Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ...

ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ನೇಮಕಾತಿಗೆ ಸಂಬಂಧಿಸಿದ ಕಡತ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

23 Nov 2022 7:03 PM IST
share
ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ನೇಮಕಾತಿಗೆ ಸಂಬಂಧಿಸಿದ ಕಡತ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ: ನವೆಂಬರ್ 19 ರಂದು ನೇಮಕಗೊಂಡ ಚುನಾವಣಾ ಆಯುಕ್ತ (Election Commissioner) ಅರುಣ್ ಗೋಯೆಲ್ (Arun Goel) ಅವರ ನೇಮಕಾತಿಗೆ ಸಂಬಂಧಿಸಿದ ಕಡತವನ್ನು ತನ್ನ ಮುಂದೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 

ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆಯ ಕುರಿತು ಕೆಲವು ತೀಕ್ಷ್ಣವಾದ ಪ್ರತಿಕ್ರಿಯೆ ಮತ್ತು ಪ್ರಶ್ನೆಗಳನ್ನಿಟ್ಟಿದ್ದು, ಈ ಕುರಿತ ವಿಚಾರಣೆ ಗುರುವಾರವೂ ಮುಂದುವರಿಯಲಿದೆ.

ಅರುಣ್‌ ಗೋಯೆಲ್‌ ರನ್ನು ಇತ್ತೀಚೆಗೆ ಸ್ವಯಂ ನಿವೃತ್ತಿ ನೀಡಿದ ತಕ್ಷಣ ಚುನಾವಣಾ ಸಂಸ್ಥೆಗೆ ನೇಮಕ ಮಾಡಲಾಗಿರುವ ಹಿನ್ನೆಲೆಯಲ್ಲಿ, ಈ ನೇಮಕಾತಿಯಲ್ಲಿ ಯಾವುದೇ "ಸಂದೇಹಾಸ್ಪದ ಸಂಗತಿ" ನಡೆದಿದೆಯೇ ಎಂದು ತಿಳಿಯಲು ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಬಯಸಿದೆ.

ಅರುಣ್ ಗೋಯೆಲ್ ಅವರ ನೇಮಕವನ್ನು ವಕೀಲ ಪ್ರಶಾಂತ್ ಭೂಷಣ್ ಅವರು ಪ್ರಕ್ರಿಯೆಯ ಮೇಲಿನ ಅರ್ಜಿಗಳ ಬ್ಯಾಚ್ ವಿಚಾರಣೆಯ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದರು. ಇತ್ತೀಚೆಗಷ್ಟೇ ನಿವೃತ್ತರಾದ ಐಎಎಸ್ ಅಧಿಕಾರಿ ಗೋಯೆಲ್ ಅವರನ್ನು ಮೂರು ಸದಸ್ಯರ ಚುನಾವಣಾ ಆಯೋಗದ ಭಾಗವಾಗಿ ಮಾಡಲಾಗಿದೆ ಎನ್ನುವುದನ್ನು ಭೂಷಣ್ ನ್ಯಾಯಾಲಯಕ್ಕೆ ತಿಳಿಸಿದ್ದರು. 

"ಅರುಣ್ ಗೋಯೆಲ್ ಅವರು ಗುರುವಾರದವರೆಗೆ, ಸರ್ಕಾರದಲ್ಲಿ ಕಾರ್ಯದರ್ಶಿ ಮಟ್ಟದ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ, ಶುಕ್ರವಾರ ಅವರಿಗೆ VRS ನೀಡಲಾಯಿತು ಮತ್ತು ಚುನಾವಣಾ ಆಯುಕ್ತರಾಗಿ ನೇಮಿಸಲಾಯಿತು," ಎಂದು ಪ್ರಶಾಂತ್ ಭೂಷಣ್ ಹೇಳಿದರು. ವಿಆರ್‌ಎಸ್‌ ಇಲ್ಲದಿದ್ದರೆ ಅವರು ಡಿಸೆಂಬರ್ 31 ರಂದು 60 ನೇ ವಯಸ್ಸಿನಲ್ಲಿ ನಿವೃತ್ತಿ ಹೊಂದಬೇಕಿತ್ತು.

ಸರ್ಕಾರಿ ವಕೀಲರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ಆಕ್ಷೇಪಣೆಗಳನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಅವರು ವೈಯಕ್ತಿಕ ನಿದರ್ಶನಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.

"ಯಾವ ಕಾರ್ಯವಿಧಾನ ಎಂಬುದನ್ನು ನಾವು ನೋಡಬಯಸುತ್ತೇವೆ. ನಾವು ಅದನ್ನು ಎದುರಾಳಿಯಾಗಿ ಪರಿಗಣಿಸುವುದಿಲ್ಲ ಮತ್ತು ಅದನ್ನು ನಮ್ಮ ದಾಖಲೆಗಾಗಿ ಇಡುವುದಿಲ್ಲ, ಆದರೆ ಎಲ್ಲವನ್ನೂ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನಿಮಗೆ ನಾಳೆಯವರೆಗೆ ಸಮಯವಿದೆ" ಎಂದು ನ್ಯಾಯಾಲಯವು ಹೇಳಿದೆ.

share
Next Story
X