Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೈತಿಕತೆ ಮತ್ತು ರಾಜಕೀಯ ಪ್ರತ್ಯೇಕ...

ನೈತಿಕತೆ ಮತ್ತು ರಾಜಕೀಯ ಪ್ರತ್ಯೇಕ ಭಾಗವಾಗಿ ಚಿತ್ರಿಸಿದ ಶೇಕ್ಸ್‌ಪಿಯರ್: ಪ್ರೊ.ಎನ್.ಮನು ಚಕ್ರವರ್ತಿ

21 Nov 2022 10:54 PM IST
share
ನೈತಿಕತೆ ಮತ್ತು ರಾಜಕೀಯ ಪ್ರತ್ಯೇಕ ಭಾಗವಾಗಿ ಚಿತ್ರಿಸಿದ ಶೇಕ್ಸ್‌ಪಿಯರ್: ಪ್ರೊ.ಎನ್.ಮನು ಚಕ್ರವರ್ತಿ

ಮಣಿಪಾಲ: ಶೇಕ್ಸ್‌ಪಿಯರ್ ತನ್ನ ದುರಂತ ನಾಟಕಗಳಲ್ಲಿ ತನ್ನ ಕಾಲದ ’ಸಾಮಾಜಿಕ ಜೀವನದಲ್ಲಿ ನೈತಿಕತೆ ಹೇಗೆ ಕ್ರಮೇಣ ಮಾಯವಾಗತೊಡಗಿತು ಎಂಬುದನ್ನು ತೋರಿಸಲು ಪ್ರಯತ್ನಿಸಿದ್ದಾನೆ; ನೈತಿಕತೆ ಮತ್ತು ರಾಜಕೀಯ ನಿಜ ಜಗತ್ತಿನಲ್ಲಿ ಎರಡು ಪ್ರತ್ಯೇಕ ಭಾಗಗಳು ಎಂದು ಅವನು ಚಿತ್ರಿಸಿದ್ದಾನೆ ಎಂದು ಖ್ಯಾತ ಸಂಸ್ಕೃತಿ ವಿಮರ್ಶಕ ಪ್ರೊ.ಎನ್.ಮನು ಚಕ್ರವರ್ತಿ ಹೇಳಿದ್ದಾರೆ.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ಆಯೋಜಿಸಿದ್ದ ‘ಶೇಕ್ಸ್‌ಪಿಯರ್ ಜಗತ್ತು’ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಪ್ರೊ. ಚಕ್ರವರ್ತಿ, ಶೇಕ್ಸ್‌ಪಿಯರ್ ತನ್ನ ನಾಟಕಗಳಲ್ಲಿ ಒಳಸಂಚು ಗಳು, ವಿಶ್ವಾಸಘಾತುಕತನ ಮತ್ತು ದ್ರೋಹಗಳಿಂದ ಒಳಗೊಂಡ ರಾಜಕೀಯ ಜಗತ್ತನ್ನು ಸೃಷ್ಟಿಸುತ್ತಾನೆ. ಅವನು ಪ್ರಜಾಪ್ರಭುತ್ವದ ಉದಯದ ಮುನ್ಸೂಚನೆಯ ಜೊತೆಗೆ ಅಹಿಂಸಾತ್ಮಕ ಪರ್ಯಾಯ ವಿಶ್ವ ದೃಷ್ಟಿಕೋನವನ್ನು ಬೆಂಬಲಿಸುತ್ತಾನೆ ಎಂದು ಅವರು ನುಡಿದರು.
ಒಂದರ್ಥದಲ್ಲಿ ಶೇಕ್ಸ್‌ಪಿಯರ್‌ನ ದುರಂತ ನಾಟಕಗಳ ಜಗತ್ತು ಮತ್ತು ಮಹಾಭಾರತದ ಕಥಾನಕವನ್ನು ಪರಸ್ಪರ ಹೋಲಿಸಬಹುದು ಎಂದು ತನ್ನ ಚಲನಚಿತ್ರ ಕುರಿತ ಕೃತಿಗೆ ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಪ್ರೊ. ಮನು ಚಕ್ರವರ್ತಿ ವಿವರಿಸಿದರು.

ಶೇಕ್ಸ್‌ಪಿಯರ್‌ನ ದುರಂತಗಳಲ್ಲಿ ಬ್ರೂಟಸ್ ಅತಿ ತಪ್ಪಾಗಿ ಅರ್ಥೈಸಲ್ಪಟ್ಟ ಪಾತ್ರ ಎಂದು ಪ್ರತಿಪಾದಿಸಿದ ಪ್ರೊ.ಚಕ್ರವರ್ತಿ, ಶೇಕ್ಸ್‌ಪಿಯರ್ ಸಮಕಾಲೀನ ಸಂದರ್ಭಕ್ಕೆ ಇತಿಹಾಸದಿಂದ ತಿಳುವಳಿಕೆಯನ್ನು ಎರವಲು ಪಡೆಯುತ್ತಿದ್ದನು ಎಂದು ಹೇಳಿದರು.

ಶೇಕ್ಸ್‌ಪಿಯರ ತನ್ನ ಸಾನೆಟ್‌ಗಳಲ್ಲಿ ಹಳೆ ತಲೆಮಾರಿನ ಆಸ್ಥಾನ ಕವಿಗಳಿಗೆ ಪ್ರತಿಕ್ರಿಯಿಸುತ್ತಾ, ಕಾವ್ಯದ ಭಾಷೆಯನ್ನೇ ನವೀಕರಿಸುತ್ತ ಹೋಗುತ್ತಾನೆ ಎಂದು ಪ್ರೊ.ಚಕ್ರವರ್ತಿ ಹೇಳಿದರು. ಜಿಸಿಪಿಎಎಸ್‌ನ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ, ಪ್ರೊ.ಫಣಿರಾಜ್ ಮುಂತಾದವರು ಚರ್ಚೆಯಲ್ಲಿ ಭಾಗವಹಿಸಿದರು.

ವಿದ್ಯಾರ್ಥಿಗಳಾದ ಆಲಿಸ್ ಚೌಹಾಣ್, ವೆಲಿಕ, ಚಿನ್ಮಯಿ ಬಾಲ್ಕರ್, ಆಕರ್ಷಿಕಾ ಸಿಂಗ್, ಸಾತ್ವಿಕ್ ಜೋಶಿ, ಶ್ರವಣ್ ಬಾಸ್ರಿ, ಶೇಕ್ಸ್‌ಪಿಯರ್‌ನ ಹಾಸ್ಯ ನಾಟಕಗಳ ಮೇಲೆ ಪ್ರಬಂಧಗಳನ್ನು ಮಂಡಿಸಿದರು.

share
Next Story
X