Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರುದ್ಯೋಗಿ ಯುವ ಜನರಿಗೆ 210 ಕೋಟಿ...

ನಿರುದ್ಯೋಗಿ ಯುವ ಜನರಿಗೆ 210 ಕೋಟಿ ರೂ.ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆ: ಕೋಟ ಶ್ರೀನಿವಾಸ ಪೂಜಾರಿ

22 Nov 2022 6:40 PM IST
share
ನಿರುದ್ಯೋಗಿ ಯುವ ಜನರಿಗೆ 210 ಕೋಟಿ ರೂ.ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು, ನ.22: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರವಾಹನ ನೀಡುವ ಗುರಿ ಹೊಂದಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿ ಉಡುಪಿಯ ಆದರ್ಶ ನಸಿರ್ಂಗ್ ಹೋಂ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರ ಅಲ್ಲಿಂದಲೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಎಲ್ಲ ನಿಗಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಫಲಾನುಭವಿಗಳನ್ನು ಶೀಘ್ರವೇ ಆಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಈ ಯೋಜನೆ ಅನುಷ್ಠಾನಕ್ಕಾಗಿ 210 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನ ವಿತರಣೆ ಗುರಿ ಹೊಂದಲಾಗಿದೆ. ಮೀನು ಮಾರಾಟ, ಬಟ್ಟೆ ವ್ಯಾಪಾರ ಸೇರಿದಂತೆ ಸರಕು ದ್ವಿಚಕ್ರ ವಾಹನಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಅರ್ಹ ಫಲಾನುಭವಿಗಳು ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದರು.

ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ. ನಿಗದಿಗೊಳಿಸಲಾಗಿದ್ದು 50 ಸಾವಿರ ರೂ. ಸಬ್ಸಿಡಿ ಹಾಗೂ 20 ಸಾವಿರ ರೂ. ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ. ಫಲಾನುಭವಿ ತಮಗೆ ಅನುಕೂಲವಾಗುವ ಯಾವುದೇ ಕಂಪನಿಯ ದ್ವಿಚಕ್ರ ವಾಹನ ಖರೀದಿಸಬಹುದು ಎಂದು ಶ್ರೀನಿವಾಸ ಪೂಜಾರಿ ತಿಳಿಸಿದರು.

ಈಗಾಗಲೇ ಆನ್ ಲೈನ್ ಮೂಲಕ ಆಹ್ವಾನಿಸಲಾದ ಅರ್ಜಿಗಳಲ್ಲಿ ಈವರೆಗೆ 8432 ಅರ್ಜಿಗಳು ಬಂದಿದ್ದು ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ಸಿಗಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ಸುತ್ತೋಲೆ ಕಳುಹಿಸುವಂತೆ ಹಾಗೂ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಅವರು ತಿಳಿಸಿದರು.

ಗಂಗಾಕಲ್ಯಾಣ ಯೋಜನೆ ಅನುಷ್ಠಾನ ಸಂಬಂಧ ಈಗಾಗಲೇ ಫಲಾನುಭವಿಗಳಿಂದ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಮುಗಿದಿದ್ದು, ಶೀಘ್ರವೇ ಸಂಬಂಧಿಸಿದ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಮ್ಮ ಜಿಲ್ಲೆಯ ಆಯಾ ಕ್ಷೇತ್ರ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ಕರೆದು ನ.30ರೊಳಗೆ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಬೇಕೆಂದು ಶ್ರೀನಿವಾಸ ಪೂಜಾರಿ ಸೂಚಿಸಿದರು.

ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡುವ ಬಗ್ಗೆ ಕೆಲವು ದೂರುಗಳು ಕೇಳಿಬರುತ್ತಿದ್ದು ಅದನ್ನು ತಕ್ಷಣ ಸರಿಪಡಿಸುವಂತೆ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್, ಸಲಹೆಗಾರ ಇ.ವೆಂಕಟಯ್ಯ, ಆಯುಕ್ತ ಡಾ.ಕೆ.ರಾಕೇಶ್‍ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ.ದಯಾನಂದ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಉದಯಕುಮಾರ್ ಶೆಟ್ಟಿ ಸೇರಿದಂತೆ ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.

share
Next Story
X