ಬೆಳ್ತಂಗಡಿ | ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

ಮುಂಡಾಜೆ: ಮುಂಡಾಜೆ ಗ್ರಾಮದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮೀಪ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.
ಮೃತ ವ್ಯಕ್ತಿ ಅಣಿಯೂರು ನಿವಾಸಿಯಾಗಿರುವ ಪ್ರದೀಪ್ ಗೌಡ(22) ಎಂಬವರಾಗಿದ್ದಾರೆ. ರಾತ್ರಿಯ ವೇಳೆ ಇವರು ತಮ್ಮ ಸಂಬಂಧಿಕರಲ್ಲಿಗೆ ಹೋಗುತ್ತಿದ್ದಾಗ ಇವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಹೊರಗೆ ಚಲಿಸಿ ಮನೆಯೊಂದರ ಗೇಟಿಗೆ ಢಿಕ್ಕಿ ಹೊಡೆದಿದೆ ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಸ್ಥಳೀಯರು ಕೂಡಲೇ ಉಜಿರೆಯ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಆ ವೇಳೆಗೆ ಅವರು ಮೃತ ಪಟ್ಟಿದ್ದರು.
ಘಟನೆಯ ಬಗ್ಗೆ ಬೆಳ್ತಂಗಡಿ ಸಾಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
Next Story