Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರೊ.ಅಮೃತ ಸೋಮೇಶ್ವರ್‌ಗೆ 'ಯಕ್ಷಾಮೃತ'...

ಪ್ರೊ.ಅಮೃತ ಸೋಮೇಶ್ವರ್‌ಗೆ 'ಯಕ್ಷಾಮೃತ' ಗೌರವ ಸಮರ್ಪಣೆ

24 Nov 2022 4:58 PM IST
share
ಪ್ರೊ.ಅಮೃತ ಸೋಮೇಶ್ವರ್‌ಗೆ ಯಕ್ಷಾಮೃತ ಗೌರವ ಸಮರ್ಪಣೆ

ಮುಡಿಪು: ಹಿರಿಯ ವಿದ್ವಾಂಸರು, ಸಾಹಿತಿ, ಜಾನಪದ ತಜ್ಞ, ಪ್ರಸಂಗಕರ್ತರು, ವಿಶ್ರಾಂತ ಪ್ರಾಧ್ಯಾಪಕರಾಗಿರುವ  ಪ್ರೊ.ಅಮೃತ ಸೋಮೇಶ್ವರರಿಗೆ 'ಯಕ್ಷಗಾನಾರ್ಚನೆ' ಹಾಗೂ 'ಯಕ್ಷಾಮೃತ' ಗೌರವಾರ್ಪಣೆ ಕಾರ್ಯಕ್ರಮ ಸೋಮೇಶ್ವರದ 'ಒಲುಮೆ'ಯಲ್ಲಿ ಬುಧವಾರ ಸಂಜೆ ನಡೆಯಿತು.

ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು, ವಿವೇಕಾನಂದ ಸಂಶೋಧನಾ ಕೇಂದ್ರ,‌ ಯಕ್ಷರಂಜಿನಿ, ಕನ್ನಡ ವಿಭಾಗ,  ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ ಪುತ್ತೂರು  ಈ ವಿಶೇಷ ಕಾರ್ಯಕ್ರಮವನ್ನು ಪ್ರೊ.ಅಮೃತರ ಮನೆಯಂಗಳದಲ್ಲಿ ಆಯೋಜಿಸಿತ್ತು.

ಕಾರ್ಯಕ್ರಮದಲ್ಲಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ವಸಂತ ಕುಮಾರ್ ತಾಳ್ತಾಜೆ ಅವರು ನುಡಿ ಗೌರವವನ್ನು ಸಲ್ಲಿಸುತ್ತಾ,  ಪ್ರೊ.ಅಮೃತ ಸೋಮೇಶ್ವರ ಅವರು ಸಮನ್ವಯದ ವ್ಯಕ್ತಿತ್ವದೊಂದಿಗೆ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡಿದ ಸಾಹಿತಿ, ವಿದ್ವಾಂಸರಾಗಿದ್ದಾರೆ. ಶಿಕ್ಷಣ, ಸಾಹಿತ್ಯ ಕ್ಷೇತ್ರದ ಸೇವೆಯೊಂದಿಗೆ, ಯಕ್ಷಗಾನ  ಪ್ರಸಂಗಕರ್ತರಾಗಿ ಸಾಂಸ್ಕೃತಿಕ ಮೌಲ್ಯವನ್ನು ಬೆಳೆಸಿದ ಮಹಾನ್ ವಿದ್ವಾಂಸರಾಗಿದ್ದಾರೆ ಎಂದರು.

ಜಾನಪದ ವಿದ್ವಾಂಸ ಪ್ರೊ.ಚಿನ್ನಪ್ಪಗೌಡ ಅವರು ಮಾತನಾಡಿ ಸಾಹಿತ್ಯಿಕ, ಸಾಂಸ್ಕೃತಿಕವಾಗಿ ಸಮಾಜಕ್ಕೆ ಕೊಡುಗೆ ನೀಡಿದವರಲ್ಲಿ ಪ್ರೊ.ಅಮೃತಸೋಮೇಶ್ವರರು ನಮಗೆ ಬಹಳ ಮುಖ್ಯವಾಗಿ ಕಾಣುತ್ತಾರೆ.  ಅಮೃತರ ಕುಟುಂಬದ ಶಕ್ತಿಯೇ ಪ್ರೀತಿ ಮತ್ತು ಒಲುಮೆ.  ಜ್ಞಾನವನ್ನು, ಅರಿವನ್ನು ಇವರಷ್ಟು ಸಮಾಜಕ್ಕೆ ಹಂಚಿಕೊಂಡವರು ಬೇರೆ ಯಾರೂ ಇರಲು ಸಾಧ್ಯವಿಲ್ಲ. ಅವರ ಬದುಕು, ನಡೆನುಡಿ ಎಲ್ಲವೂ ನಮಗೆ ಆದರ್ಶನೀಯವಾದುದು ಎಂದರು.

ವಿವೇಕಾನಂದ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ.ಶ್ರಿಪತಿ ಕಲ್ಲೂರಾಯ ಅವರು ಮಾತನಾಡಿ, ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ 'ಯಕ್ಷರಂಜಿನಿ'  ಕಟ್ಟಿ ಬೆಳೆಸುವುದತ ಮೂಲಕ ಯಕ್ಷಗಾನ, ಸಾಹಿತ್ಯಕ್ಕೆ ಸಂಬಂಧಿಸಿ ಅವರ  ಅನೇಕ ಚಟುವಟಿಕೆಗಳು ನಮಗೆಲ್ಲರಿಗೂ ದಾರಿ ದೀಪವಾಗಿದೆ. ಯಕ್ಣಗಾನದ ಕಲೆಯ ಸಂರಕ್ಷಣೆಯ ಕುರಿತ ಅವರ ಚಿಂತನೆಗೆ ನಾವೆಲ್ಲರೂ  ಕಟ್ಟಿಬದ್ಧರಾಗಿ ಯಕ್ಷಗಾನ ಕಲೆಯನ್ನು ಬೆಳೆಸೋಣ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೊ.ಅಮೃತಸೋಮೇಶ್ವರ ಅವರು, ಪ್ರೀತಿಯ ಗೌರವಕ್ಕೆ ನಾನು ಎಲ್ಲರಿಗೂ ಕೃತಜ್ಞನಾಗಿದ್ದೇನೆ. ಇಂದಿನ ಆಧುನಿಕತೆಯಲ್ಲಿ ಆತ್ಮೀಯತೆ, ಸೌಹಾರ್ದತೆಯಿಂದ ನಾವು ಬದುಕಬೇಕು. ನಂಬಿಕೆ, ವಿಶ್ವಾಸದಿಂದ ವಿಶ್ವವನ್ನು ಗೆಲ್ಲಬಹುದು ಎಂದರು.

ಇದೇ ಸಂದರ್ಭದಲ್ಲಿ ವೈವಾಹಿಕ ಜೀವನದ 61 ವರ್ಷ ಪೂರೈಸಿದ ಪ್ರೊ.ಅಮೃತ ಸೋಮೇಶ್ವರ ದಂಪತಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀ ಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ.  ವಿಷ್ಣುಗಣಪತಿ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರೊ.ಅಮೃತ ಸೋಮೇಶ್ವರ ಅವರ ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಯಕ್ಷಗಾನ ಗಾನಾರ್ಚನೆ: ಇದೇ ವಿವೇಕಾನಂದ ಕಾಲೇಜಿನ ತಂಡದಿಂದ ಅಮೃತ ಸೋಮೇಶ್ವರರು ಬರೆದ ಆಯ್ದ ಪ್ರಸಂಗ ಪದ್ಯಗಳ ಯಕ್ಷಗಾನಾರ್ಚನೆ ಕಾರ್ಯಕ್ರಮವು ನಡೆಯಿತು. ದೇರಾಜೆ ಸೀತಾರಾಮಯ್ಯ ಕೇಂದ್ರದ ಸಂಯೋಜಕರಾದ ಡಾ.ಮನಮೋಹನ ಅವರು ಸ್ವಾಗತಿಸಿದರು.

ಪ್ರಾಧ್ಯಾಪಕ ಪ್ರೊ.ಎಚ್ ಜಿ.ಶ್ರೀಧರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ವಿಜಯ ಸರಸ್ವತಿ ವಂದಿಸಿದರು. ಡಾ.ಗೀತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.

share
Next Story
X