ಆಟೋ ಚಾಲಕನಿಗೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು: ದ.ಕ ಜಿಲ್ಲಾಧಿಕಾರಿ
ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣ

ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣ
ಮಂಗಳೂರು: ಮಂಗಳೂರು ಆಟೋರಿಕ್ಷಾ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಪರಿಹಾರ ನೀಡಲು ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ತಿಳಿಸಿದ್ದಾರೆ.
ಮಂಗಳೂರಿನ ನಾಗುರಿ ಬಳಿ ನಡೆದ ಸ್ಫೋಟದಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ನೋವು ಅನುಭವಿಸುವಂತಾಗಿದೆ. ಘಟನೆಯಿಂದ ಅವರು ದುಡಿಯುತ್ತಿದ್ದ ಆಟೋರಿಕ್ಷಾಕ್ಕೆ ಹಾನಿಯಾಗಿದೆ. ಜಿಲ್ಲಾಧಿಕಾರಿ ಮೂಲಕ ಸರಕಾರದ ವತಿಯಿಂದ ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಟೋರಿಕ್ಷಾ ಚಾಲಕ-ಮಾಲಕರ ಒಕ್ಕೂಟ ಒತ್ತಾಯಿಸಿತ್ತು.
Next Story