Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರೇಶ್ ಮೇಸ್ತಾ ಸಹಜ ಸಾವನ್ನು ಕೊಲೆ ಎಂದು...

ಪರೇಶ್ ಮೇಸ್ತಾ ಸಹಜ ಸಾವನ್ನು ಕೊಲೆ ಎಂದು ಬಿಂಬಿಸಿದ್ದ ಸಂಸದ, ಶಾಸಕರು ರಾಜೀನಾಮೆ ನೀಡಲಿ: ಐವನ್ ಡಿಸೋಜಾ

22 Nov 2022 10:39 PM IST
share
ಪರೇಶ್ ಮೇಸ್ತಾ ಸಹಜ ಸಾವನ್ನು ಕೊಲೆ ಎಂದು ಬಿಂಬಿಸಿದ್ದ ಸಂಸದ, ಶಾಸಕರು ರಾಜೀನಾಮೆ ನೀಡಲಿ: ಐವನ್ ಡಿಸೋಜಾ

ಭಟ್ಕಳ : ಹೊನ್ನಾವರದ ಪರೇಶ ಮೇಸ್ತಾ ಅವರ ಸಹಜ ಸಾವಿನ ಪ್ರಕರಣವನ್ನು ಕೊಲೆ ಎಂದು ಬಿಂಬಿಸಿ ರಾಜಕೀಯ ಲಾಭ ಪಡೆದು ಚುನಾವಣೆಯಲ್ಲಿ ಆರಿಸಿ ಬಂದಿದ್ದ ಬಿ.ಜೆ.ಪಿ. ಶಾಸಕರು, ಸಂಸದರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಕೆ.ಪಿ.ಸಿ.ಸಿ. ಉಪಾಧ್ಯಕ್ಷ ಐವನ್ ಡಿಸೋಜ ಅವರು ಆಗ್ರಹಿಸಿದರು. 

ಭಟ್ಕಳದ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಣೆಯಾಗಿದ್ದ ಪರೇಶ ಮೇಸ್ತ ಎರಡು ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದನ್ನೇ ಚುನಾವಣಾ ಬಂಡವಾಳವನ್ನಾಗಿಸಿಕೊಂಡ ಬಿ.ಜೆ.ಪಿ. ಐವರು ಮುಸ್ಲೀಮರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸುತ್ತದೆ. ಅಂದಿನ ಮುಖ್ಯ ಮಂತ್ರಿ ಸಿ.ಓ.ಡಿ.ಗೆ ಪ್ರಕರಣ ಹಸ್ತಾಂತರ ಮಾಡಿದ್ದನ್ನು ವಿರೋಧಿಸಿ ನಮಗೆ ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ, ನಾವೇನಿದ್ದರೂ ಸಿ.ಬಿ.ಐ. ಮೇಲೆ ನಂಬಿಕೆ ಇದ್ದವರು ಸಿ.ಬಿ.ಐ. ತನಿಖೆಯೇ ಆಗಬೇಕು ಎಂದು ಆಗ್ರಹಿಸಿ ಸಿ.ಬಿ.ಐ. ತನಿಖೆಗೆ ಒಪ್ಪಿಸಲಾಗಿತ್ತು. ಆದರೆ ಇಂದು ಸಿ.ಬಿ.ಐ. ಇವರ ಪರವಾಗಿ ವರದಿಕೊಡಲಿಲ್ಲ ಎನ್ನುವ ಕಾರಣಕ್ಕೆ ಸಿ.ಬಿ.ಐ. ತನಿಖೆಯ ಮೇಲೆಯೇ ನಂಬಿಕೆ ಇಲ್ಲ ಎನ್ನುವ ಬಿ.ಜೆ.ಪಿ. ಬಣ್ಣ ಬಟಬಯಲಾಗಿದೆ ಎಂದರು.

ಅಂದು ಸಹಜ ಸಾವನ್ನು ಕೊಲೆ ಎಂದು ಬಿಂಬಿಸಿ ಜಿಲ್ಲೆಯಲ್ಲಿ ಕೋಮುಗಲಭೆ ಸೃಷ್ಟಿಸಿ 2082 ಜನರ ಮೇಲೆ 67 ಪ್ರಕರಣಗಳು ದಾಖಲಾದುವು. 361 ಜನರನ್ನು ಬಂಧಿಸಲಾಗಿತ್ತು,  272 ಜನರ ಮೇಲೆ ರೌಡಿ ಶೀಟ್ ತೆರೆಲಾಗಿದೆ. ಪೊಲೀಸ್ ಇಲಾಖೆ 1699 ಜನರ ಮೇಲೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದೆ ಇದೆಲ್ಲವೂ ಇವರು ಚುನಾವಣೆಯಲ್ಲಿ ಗೆಲ್ಲಲಿಕ್ಕಾಗಿ ಮಾಡಿದ ದುಷ್ಕೃತ್ಯವಾಗಿದ್ದು ಈಗ ಎಲ್ಲರೂ ಬಾಯಿ ಮುಚ್ಚಿ ಕುಳಿತಿದ್ದಾರೆ ಎಂದು ಹೇಳಿದರು.

ನ.24ರಂದು ಬೃಹತ್ ಸಮಾವೇಶ: ನ.24ರಂದು ಕುಮಟಾದ ಮಣಕಿ ಮೈದಾನದಲ್ಲಿ ಬಿ.ಜೆ.ಪಿ. ದ್ವಂದ್ವ ನೀತಿಯನ್ನು ಜನತೆಗೆ ತಿಳಿಸಲು ಹಾಗೂ ರಾಜ್ಯ-ಕೇಂದ್ರ ಸರಕಾರಗಳ ವೈಫಲ್ಯವನ್ನು ಜನರ ಮುಂದಿಡಲು ಬೃಹತ್ ಸಮಾವೇಶ ಹಮ್ಮಿಕೊಳ್ಳಳಾಗಿದ್ದು ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್,  ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿಗಳು, ಶಾಸಕರು, ಸಂಸದರು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ಎಂ. ನಾಯ್ಕ, ಮಾಜಿ ಶಾಸಕ ಜೆ.ಡಿ. ನಾಯ್ಕ, ಭಟ್ಕಳ ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶಿಮಜಿ, ಟಿ.ಡಿ.ನಾಯ್ಕ, ಸತೀಶ ನಾಯ್ಕ, ಸಂತೋಷ ನಾಯ್ಕ, ಖೈಸರ್ ಮೊಹತೆಶಂ, ಸುಲೇಮಾನ್ ಸಾಬ್, ಮಹಾಬಲೇಶ್ವರ ನಾಯ್ಕ, ನಾರಾಯಣ ನಾಯ್ಕ, ಮಂಜು ನಾಯ್ಕ, ಗಣಪತಿ ನಾಯ್ಕ ಜಾಲಿ, ಮಹೇಶ ನಾಯ್ಕ, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
Next Story
X