ಪಕ್ಷದ ಕಾರ್ಯಕರ್ತರ ಪ್ರತಿಭಟನೆ, ಮೊಕದ್ದಮೆ ಮಾಹಿತಿ ಸಂಗ್ರಹಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೂಚನೆ
ಬೆಂಗಳೂರು, ನ.23: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಳೆದ ಮೂರು ವರ್ಷಗಳಲ್ಲಿ ಯಾವ, ಯಾವ ಹೋರಾಟ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಸಂಶೋಧನೆ ವಿಭಾಗಕ್ಕೆ ಸೂಚನೆ ನೀಡಿದ್ದಾರೆ.
ಇಲ್ಲಿ ನಾಯಕರೂ ಕಾರ್ಯಕರ್ತರೇ. ಕಾರ್ಯಕರ್ತರೂ ನಾಯಕರೇ. ಪ್ರತಿಯೊಬ್ಬ ಕಾರ್ಯಕರ್ತರು ಯಾವ, ಯಾವ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ, ಯಾರ ವಿರುದ್ಧ ಯಾವ, ಯಾವ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ ಎಂಬುದರ ವಿವರ ಸಂಗ್ರಹಿಸುವಂತೆ ಕೆಪಿಸಿಸಿ ರಿಸರ್ಚ್ ತಂಡಕ್ಕೆ ಸೂಚನೆ ನೀಡಿರುವುದಾಗಿ ಶಿವಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story