Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ...

30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

22 Nov 2022 5:07 PM IST
share
30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು, ನ.22: ಭೂ ಒತ್ತುವರಿದಾರರ ವಿರುದ್ಧದ ದಾಳಿಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಸುಮಾರು 30 ಕೋಟಿ ರೂಪಾಯಿ ಮೌಲ್ಯದ 22 ಗುಂಟೆ ಜಾಗವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.

ಜೆಪಿ ನಗರ 9ನೆ ಹಂತದ 1ನೆ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ 22 ಗುಂಟೆ ಜಾಗ ಬಿಡಿಎಗೆ ಸೇರಿದ್ದಾಗಿತ್ತು. ಆದರೆ, ಕೆಲವು ಅತಿಕ್ರಮಣದಾರರು ಸದರಿ ಜಾಗದಲ್ಲಿ ಕಳೆದ ಹತ್ತು ವರ್ಷಗಳಿಂದ ತಾತ್ಕಾಲಿಕ್ ಶೆಡ್ ಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.

ಇತ್ತೀಚೆಗೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸದರಿ ಜಾಗ ಸೇರಿದಂತೆ ಇನ್ನಿತರೆ ಒತ್ತುವರಿ ಮತ್ತು ಬಿಡಿಎ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ, ಕೂಡಲೇ ಇಂತಹ ಜಾಗಗಳನ್ನು ಮರುವಶಕ್ಕೆ ಪಡೆದುಕೊಳ್ಳಬೇಕೆಂದು ಬಿಡಿಎ ಅಧಿಕಾರಿಗಳು ಮತ್ತು ಎಂಜಿನಿಯರ್ ಗಳಿಗೆ ಸೂಚನೆ ನೀಡಿದ್ದರು.

ಅದರನ್ವಯ ಮಂಗಳವಾರ ಬಿಡಿಎ ಆಯುಕ್ತರ ಆದೇಶ ಪಡೆದ ಬಿಡಿಎ ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿ ನಂಜುಂಡೇಗೌಡ ಮತ್ತು ಪೊಲೀಸ್ ಅಧಿಕಾರಿಗಳಾದ ರವಿಕುಮಾರ್, ಶ್ರೀನಿವಾಸ್ ಹಾಗೂ ಎಂಜಿನಿಯರ್ ಅಶೋಕ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ 6 ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಲಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಈ ಹಿಂದೆ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಣದಾಸೆಗೆ ಬಿದ್ದು ಪ್ರಭಾವಿಗಳು ಮತ್ತು ಭೂ ಕಬಳಿಕೆದಾರರಿಗೆ ನಕಲಿ ಎನ್‍ಒಸಿಗಳನ್ನು ಕೊಟ್ಟು ಬಿಡಿಎ ಜಾಗವನ್ನು ಅತಿಕ್ರಮಣವಾಗುವಂತೆ ಮಾಡಿದ್ದರು. ಇದೀಗ ಇಂತಹ ನಕಲಿ ಎನ್‍ಒಸಿ ಪ್ರಕರಣಗಳನ್ನು ಬಯಲಿಗೆ ತರಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿ ತಪ್ಪೆಸಗಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದರು. 

ಅದೇ ರೀತಿ, ನಕಲಿ ಎನ್‍ಒಸಿ ಬಳಸಿಕೊಂಡು ಬಿಡಿಎ ಜಾಗವನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿರುವ ಕಬಳಿಕೆದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. ನಕಲಿ ಎನ್‍ಒಸಿ ಅಥವಾ ನಕಲಿ ದಾಖಲೆಗಳನ್ನು ಇಟ್ಟುಕೊಂಡು ಬಿಡಿಎ ಜಾಗದ ಮೇಲೆ ಹಿಡಿತ ಸಾಧಿಸುತ್ತಿರುವವರು ಕೂಡಲೇ ಅಂತಹ ದಾಖಲೆಗಳನ್ನು ನೀಡಿ ಬಿಡಿಎ ಜಾಗವನ್ನು ಬಿಟ್ಟುಕೊಡಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದೂ ವಿಶ್ವನಾಥ್ ಎಚ್ಚರಿಕೆ ನೀಡಿದರು. ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಡಿಎ ಜಾಗದಲ್ಲಿ ಹಿಡಿತ ಸಾಧಿಸುತ್ತಿರುವ ಭೂ ಕಬಳಿಕೆದಾರರ ಬಗ್ಗೆ ಮಾಹಿತಿ ಮತ್ತು ದಾಖಲೆಗಳಿದ್ದರೆ ಬಿಡಿಎ ಅಧ್ಯಕ್ಷರು, ಆಯುಕ್ತರು ಮತ್ತು ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿರುವ ವಿಶ್ವನಾಥ್, ಹೀಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಟ್ಟು, ತನಿಖೆ ನಡೆಸಿ ಅಂತಹ ಜಾಗಗಳನ್ನು ವಶಕ್ಕೆ ಪಡೆದು, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

share
Next Story
X