Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಿಲುಮೆ ಸಂಸ್ಥೆ ಹಗರಣ: ಬೆಂಗಳೂರು ನಗರ...

ಚಿಲುಮೆ ಸಂಸ್ಥೆ ಹಗರಣ: ಬೆಂಗಳೂರು ನಗರ ಡಿಸಿ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

25 Nov 2022 9:58 PM IST
share
ಚಿಲುಮೆ ಸಂಸ್ಥೆ ಹಗರಣ: ಬೆಂಗಳೂರು ನಗರ ಡಿಸಿ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬೆಂಗಳೂರು, ನ.25: ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆ ಹಗರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬೆಂಗಳೂರು ನಗರ ಜಿಲ್ಲಾಧಿಕಾರಿ ಸೇರಿದಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಆದೇಶ ಹೊರಡಿಸಿದೆ.

ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಬೆಂಗಳೂರಿನ ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಉಸ್ತುವರಿಯೂವಹಿಸಿದ್ದ ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ ಅವರನ್ನು ಅಮಾನತು ಮಾಡಿ ಕೇಂದ್ರ ಚುನಾವಣೆ ಆಯೋಗ ತನಿಖೆಗೆ ಆದೇಶಿಸಿದೆ.

ತನಿಖಾ ತಂಡ: ಚುನಾವಣಾ ಪೂರ್ವ ತಯಾರಿ ಪ್ರಕ್ರಿಯೆಯ ಮುಂದಿನ ಕಾರ್ಯವನ್ನು ಕೈಗೊಳ್ಳಲು ಐಎಎಸ್ ಅಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಇಲ್ಲಿನ ಶಿವಾಜಿನಗರಕ್ಕೆ, ಡಾ.ಆರ್.ವಿಶಾಲ್ ಅವರನ್ನು ಚಿಕ್ಕಪೇಟೆಗೆ ಹಾಗೂ ಅಜಯ್ ನಾಗಭೂಷಣ್ ಅವರನ್ನು ಮಹದೇವಪುರಕ್ಕೆ ನೇಮಕ ಮಾಡಲಾಗಿದೆ ಎಂದು ಆಯೋಗ ದೃಢಪಡಿಸಿದೆ.

ಇನ್ನೂ, ಉಜ್ವಲ್ ಘೋಷ್ (ಬಿಬಿಎಂಪಿ ಕೇಂದ್ರ), ರಾಮಚಂದ್ರನ್ ಆರ್ (ಬಿಬಿಎಂಪಿ ಉತ್ತರ), ಪಿ.ರಾಜೇಂದ್ರ ಚೋಳನ್ (ಬಿಬಿಎಂಪಿ ದಕ್ಷಿಣ) ಡಾ.ಎನ್.ಮಂಜುಳಾ (ಬೆಂಗಳೂರು ನಗರ) ಅವರನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ, ಮತದಾರರ ಪಟ್ಟಿ ಪರಿಷ್ಕರಣೆಯ ವೀಕ್ಷಕರಾಗಿ ನೇಮಕ ಮಾಡಲಾಗಿದೆ.

ಮತ್ತೆ ಸಮೀಕ್ಷೆ: ಸದ್ಯ ಈಗ ಸಂಗ್ರಹಿಸಿರುವ ವಿಧಾನಸಭಾ ಕ್ಷೇತ್ರವಾರು ಮತದಾರರ ಯಾವುದೇ ಮಾಹಿತಿಯನ್ನು ಬಳಕೆ ಮಾಡದಂತೆ ರಾಜ್ಯ ಚುನಾವಣಾ ಆಯೋಗಗಕ್ಕೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಸಂಪೂರ್ಣ ನೂರಕ್ಕೆ ನೂರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು ಎಂದು ಉಲ್ಲೇಖಿಸಲಾಗಿದೆ.

ಅದೇ ರೀತಿ, ಬಿಬಿಎಂಪಿಯ ಹೊರಗಿನ ವಿಶೇಷ ಅಧಿಕಾರಿಗಳನ್ನು ಮೇಲ್ವಿಚಾರಣೆಗೆ ನೇಮಿಸಬೇಕು. ಮತದಾರರ ಪಟ್ಟಿಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಬೇಕು. ರಾಜಕೀಯ ಪಕ್ಷಗಳು ದಾಖಲೆ ಸಂಗ್ರಹಿಸಿರುವ ಬಗ್ಗೆ ಪತ್ತೆಹಚ್ಚಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ.

ಒಟ್ಟಿನಲ್ಲಿ ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಪಟ್ಟಿ  ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣೆ ಆಯೋಗ ಮಧ್ಯೆ ಪ್ರವೇಶ ಮಾಡಿದ್ದು, ರಾಜ್ಯ ಸರಕಾರಕ್ಕೆ ಚಾಟಿ ಬೀಸಿದೆ.

ECI issues directions to Chief Secretary & CEO Karnataka in case of collection of voter data by a private entity in BBMP area; Period of claims & objections under Special Summary Revision extended till 24.12.22 @PIBBengaluru @DDNewslive @ceo_karnatakahttps://t.co/X7HBEY6Z62

— Spokesperson ECI (@SpokespersonECI) November 25, 2022
share
Next Story
X