ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿ, ಗೋಮೂತ್ರದಿಂದ 'ಶುದ್ಧೀಕರಿಸಿದ' ಪ್ರಕರಣ: ಆರೋಪಿಯ ಬಂಧನ
ಚಾಮರಾಜನಗರ: ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಕಿರು ನೀರು ಸರಬರಾಜು ಘಟಕದ ನೀರು ಖಾಲಿ ಮಾಡಿ ಶುದ್ಧೀಕರಣ ಮಾಡಿದ ಪ್ರಕರಣದ ಆರೋಪಿ ಮಹದೇವಪ್ಪ ಅವರನ್ನು ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಆರೋಪಿಯ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆರೋಪಿಯ ಬಂಧನವಾಗಿರುವುದರಿಂದ ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.
'ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹೀಗಾಗಿ ಪ್ರತಿಭಟನೆ ಕೈ ಬಿಟ್ಟಿದ್ದೇವೆ. ಗ್ರಾಮದಲ್ಲಿ ಇನ್ನೂ ಸಮಸ್ಯೆಗಳಿವೆ. ಅದನ್ನು ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಿದ್ದೇವೆ' ಎಂದು ಹೆಗ್ಗೋಠಾರ ಗ್ರಾಮದ ಪರಿಶಿಷ್ಟ ಸಮುದಾಯದ ಮುಖಂಡ ಕುಮಾರ್ ಹೇಳಿದರು.
Next Story