ಬಜ್ಪೆಯಲ್ಲಿ ಯುನಿವೆಫ್ ಸೀರತ್ ಸಮಾವೇಶ

ಮಂಗಳೂರು : ಯುನಿವೆಫ್ ಕರ್ನಾಟಕದ ‘ಮಾನವ ಸಮಾಜ, ಸಂಸ್ಕೃತಿ ಮತ್ತು ಪ್ರವಾದಿ ಮುಹಮ್ಮದ್ (ಸ)’ ಎಂಬ ಕೇಂದ್ರೀಯ ವಿಷಯದಲ್ಲಿ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಪ್ರಯುಕ್ತ ಬಜ್ಪೆಯಲ್ಲಿ ಸೀರತ್ ಸಮಾವೇಶ ನಡೆಯಿತು.
ಕಾರ್ಯಕ್ರಮದಲ್ಲಿ ‘ನಮ್ಮ ಜೀವನ ಮತ್ತು ಪ್ರವಾದಿ (ಸ)ರ ಬೋಧನೆಗಳು’ ಎಂಬ ವಿಷಯದಲ್ಲಿ ಮುಖ್ಯ ಭಾಷಣ ಮಾಡಿದ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ‘ಸಮಾಜದ ದೀನರ, ದಲಿತರ, ಶೋಷಿತರ ಪರವಾಗಿ ಇಲ್ಲಿಯ ಪ್ರಜ್ಞಾವಂತ ನಾಗರಿಕರು ನಿಲ್ಲಬೇಕು. ಬಡವರ ಬೇಕುಬೇಡಗಳನ್ನು ಪರಿಗಣಿಸಬೇಕು. ಅವರ ಉದ್ಧಾರದ ಕನಸು ಸದಾ ನಮ್ಮಲ್ಲಿರಬೇಕು. ಇದು ಪ್ರವಾದಿಯ (ಸ) ಬದುಕಿನ ನೈಜ ಸಂದೇಶವಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಸ್ಥಳೀಯರಾದ ಹಾಜಿ ಮುಹಮ್ಮದ್ ಭಾಗವಹಿಸಿದ್ದರು. ಯುನಿವೆಫ್ ಬಜ್ಪೆ ಶಾಖೆಯ ಅಧ್ಯಕ್ಷ ಅಬ್ದುರ‌್ರಹ್ಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಹಮ್ಮದ್ ಅರೀಝ್ ಕಿರಾಅತ್ ಪಠಿಸಿದರು. ಜಿಲ್ಲಾಧ್ಯಕ್ಷ ನೌಫಲ್ ಹಸನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಸಂಚಾಲಕ ಆಸಿಫ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿದರು.