ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ದಲಿತರಿಗೆ ಡಿಸಿಎಂ ಪಟ್ಟ: ಎಚ್.ಡಿ.ಕುಮಾರಸ್ವಾಮಿ
ಕೋಲಾರ: 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬಹುಮತ ಬಂದರೆ ದಲಿತ ವ್ಯಕ್ತಿಗೆ ಡಿಸಿಎಂ ಪಟ್ಟ ನೀಡಲಾಗುವುದು'' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸೋಮವಾರ ನಡೆದ ಪಂಚರತ್ನ ಯೋಜನೆಯ ರಥಯಾತ್ರೆಯ ನಡುವೆ ತಾಲೂಕಿನ ನರಸಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ದಲಿತರನ್ನು ಗುರುತಿಸಿರುವುದಾಗಿ ರಾಷ್ಟ್ರೀಯ ಪಕ್ಷಗಳು ಹೇಳಿಕೊಳ್ಳುತ್ತಿವೆ. ಆದರೆ, ತಮ್ಮನ್ನು ಯಾವ ರೀತಿ ನಡೆಸಿಕೊಳ್ಳುತ್ತಿವೆ ಎಂಬುದು ಅವರಿಗೆ ಗೊತ್ತಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದಲಿತ ಸಮುದಾಯಕ್ಕೆ ವಿಶೇಷ ಕಾರ್ಯಕ್ರಮ ರೂಪಿಸುತ್ತೇವೆ'' ಎಂದು ತಿಳಿಸಿದರು.
Next Story