವಾನ್ವಿತ ಪರಿಹಾರವನ್ನು ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರು ನಂತರ ತನ್ನನ್ನು ಸಂಪರ್ಕಿಸಬಹುದು ಎಂದೂ ಸರ್ವೋಚ್ಚ ನ್ಯಾಯಾಲಯವು ತಿಳಿಸಿತು.

 ಮೊರ್ಬಿಯಲ್ಲಿ ಮಚ್ಚು ನದಿಯ ಮೇಲೆ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾಗಿದ್ದ ತೂಗುಸೇತುವೆ ಅ.30ರಂದು ಕುಸಿದ ಪರಿಣಾಮ 47 ಮಕ್ಕಳು ಸೇರಿದಂತೆ 140ಕ್ಕೂ ಅಧಿಕ ಜನರು ಮೃತಪಟ್ಟಿದ್ದರು.

share
Next Story
X