Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಆರ್ಥಿಕ ದುರ್ಬಲ ವರ್ಗಕ್ಕೆ 8 ಲಕ್ಷ...

'ಆರ್ಥಿಕ ದುರ್ಬಲ ವರ್ಗಕ್ಕೆ 8 ಲಕ್ಷ ರೂ.ಮಿತಿಯಾಗಿದ್ದರೆ, 2.5ಲಕ್ಷ ರೂ. ಇದ್ದವರು ಆದಾಯ ತೆರಿಗೆ ಏಕೆ ಕಟ್ಟಬೇಕು?'

ಅರ್ಜಿದಾರ

22 Nov 2022 4:55 PM IST
share
ಆರ್ಥಿಕ ದುರ್ಬಲ ವರ್ಗಕ್ಕೆ 8 ಲಕ್ಷ ರೂ.ಮಿತಿಯಾಗಿದ್ದರೆ, 2.5ಲಕ್ಷ ರೂ. ಇದ್ದವರು ಆದಾಯ ತೆರಿಗೆ ಏಕೆ ಕಟ್ಟಬೇಕು?
ಅರ್ಜಿದಾರ

ಹೊಸದಿಲ್ಲಿ,ನ.22: ಸರ್ವೋಚ್ಚ ನ್ಯಾಯಾಲಯವು ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲುಎಸ್)ಕ್ಕೆ ಸೇರಲು ವಾರ್ಷಿಕ ಎಂಟು ಲ.ರೂ.ಗಿಂತ ಕಡಿಮೆ ಆದಾಯವನ್ನು ನಿಗದಿಗೊಳಿಸಿರುವ ನಿರ್ಧಾರವನ್ನು ಎತ್ತಿ ಹಿಡಿದಿರುವಾಗ ಆದಾಯ ತೆರಿಗೆ ಸಂಗ್ರಹಕ್ಕೆ 2.5 ಲ.ರೂ.ಗಳು ಮೂಲ ವಾರ್ಷಿಕ ಆದಾಯವಾಗುವುದು ಹೇಗೆ ಸಾಧ್ಯ?

ಇದು ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ಅರ್ಜಿಯೊಂದರ ಕೇಂದ್ರವಾಗಿರುವ ಪ್ರಶ್ನೆಯಾಗಿದೆ. ಅರ್ಜಿಗೆ ಉತ್ತರಿಸುವಂತೆ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ ಸೂಚಿಸಿದೆ.ಮೇಲ್ಜಾತಿಗಳಲ್ಲಿಯ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿಯನ್ನು ಒದಗಿಸಿರುವ 103ನೇ ಸಂವಿಧಾನ ತಿದ್ದುಪಡಿ ಕಾಯ್ದೆಯನ್ನು ಸರ್ವೋಚ್ಚ ನ್ಯಾಯಾಲಯವು ನ.7ರಂದು 3:2 ಬಹುಮತದಿಂದ ಎತ್ತಿ ಹಿಡಿದಿತ್ತು.
ಇಡಬ್ಲುಎಸ್ ಕೋಟಾ ‘ಆರ್ಥಿಕವಾಗಿ ದುರ್ಬಲ’ವರ್ಗಕ್ಕೆ ಸೇರ್ಪಡೆಗೆ ಆದಾಯವನ್ನು ನಿರ್ಣಾಯಕ ಅಂಶವನ್ನಾಗಿ ಪರಿಗಣಿಸುತ್ತದೆ. ಆದಾಗ್ಯೂ ಅರ್ಜಿಯಲ್ಲಿ ಎತ್ತಿ ತೋರಿಸಿರುವಂತೆ ಕೋಟಾದೊಳಗಿನ ದೊಡ್ಡ ವಿಭಾಗವು ಆದಾಯ ತೆರಿಗೆಯನ್ನು ಪಾವತಿಸಬೇಕಾದ ಆದಾಯ ಸ್ತರದಲ್ಲಿದೆ.
 
ಅರ್ಜಿದಾರರಾಗಿರುವ ಕೃಷಿಕ ಹಾಗೂ ಡಿಎಂಕೆ ಸದಸ್ಯ ಕುನ್ನೂರ್ ಸೀನಿವಾಸನ್ ಅವರು ಹಣಕಾಸು ಕಾಯ್ದೆ,2022ರ ಮೊದಲ ಅನುಬಂಧದ ಭಾಗ 1ರ ಪ್ಯಾರಾ ಎ ಅನ್ನು ತೆಗೆಯುವಂತೆ ಕೋರಿದ್ದಾರೆ. ಈ ಭಾಗವು ಆದಾಯ ತೆರಿಗೆ ದರವನ್ನು ನಿಗದಿಗೊಳಿಸುತ್ತದೆ ಮತ್ತು ಇದರಂತೆ 2.5 ಲ.ರೂ.ಗಿಂತ ಕಡಿಮೆ ಒಟ್ಟು ವಾರ್ಷಿಕ ಆದಾಯವನ್ನು ಹೊಂದಿರುವವರು ತೆರಿಗೆಯನ್ನು ಪಾವತಿಸಬೇಕಿಲ್ಲ. ಈ ಭಾಗವು ಈಗ ಸಂವಿಧಾನದ 14,15,16,21 ಮತ್ತು 265ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಸೀನಿವಾಸನ್ ಅರ್ಜಿಯಲ್ಲಿ ಬೆಟ್ಟು ಮಾಡಿದ್ದಾರೆ.ಡಿಎಂಕೆಯ ಆಸ್ತಿ ಸಂರಕ್ಷಣಾ ಮಂಡಳಿಯ ಸದಸ್ಯರಾಗಿರುವ 82ರ ಹರೆಯದ ಸೀನಿವಾಸನ್,2.5 ಲ.ರೂ.ಆದಾಯವಿರುವ ವ್ಯಕ್ತಿಯಿಂದ ತೆರಿಗೆಯನ್ನು ಸಂಗ್ರಹಿಸುವುದು ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದಾರೆ.

ಸರಕಾರವು ಇಡಬ್ಲುಎಸ್ ಮೀಸಲಾತಿಯಲ್ಲಿ ಸೇರ್ಪಡೆಗೆ ಎಂಟು ಲ.ರೂ.ಗೂ ಕಡಿಮೆ ಒಟ್ಟು ವಾರ್ಷಿಕ ಆದಾಯವನ್ನು ನಿಗದಿಗೊಳಿಸಿರುವುದರಿಂದ ಆದಾಯ ತೆರಿಗೆಗಾಗಿ ಆದಾಯ ಸ್ತರವನ್ನೂ ಹೆಚ್ಚಿಸಬೇಕು. ಸಮಾಜದ ಇತರ ವರ್ಗಗಳಿಗೂ ಇದೇ ಅಳತೆಗೋಲನ್ನು ಅನ್ವಯಿಸಬೇಕು. ವಾರ್ಷಿಕ 7,99,999 ರೂ.ವರೆಗೆ ಆದಾಯ ಹೊಂದಿರುವ ವ್ಯಕ್ತಿಯಿಂದ ಸರಕಾರವು ಆದಾಯ ತೆರಿಗೆಯನ್ನು ಸಂಗ್ರಹಿಸಬಾರದು. ಇಂತಹವರಿಂದ ತೆರಿಗೆ ವಸೂಲು ಮಾಡುವುದರಲ್ಲಿ ಯಾವುದೇ ವೈಚಾರಿಕತೆ ಮತ್ತು ಸಮಾನತೆ ಇಲ್ಲ ಎಂದು ಸೀನಿವಾಸನ್ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ.
ಕೇಂದ್ರ ಕಾನೂನು ಮತ್ತು ನ್ಯಾಯ,ಹಣಕಾಸು,ಸಿಬ್ಬಂದಿ,ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯಗಳಿಗೆ ನೋಟಿಸ್ ಹೊರಡಿಸಿರುವ ನ್ಯಾಯಮೂರ್ತಿಗಳಾದ ಆರ್.ಮಹಾದೇವನ್ ಮತ್ತು ನಾರಾಯಣ ಪ್ರಸಾದ ಅವರ ಪೀಠವು ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. 

share
Next Story
X