Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಮಾನಸಿಕ...

ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಮಾನಸಿಕ ಸಮಾತೋಲನ ಕಾಪಾಡಲು ಸಾಧ್ಯ: ಡಾ.ಬಲ್ಲಾಳ್

‘ಚಿಗುರು’ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

25 Nov 2022 6:38 PM IST
share
ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಮಾನಸಿಕ ಸಮಾತೋಲನ ಕಾಪಾಡಲು ಸಾಧ್ಯ: ಡಾ.ಬಲ್ಲಾಳ್
‘ಚಿಗುರು’ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಡುಪಿ, ನ.25: ಕೇವಲ ಓದು, ಅಂಕಗಳಿಗೆ ಮಕ್ಕಳ ಮೇಲೆ ಒತ್ತಡ ಹಾಕು ವುದರಿಂದ ಮಾನಸಿಕ ಪರಿಣಾಮ ಬೀರಳಿದೆ. ಪಾಠದ ಜೊತೆ ಪಠ್ಯೇತರ ಚಟು ವಟಿಕೆಗಳಲ್ಲೂ ಮಕ್ಕಳನ್ನು ತೊಡಗಿಸಿಕೊಳ್ಳುವುದರಿಂದ ಮಾನಸಿಕ ಸಮಾತೋಲನ ಕಾಪಾಡಲು ಸಾಧ್ಯ ಎಂದು ಉಡುಪಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಕಾರದೊಂದಿಗೆ ಶುಕ್ರವಾರ ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಆಯೋಜಿಸಲಾದ ‘ಚಿಗುರು’ ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಭಾರತದ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಮಕ್ಕಳ ಪಾತ್ರ ಅತಿ ಪ್ರಮುಖ ವಾದುದು. ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಿಸಲು ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿ ವ್ಯಕ್ತಿತ್ವ ರೂಪಿಸುವ ಜವಾಬ್ದಾರಿ ಹಿರಿಯರ ಮೇಲಿದೆ. ಪ್ರತಿಯೊಂದು ಮಗುವಿನಲ್ಲೂ ವಿಶಿಷ್ಟ ಶಕ್ತಿ, ಪ್ರತಿಭೆ, ಸಾಮರ್ಥ್ಯ ಗಳಿವೆ. ಅದನ್ನು ಪೋಷಕರು, ಶಿಕ್ಷಕರು ಗುರುತಿಸುವ ಕಾರ್ಯ ಮಾಡಬೇಕು ಎಂದರು.

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳಾನಾಧ್ಯಕ್ಷ ಹಿರಿಯ ವಿದ್ವಾಂಸ ಡಾ.ಎನ್.ತಿರುಮಲೇಶ್ವರ ಭಟ್, ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ನಗರಸಭೆ ಸದಸ್ಯ ಹರೀಶ್ ಶೆಟ್ಟಿ, ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ, ಸಾಪಲ್ಯ ಟ್ರಸ್ಟ್ ಪ್ರವರ್ತಕ ನಿರೂಪಮಾ ಪ್ರಸಾದ್, ಕಸಾಪ ಬ್ರಹ್ಮಾವರ ತಾಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಮುಖ್ಯ ಅತಿಥಿಗಳಾಗಿದ್ದರು.

ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಚ್.ಚಂದ್ರೇಗೌಡ, ಗೌರವ ಕಾರ್ಯ ದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಗೌರವ ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಪೂರ್ಣಿಮಾ  ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ಪತ್ರಕರ್ತ ಕಿರಣ್ ಮಂಜನಬೈಲು ವಂದಿಸಿದರು. ಕವಯಿತ್ರಿ ಪೂರ್ಣಿಮಾ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

share
Next Story
X