ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಾಹಿತಿ ಕಾರ್ಯಗಾರ

ಮಂಗಳೂರು, ನ.25: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಬಿಷಪ್ ಹೌಸ್‌ನಲ್ಲಿ ಮಾಹಿತಿ ಕಾರ್ಯಗಾರ ನಡೆಯಿತು.
ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೆ. ಕೆನಡಿ ಶಾಂತಕುಮಾರ್, ಶ್ರೇಷ್ಠ ಧರ್ಮಗುರು ವಂ.ರೆ.ಫಾ.ಮ್ಯಾಕ್ಸಿಂ ನೊರೋನ್ಹಾ, ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ರೋಯ್ ಕ್ಯಾಸ್ಟೇಲಿನೋ, ಕೇಂದ್ರಿಯ ಪಾಲನ ಸಮಿತಿಯ ಕಾರ್ಯದರ್ಶಿ ಜಾನ್ ಡಿಸಿಲ್ವ, ಕೆಥೋಲಿಕ್ ಸಭೆಯ ಅಧ್ಯಕ್ಷ ಸ್ಟ್ಯಾನಿ ಲೋಬೊ, ಸಮುದಾಯದ ನಾಯಕರಾದ ಜೋಯಲ್ ಮೆಂಡೋನ್ಸಾ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಜಿನೇಂದ್ರ ಎಂ ಕೋಟ್ಯಾನ್ ಉಪಸ್ಥಿತರಿದ್ದರು. ಮಿಥುನ್ ಸಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು.
Next Story