Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಮಾನದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕನಿಗೆ...

ವಿಮಾನದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕನಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿದ ಡಾ. ತಾಜೀಶ್ ಫಾತಿಮಾ

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ

23 Nov 2022 8:34 PM IST
share
ವಿಮಾನದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕನಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿದ ಡಾ. ತಾಜೀಶ್ ಫಾತಿಮಾ
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ

ಮಂಗಳೂರು, ನ.23: ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರಿಗೆ ಮಂಗಳೂರಿನ ವೈದ್ಯೆ ಡಾ. ತಾಜೀಶ್ ಫಾತಿಮಾ ಸಕಾಲದಲ್ಲಿ ಚಿಕಿತ್ಸೆ ನೀಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ವೈದ್ಯೆಯ ಈ ಸೇವೆ, ಸಮಯ ಪ್ರಜ್ಞೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಮಂಗಳವಾರ ಸಂಜೆ 4:20ಕ್ಕೆ ದುಬೈಯಿಂದ ಹೊರಡಬೇಕಿದ್ದ ಸ್ಪೈಸ್ ಜೆಟ್ ವಿಮಾನವು ಕಾರಣಾಂತರದಿಂದ ರಾತ್ರಿ 7:20ಕ್ಕೆ ಹೊರಟಿತ್ತು. ಸುಮಾರು 8:30ರ ವೇಳೆಗೆ ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡಿದ್ದು, ವೈದ್ಯರಿದ್ದರೆ ಪರೀಕ್ಷಿಸುವಂತೆ ಪೈಲಟ್ ಸೂಚನೆ ಹೊರಡಿಸಿದರು. ಅದೇ ವಿಮಾನದಲ್ಲಿ ಮಂಗಳೂರಿನ ಕುಲಶೇಖರದ ವೈದ್ಯೆ ಡಾ. ತಾಜೀಶ್ ಕೂಡ ಪ್ರಯಾಣಿಸುತ್ತಿದ್ದರು. ತಕ್ಷಣ ಡಾ. ತಾಜೀಶ್ ಅಸ್ವಸ್ಥಗೊಂಡಿದ್ದ ಪ್ರಯಾಣಿಕನ ನೆರವಿಗೆ ಧಾವಿಸಿದರಲ್ಲದೆ  ಸಹ ಪ್ರಯಾಣಿಕರ ಸಹಾಯದಿಂದ ಚಿಕಿತ್ಸೆ ನೀಡಿದರು. ಕೆಲವೇ ನಿಮಿಷದಲ್ಲಿ ಪ್ರಯಾಣಿಕ ಚೇತರಿಸಿಕೊಂಡರು ಎನ್ನಲಾಗಿದೆ.

ವೈದ್ಯೆ ಡಾ. ತಾಜೀಶ್ ಫಾತಿಮಾ ಅವರ ಈ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದಾಡುತ್ತಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಡಾ. ತಾಜೀಶ್ ‘ನಿನ್ನೆ ರಾತ್ರಿ ನಾನು ಸ್ಪೈಸ್ ಜೆಟ್ ವಿಮಾನದಲ್ಲಿ ದುಬೈಯಿಂದ ಮಂಗಳೂರಿಗೆ ಬರುವಾಗ ಹಿಂದಿ ಮಾತನಾಡುವ ಸುಮಾರು 40 ವರ್ಷ ಪ್ರಾಯದ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಬಗ್ಗೆ ಪೈಲಟ್‌ನಿಂದ ಮಾಹಿತಿ ಸಿಕ್ಕಿತು. ತಕ್ಷಣ ನಾನು ಧಾವಿಸಿ ಚಿಕಿತ್ಸೆ ನೀಡಿದೆ. ಚೇತರಿಸಿಕೊಂಡ ಬಳಿಕ ಅವರ ಕಣ್ತುಂಬಿ ಬಂತು. ಕೃತಜ್ಞತಾ ಭಾವ ಎದ್ದು ಕಾಣುತ್ತಿತ್ತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಸಂಗತಿ ಹರಿದಾಡುತ್ತಿದೆ. ಸಮಾಜ ಸೇವೆಯಲ್ಲಿ ಈ ಹಿಂದೆಯೇ ತೊಡಗಿಸಿಕೊಂಡಿದ್ದ ನನಗೆ ಪ್ರಯಾಣಿಕನೊಬ್ಬನ ಪ್ರಾಣ ಉಳಿಸಿದ ಖುಷಿಯೊಂದಿಗೆ ನನ್ನ ಕರ್ತವ್ಯ ನಿಭಾಯಿಸಿದ ತೃಪ್ತಿ ಇದೆ’ ಎಂದಿದ್ದಾರೆ.

share
Next Story
X