ರಾಯಚೂರು | ತಾಯತ ಕಟ್ಟುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ: ಬಸವೇಶ್ವರ ದೇವಸ್ಥಾನದ ಪೂಜಾರಿಯ ಬಂಧನ
ರಾಯಚೂರು: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ದೇವಸ್ಥಾನವೊಂದರ ಪೂಜಾರಿಯೋರ್ವನನ್ನು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದ್ದು, ಘಟನೆಯು ತಡವಾಗಿ ಬೆಳಕಿಗೆ ಬಂದಿದೆ.
ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ(54) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಬಾಲಕಿಯು ಅನಾರೋಗ್ಯದ ಹಿನ್ನೆಲೆಯಲ್ಲಿ ತಾಯಿಯ ಜೊತೆ ದೇವಸ್ಥಾನಕ್ಕೆ ಬಂದಿದ್ದಳು ಎನ್ನಲಾಗಿದೆ. ಬಾಲಕಿಗೆ ತಾಯತ ಕಟ್ಟುವ ನೆಪದಲ್ಲಿ ದೇವಸ್ಥಾನದ ಪೂಜಾರಿ ಅಯ್ಯಪ್ಪ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯು 2-3 ದಿನಗಳ ಹಿಂದೆ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story