ಮಂಗಳೂರು : ನ. 24ರಿಂದ ಕಾಂಗ್ರೆಸ್ ಸೇವಾದಳದ ಜಿಲ್ಲಾ ಮಟ್ಟದ ತರಬೇತಿ ಶಿಬಿರ

ಮಂಗಳೂರು : ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳ ವತಿಯಿಂದ ಜಿಲ್ಲಾ ಮಟ್ಟದ ತರಬೇತಿ ಶಿಬಿರವು ನ.24 ರಿಂದ 26ರತನಕ ಪಿಲಿಕುಲದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ನಡೆಯಲಿದೆ.
ಕೆಪಿಸಿಸಿ ಸೇವಾದಳದ ರಾಜ್ಯಾಧ್ಯಕ್ಷ ಎಂ. ರಾಮಚಂದ್ರ ಧ್ವಜಾರೋಹಣ ಗೈಯಲಿದ್ದು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸುವರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಂಸದ ಬಿ.ಇಬ್ರಾಹಿಂ, ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಪಕ್ಷದ ಮುಖಂಡ ಡಾ.ರಘು, ಸೇವಾದಳದ ಉಸ್ತುವಾರಿಗಳಾದ ಸಮೀರ್ ಪಜೀರ್, ತೆರೆಸಾ ವಿಕ್ಟರ್ ಭಾಗವಹಿಸುವರು.
ನ.26 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ವಸಂತ ಬಂಗೇರ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಪಿ.ವಿ.ಮೋಹನ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮೊದಲಾದವರು ಭಾಗವಹಿಸುವರು ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿ'ಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.