ಗಡಿ ವಿವಾದದ ಬಗ್ಗೆ ಚರ್ಚಿಸಲು ಮುಂದಿನ ವಾರ ಸರ್ವ ಪಕ್ಷಗಳ ಸಭೆ: ಸಿಎಂ ಬೊಮ್ಮಾಯಿ
''ಏಕನಾಥ್ ಶಿಂಧೆ, ಮಾತುಕತೆ ಮೂಲಕ ವಿವಾದ ಬಗೆಹರಿಸಲು ಸಿದ್ಧ ಎಂದಿದ್ದಾರೆ...''

ಬೆಂಗಳೂರು,ನ.24: ಮಹಾರಾಷ್ಟ್ರ – ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರಿಂ ಕೋರ್ಟ್ ನಲ್ಲಿ ದಾವೆ ಹೂಡಲಾಗಿದ್ದು, ವಾದ ಮಂಡಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮುಂದಿನ ವಾರ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಾಧ್ಯಮದ ಸಭೆ ಕರೆದು, ಸುಪ್ರೀಂ ಕೋರ್ಟ್ ನಲ್ಲಿ ದಾವೆ ಇರುವಾಗಲೇ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಿದ್ಧ ಎಂದು ಹೇಳಿರುವುದಾಗಿ'' ಬೊಮ್ಮಾಯಿ ತಿಳಿಸಿದ್ದಾರೆ.
''ನಾವು ಸರ್ವ ಪಕ್ಷಗಳ ಸಭೆ ಹಾಗೂ ಗಡಿ ಪ್ರಾಧಿಕಾರದಲ್ಲಿ ಕೈಗೊಂಡ ನಿರ್ಣಯಗಳಿಗೆ ಬದ್ಧರಾಗಿದ್ದೇವೆ. ಇನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣವನ್ನು ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತೇವೆ'' ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರು ಮಾಧ್ಯಮದ ಸಭೆ ಕರೆಸಿ, ಸುಪ್ರೀಂ ಕೋರ್ಟ್ ನಲ್ಲಿ ದಾವೆ ಇರುವಾಗಲೇ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಿದ್ಧ ಎಂದು ತಿಳಿಸಿದ್ದಾರೆ.
— Basavaraj S Bommai (@BSBommai) November 24, 2022
1/2 pic.twitter.com/b1lVqIsg34