Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘ಕೃಷ್ಣಭಾಗ್ಯ ಜಲನಿಗಮ’ ಕಾಮಗಾರಿಗಳ...

‘ಕೃಷ್ಣಭಾಗ್ಯ ಜಲನಿಗಮ’ ಕಾಮಗಾರಿಗಳ ಟೆಂಡರ್: ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪ

ಲೋಕಾಯುಕ್ತಕ್ಕೆ ದೂರು

ಜಿ.ಮಹಾಂತೇಶ್ಜಿ.ಮಹಾಂತೇಶ್24 Nov 2022 8:53 AM IST
share
‘ಕೃಷ್ಣಭಾಗ್ಯ ಜಲನಿಗಮ’ ಕಾಮಗಾರಿಗಳ ಟೆಂಡರ್: ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪ
ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕೃಷ್ಣಭಾಗ್ಯ ಜಲನಿಗಮವು ನಾರಾಯಣಪುರ ವಿತರಣೆ ಕಾಲುವೆಗಳ ಕಾಮಗಾರಿ ಸಂಬಂಧ 2022ರ ಸೆಪ್ಟಂಬರ್‌ನಲ್ಲಿ ಕರೆದಿದ್ದ ಟೆಂಡರ್‌ನಲ್ಲಿ ಭಾಗವಹಿಸಿದ ಬಿಡ್‌ದಾರರ ಪ್ರಮಾಣಪತ್ರಗಳ ನೈಜತೆ ಮತ್ತು ತುಲನಾತ್ಮಕ ಪಟ್ಟಿಗಳನ್ನು ಪರಿಶೀಲಿಸದೆಯೇ 282.33 ಕೋಟಿ ರೂ. ಮೊತ್ತದ ಕಾಮಗಾರಿಗಳ ಗುತ್ತಿಗೆಯನ್ನು ಆಂಧ್ರ ಸೇರಿದಂತೆ ಹೊರ ರಾಜ್ಯದ ಗುತ್ತಿಗೆದಾರರು, ಕಂಪೆನಿಗಳಿಗೆ ನೀಡಿರುವುದು ಇದೀಗ ಬಹಿರಂಗವಾಗಿದೆ.

ಜಲಸಂಪನ್ಮೂಲ ಇಲಾಖೆಯಲ್ಲಿ ಶೇ.40 ಕಮಿಷನ್ ಆರೋಪ ಗಳು ಕೇಳಿ ಬಂದಿರುವ ನಡುವೆಯೇ ಕೃಷ್ಣಭಾಗ್ಯ ಜಲನಿಗಮದಲ್ಲಿ ಉನ್ನತ ಅಧಿಕಾರಿಗಳು ತಮ್ಮ ಸೋದರ ಸಂಬಂಧಿ, ಬೇನಾಮಿ ವ್ಯಕ್ತಿಗಳನ್ನು ಖಾಸಗಿ ಕಂಪೆನಿಗಳಲ್ಲಿ ಪಾಲುದಾರನನ್ನಾಗಿಸಿ ಆ ಕಂಪೆನಿಗಳಿಗೆ ಬಹು ಕೋಟಿ ರೂ. ಮೊತ್ತದ ಟೆಂಡರ್ ನೀಡುವ ಮೂಲಕ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗುರುತರ ಆರೋಪಗಳು ಕೇಳಿ ಬಂದಿವೆ.

ಈ ಸಂಬಂಧ ಕೊಪ್ಪಳ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಮುಕುಂದರಾವ್ ಭವಾನಿಮಠ ಎಂಬವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ. ಕೆಬಿಜೆಎನ್‌ಎಲ್‌ನ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಸಿದ್ದಗಂಗಪ್ಪ, ಸಮಿತಿಯ ಸಹಾಯಕ ಶಿವಮಾದಯ್ಯ, ನಿಗಮದ ತಾಂತ್ರಿಕ ನಿರ್ದೇಶಕರು, ಮುಖ್ಯ ಇಂಜಿನಿಯರ್, ಕಾರ್ಯ ನಿರ್ವಾಹಕ ಇಂಜನಿಯರ್‌ಗಳನ್ನು ದೂರಿನಲ್ಲಿ ಪ್ರತಿವಾದಿ ಯನ್ನಾಗಿಸಿದ್ದಾರೆ. ದೂರಿನ ಪ್ರತಿಯು ''the-file.in''ಗೆ ಲಭ್ಯವಾಗಿದೆ.

‘ಕೃಷ್ಣಭಾಗ್ಯ ಜಲ ನಿಗಮದ ಕಾಮಗಾರಿಗಳ ಅನುಷ್ಠಾನ ಕುರಿತು ಟೆಂಡರ್ ಪ್ರಕ್ರಿಯೆಗಳಲ್ಲಿ ಸರಕಾರದ ನೀತಿ ನಿಯಮ, ನಿರ್ದೇಶನ, ಕೆಟಿಪಿಪಿ ಕಾಯ್ದೆ ಉಲ್ಲಂಘಿಸಲಾಗಿದೆ. ಟೆಂಡರ್‌ನಲ್ಲಿ ಸ್ವಜನಪಕ್ಷಪಾತ ಎಸಗಿ ಭ್ರಷ್ಟಾಚಾರಕ್ಕೆ ಕಾರಣರಾಗಿರುವ ಇವರಿಂದ ಸರಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟಾಗಿದೆ. ಹೀಗಾಗಿ ನಿಗಮದ ವ್ಯವಸ್ಥಾಪಕ

ನಿರ್ದೇಶಕರು, ಮುಖ್ಯ ಇಂಜಿನಿಯರ್, ನಿಗಮದ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ, ಸದಸ್ಯರು ಟೆಂಡರ್ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಜವಾಬ್ದಾರರಾಗಿರುವ ಇತರ ಅಧಿಕಾರಿಗಳ ಮೇಲೆ ವಿಚಾರಣೆ ನಡೆಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.

ರಾಯಚೂರು ಗ್ರಾಮೀಣ ವಿಧಾನಸಭಾ ವ್ಯಾಪ್ತಿಯ ಎನ್‌ಆರ್‌ಬಿಸಿಯ (ವಿತರಣೆ ಸಂಖ್ಯೆ 26,27,28,29 ಮತ್ತು 28,337 ರಿಂದ 32,920 ಕಿ.ಮೀ.ವರೆಗೂ) 91 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಯ ನಿರ್ವಹಣೆಗಾಗಿ ಕರೆದಿದ್ದ ಟೆಂಡರ್ ಅನ್ನು (ಇಂಡೆಂಟ್ ಸಂಖ್ಯೆ 23168) ಆಂಧ್ರ ಮೂಲದ ಸುಧಾಕರ ಇನ್‌ಫ್ರಾ ಪ್ರೈವೆಟ್ ಲಿಮಿಟೆಡ್‌ಗೆ ನೀಡಿರುವುದರ ಹಿಂದೆ ದೊಡ್ಡಮಟ್ಟದ ಅವ್ಯವಹಾರ ನಡೆದಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ಟೆಂಡರ್‌ನಲ್ಲಿ ಉದಯ ಶಿವಕುಮಾರ್ ಇನ್‌ಫ್ರಾ ಪ್ರೈವೆಟ್ ಲಿಮಿಟೆಡ್, ಅಮರಗುಂಡಪ್ಪ ಮೇಟಿ ಮತ್ತಿತರರು ಸ್ಥಳೀಯ ಗುತ್ತಿಗೆದಾರ ಕಂಪೆನಿಗಳು ಭಾಗವಹಿಸಿದ್ದವು. ಟೆಂಡರ್‌ನಲ್ಲಿ ವಿಧಿಸಿದ್ದ ಎಲ್ಲ ಷರತ್ತುಗಳನ್ನು ಪೂರೈಸಿ ಈ ಸಂಬಂಧ ದಾಖಲಾತಿಗಳನ್ನು ಒದಗಿಸಿದ್ದರು. ಆದರೂ ಯಾವುದೇ ಸಕಾರಣಗಳಿಲ್ಲದೆಯೇ ಸ್ಥಳೀಯ ಗುತ್ತಿಗೆ ಕಂಪೆನಿಗಳ ಬಿಡ್‌ಗಳನ್ನು ತಿರಸ್ಕರಿಸಿ ಆಂಧ್ರ ಮೂಲದ ಸುಧಾಕರ ಇನ್‌ಫ್ರಾ ಪ್ರೈವೆಟ್ ಲಿಮಿಟೆಡ್‌ನೊಂದಿಗೆ ಶಾಮೀಲಾಗಿ ಟೆಂಡರ್ ಗುತ್ತಿಗೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ ಆಲಮಟ್ಟಿ ಡ್ಯಾಂನಲ್ಲಿ ಹೊಸ ಅತಿಥಿ ಗೃಹ ನಿರ್ಮಾಣ 12.11 ಕೋಟಿ ರೂ., ಯುಕೆಪಿ ಮೂರನೇ ಹಂತದ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯಲ್ಲಿ ಕಾಮಗಾರಿಗಳಿಗಾಗಿ 34.01 ಕೋಟಿ ರೂ., ಆಯಕಟ್ಟು ರಸ್ತೆಗಳಸುಧಾರಣೆ ಮತ್ತು ಅಭಿವೃದ್ಧಿ (ನಾಗಬೆಟ್ಟ ಅಚ್ಚುಕಟ್ಟು ಪ್ರದೇಶ), 41.12 ಕೋಟಿ ರೂ., ಗುಂಡಕರ್ಜಿಗಿಯಿಂದ ಬಸರಕೋಡ ಮತ್ತು ಗೋನಾಳದಿಂದ ಬಸರಕೋಡ, ಹುಲ್ಲೂರು ಕೊಪ್ಪ, ಸೈದಾಪೂರದಿಂದ ಬಸರಕೋಡಿನ ಹೊರ ರಸ್ತೆ (ಚಿಮ್ಮಲಗಿ ಏತ ನೀರಾವರಿ ಯೋಜನೆ ವ್ಯಾಪ್ತಿ) ನಿರ್ಮಾಣಕ್ಕೆ 33.61 ಕೋಟಿ ರೂ., ಹೆರಕಲ್ ಸೇತುವೆ, ಬ್ಯಾರೇಜ್‌ನ ಗೇಟುಗಳನ್ನು ಎತ್ತರಿಸುವುದು 10.98 ಕೋಟಿ ರೂ., ಗುತ್ತಿ ಬಸವಣ್ಣ ಮತ್ತು ಇಂಡಿ ಏತ ನೀರಾವರಿ ಯೋಜನೆಯ ವ್ಯಾಪ್ತಿಯಲ್ಲಿ ಹೊಸದಾದ ವಿ.ಟಿ.ಪಂಪ್ ಮೋಟರ್‌ಗಳನ್ನು ಅಳವಡಿಸುವುದಕ್ಕೆ 59.50 ಕೋಟಿ ರೂ. ಮೊತ್ತದ ಟೆಂಡರ್‌ನಲ್ಲಿಯೂ ಬಹುದೊಡ್ಡ ಅಕ್ರಮಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಬಿಡ್‌ದಾರರ ಯಂತ್ರೋಪಕರಣಗಳು ಹಾಗೂ ಇನ್ನಿತರ ಪ್ರಮಾಣಪತ್ರಗಳ ನೈಜತೆಯನ್ನು ಪರಿಶೀಲಿಸಿ ಪ್ರತಿಯೊಂದು ಕಾಮಗಾರಿಗಳ ತುಲನಾತ್ಮಕ ಪಟ್ಟಿಗಳನ್ನು ತನಿಖೆಗೆ ಒಳಪಡಿಸಬೇಕು. ಯಾವ ಕಾರಣಕ್ಕೆ ಟೆಂಡರ್ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ ಎಂಬುದನ್ನು ಪರಿಶೀಲಿಸಿದರೆ ಇಲ್ಲಿ ನಡೆದಿರುವ ಅಕ್ರಮಗಳು ಮತ್ತು ಭ್ರಷ್ಟಾಚಾರ ಆರೋಪಗಳು ರುಜುವಾತಾಗುತ್ತವೆ.

- ಮುಕುಂದರಾವ್ ಭವಾನಿಮಠ

ಕೊಪ್ಪಳ ಜಿಪಂ ಮಾಜಿ ಅಧ್ಯಕ್ಷ

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X