Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್...

ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2022: ಭಾವೀ ವಿಜ್ಞಾನಿಗಳ ಕೌಶಲ್ಯ ಅನಾವರಣ!

26 Nov 2022 3:59 PM IST
share
ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2022: ಭಾವೀ ವಿಜ್ಞಾನಿಗಳ ಕೌಶಲ್ಯ ಅನಾವರಣ!

ಮಂಗಳೂರು, ನ.26: ಅಡುಗೆ ಅನಿಲ ಸಿಲಿಂಡರ್‌ನಿಂದ ಲೀಕೇಜ್ ಆಗಿ ಆಗುವ ಸಂಭಾವ್ಯ ಅನಾಹುತ ತಪ್ಪಿಸುವ ಸಾಧನ, ದೃಷ್ಟಿ ದೋಷ ಇರುವವರಿಗೆ ತಮ್ಮ ಹತ್ತಿರದ ವಸ್ತುಗಳ ಬಗ್ಗೆ ಮುನ್ಸೂಚನೆ ನೀಡುವ ಸೆನ್ಸಾರ್, ಒಂದು ತಿಂಗಳವರೆಗೂ ಕರೆಂಟ್ ಬಳಕೆಯಿಲ್ಲದೆ ತರಕಾರಿಯನ್ನು ಕೆಡದಂತೆ ಕಾಪಾಡುವ ಪ್ರಾಕೃತಿಕ ಸಾಧನ. ಇಂತಹ ಭಾವೀ ವಿಜ್ಞಾನಿಗಳ ಕೈಚಳಕ, ತಂತ್ರಜ್ಞಾನ ಹಾಗೂ ಬೌದ್ಧಿಕ ಜಾಣ್ಮೆ, ಕೌಶಲ್ಯದಿಂದ ಹೊರಹೊಮ್ಮಿದ ನೂರಾರು ಬಗೆಯ ವೈಜ್ಞಾನಿಕ ಸಾಧನಗಳು, ಸಲಕರಣೆಗಳ ಪ್ರದರ್ಶನಕ್ಕೆ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜು ವೇದಿಕೆ ಕಲ್ಪಿಸಿದೆ.

ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ರಾಜ್ಯಮಟ್ಟದ, ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್-2022ರ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಪ್ರದರ್ಶನ ಹಾಗೂ ವಿವರಣೆಗಳ ಮೂಲಕ ಗಮನ ಸೆಳೆದರು.

ಇಟ್ಟಿಗೆಯ ಸಾಂಪ್ರದಾಯಿಕ ಕೂಲರ್!

ಕೇವಲ ಇಟ್ಟಿಗೆಯನ್ನು ಪಿರಾಮಿಡ್ ಆಕಾರದಲ್ಲಿ ಜೋಡಿಸಿಕೊಂಡು ಕೂಲರ್ ರೀತಿಯಲ್ಲಿ ತರಕಾರಿ ಹಣ್ಣು ಹಂಪಲುಗಳನ್ನು ಸರಿ ಸುಮಾರು ಒಂದು ತಿಂಗಳ ಕಾಲ ಕೆಡದಂತೆ ರಕ್ಷಿಸುವ ಮಾದರಿಯನ್ನು ಮಾಣಿಯ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ಪ್ರದರ್ಶಿಸಿದ್ದರು.

ಅಡುಗೆ ಅನಿಲ ಸಿಲಿಂಡರ್‌ನ ರೆಗ್ಯುಲೇಟರ್‌ಗೆ ಸೆನ್ಸಾರ್‌ವೊಂದನ್ನು ಅಲವಡಿಸಿ ಗ್ಯಾಸ್ ಲೀಕ್ ಆಗಿ ಆಗುವ ಅನಾಹುತವನ್ನು ತಡೆಯುವುದು ಮಾತ್ರವಲ್ಲದೆ, ಸೆನ್ಸಾರ್ ಮೂಲಕ ಗ್ಯಾಸ್ ಲೀಕ್‌ನ ಸೂಚನೆಯನ್ನು ನೀಡುವ ತನ್ನ ಸ್ನೇಹಿತನ ಜತೆ ಸೇರಿಕೊಂಡು ತಯಾರಿಸಿರುವ ಸಾಧನದ ಬಗ್ಗೆ ಸರಕಾರಿ ಹೈಸ್ಕೂಲೊಂದರ ವಿದ್ಯಾರ್ಥಿ ಚಿನ್ಮಯ್ ವಿವರಿಸಿದರು.

ನನ್ನ ಸ್ನೇಹಿತನೊಬ್ಬ ಬಸ್ಸಿನಿಂದ ಇಳಿಯುವಾಗ ಬಿದ್ದು ಗಾಯಗೊಂಡಿರುವುದನ್ನು ಕಂಡು ಅದಕ್ಕೊಂದು ಪರಿಹಾರ ಕಂಡುಹಿಡಿಯಬೇಕೆಂಬ ಹಠಕ್ಕೆ ಬಿದ್ದ ಬಾಲ ವಿಜ್ಞಾನಿಯೊಬ್ಬ ತನ್ನ ಸ್ನೇಹಿತನ ಜತೆ ಸೇರಿ ಬಸ್ಸಿನ ಮೆಟ್ಟಿಲಿನಿಂದ ಇಳಿಯುವಾಗ ಸೆನ್ಸಾರ್ ಮೂಲಕ ಚಾಲಕನಿಗೆ ಸೂಚನೆ ಹೋಗಿ ಅಟೋಮ್ಯಾಟಿಕ್ ಆಗಿ ಬಸ್ಸು ನಿಲ್ಲಿಸುವ ಪರಿಕರವನ್ನು ರಚನೆ ಮಾಡಿರುವುದನ್ನು ಪ್ರದರ್ಶಿಸಿದ್ದರು.

ಅಡಿಕೆಯನ್ನು ಗಾತ್ರದ ಆಧಾರದಲ್ಲಿ ಬೇರ್ಪಡಿಸುವ ಸಾಧನ, ಅಪಘಾತ ಪತ್ತೆಹಚ್ಚುವ ವಿಧಾನ, ಕಲುಷಿತ ನೀರನ್ನು ಸ್ವಚ್ಛಗೊಳಿಸುವುದು, ಡ್ರೋನ್ ಪೇಯ್ಟಂರ್, ಬೈಕ್‌ಗಳಿಗೆ ಏರ್‌ಬ್ಯಾಗ್, ಜೈವಿಕ ಸೋಪ್ ಪೌಡರ್, ಅಕ್ಕಿ ಹಾಗೂ ಆಹಾರ ಕಾಳುಗಳನ್ನು ಹುಳ ಹುಪ್ಪಡಿಗಳಿಂದ ಸಂರಕ್ಷಿಸುವ ವಿಧಾನ, ಬಹುಪಯೋಗಿ ಕೃ,ಇ ಯಂತ್ರಗಳು, ಸ್ಮಾರ್ಟ್ ರೈಲ್ವೇ ವಿಧಾನ, ಬ್ಲೈಂಡ್ ಸ್ಟಿಕ್, ರೈತರ ಸುರಕ್ಷತೆಗಾಗಿ ಶೂ, ಚಂದ್ರನ ಬೆಳಕನ್ನು ಉಪಯೋಗಿಸಿ ದಾರಿ ದೀಪ ಸೇರಿದಂತೆ ನೂರಕ್ಕೂ ಅಧಿಕ ಪ್ರಾಜೆಕ್ಟ್‌ಗಳು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಪ್ರದರ್ಶಿಸಲ್ಪಟ್ಟಿದ್ದವು.

ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಿಂದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧೆ ಆಯೋಜಿಸಿ ಅಂತಿಮ ಹಂತಕ್ಕೆ 200ಕ್ಕೂ ಅಧಿಕ ಮಾದರಿಗಳನ್ನು ಈ ಪ್ರದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು. ಕಳೆದ ಎರಡು ದಿನಗಳಲ್ಲಿ ಸಹ್ಯಾದ್ರಿ ಕಾಲೇಜಿನಲ್ಲಿ ಪ್ರದರ್ಶಿಸಲ್ಪಟ್ಟ ಮಾದರಿಗಳಿಗೆ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಲಹೆ- ಸೂಚನೆಗಳಂತೆ ಮಾದರಿಯಲ್ಲಿ ಬದಲಾವಣೆ ಮಾಡಿ, ಅಂತಿಮ ಸುತ್ತಿನ ಪ್ರದರ್ಶನ ಇಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಟಿಯು ರಿಜಿಸ್ಟ್ರಾರ್ ಡಾ.ಬಿ.ಇ.ರಂಗಸ್ವಾಮಿ ನೆರವೇರಿಸಿದರು.

ನೀತಿ ಆಯೋಗದ ಪೃಥ್ವಿ ಸಾಯಿ ಪೆನುಮಾಡು, ಎನ್‌ಪವರ್ ಸಂಸ್ಥಾಪಕ ಮತ್ತು ಸಿಇಒ ಸುಶೀಲ್ ಮುಂಗೇಕರ್, ಬಿಯಾಂಡ್ ಬೆಂಗಳೂರು ಕಾರ್ಯಕ್ರಮ ನಿರ್ವಾಹಕ ಮುಕೇಶ್ ಎಸ್., ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ರಾಜೇಶ ಎಸ್., ನಿರ್ದೇಶಕ (ರಿಸರ್ಚ್)ರಾದ ಮಂಜಪ್ಪ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ.ನಾಗೇಶ್ ಎಚ್.ಆರ್., ಕಾರ್ಯಕ್ರಮ ಸಂಯೋಜಕಿ ಪ್ರಣಮ್ಯಾ ಮೊದಲಾದವರು ಉಪಸ್ಥಿತರಿದ್ದರು.

share
Next Story
X