Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾವು ತಪ್ಪು ಮಾಡಿದ್ರೆ ತನಿಖೆ ಮಾಡಲಿ:...

ನಾವು ತಪ್ಪು ಮಾಡಿದ್ರೆ ತನಿಖೆ ಮಾಡಲಿ: ಡಿ.ಕೆ.ಶಿವಕುಮಾರ್

ಮತದಾರರ ಪಟ್ಟಿ ಅಕ್ರಮ ಆರೊಪ ವಿಚಾರ

26 Nov 2022 5:53 PM IST
share
ನಾವು ತಪ್ಪು ಮಾಡಿದ್ರೆ ತನಿಖೆ ಮಾಡಲಿ: ಡಿ.ಕೆ.ಶಿವಕುಮಾರ್
ಮತದಾರರ ಪಟ್ಟಿ ಅಕ್ರಮ ಆರೊಪ ವಿಚಾರ

ಬೆಂಗಳೂರು, ನ.26: ಮತದಾರರ ಪಟ್ಟಿಯಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರು, ಪರಿಶಿಷ್ಟರ ಮತಗಳನ್ನು ತೆಗೆದುಹಾಕಲಾಗುತ್ತಿದೆ. ಆರ್.ಆರ್.ನಗರದಲ್ಲಿ ‘ಗೌಡ’ ಎಂಬ ಹೆಸರಿದ್ದರೆ ಎರಡು ಹೆಸರು ಉಳಿಸಿಕೊಂಡು ಮೂರು ಹೆಸರುಗಳನ್ನು ತೆಗೆಯುತ್ತಾರೆ. ಇದರಲ್ಲಿ ಮಂತ್ರಿ, ಶಾಸಕರು ಇದ್ದಾರೆ. ಶಾಸಕರ ಪತ್ರಗಳು ಈ ಸಂಸ್ಥೆಯ ಕಚೇರಿಯಲ್ಲಿ ಸಿಕ್ಕಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡುವುದಾಗಿ ಹೇಳಿದ್ದಾರೆ. ಅವರು ಕೇಸು ಹಾಕಲಿ. ಮತದಾರರ ಮಾಹಿತಿ ಕಳವು ವಿಚಾರವಾಗಿ ನಾವು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಮೇಲಿನವರ ಆದೇಶದ ಮೇರೆಗೆ ನಾವು ಕೆಲಸ ಮಾಡಿದ್ದೇವೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದರು. ಈ ಆದೇಶ ಕೊಟ್ಟವರು ಯಾರು ಎಂಬುದು ಗೊತ್ತಾಗಬೇಕು. ಈ ಬಗ್ಗೆ ಬಿಬಿಎಂಪಿ ತನಿಖೆ ನಡೆಸಲು ಸಾಧ್ಯವಿಲ್ಲ. ಚುನಾವಣಾ ಆಯೋಗ ಅಥವಾ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಆಗಬೇಕು. ಅವರ ಉಸ್ತುವಾರಿಯಲ್ಲೇ ಚುನಾವಣೆ ಮಾಡಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಯಾವುದೇ ಮತವನ್ನು ಸೇರ್ಪಡೆ ಮಾಡುವಾಗ ಅಥವಾ ತೆಗೆಯುವಾಗ ಆಯಾ ವ್ಯಕ್ತಿಯ ಅರ್ಜಿ ಇರಬೇಕು. ಬಿಎಲ್‍ಒಗಳನ್ನು ಯಾರು ನೇಮಕ ಮಾಡಿದ್ದರು? ಈ  ಬಿಎಲ್‍ಒಗಳನ್ನು ಎಲ್ಲ 28 ಕ್ಷೇತ್ರಗಳ ಚುನಾವಣಾಧಿಕಾರಿಗಳೂ ಮಾಡಿದ್ದಾರೆ. 6-7 ಸಾವಿರ ಮಂದಿಗೆ ಬಿಎಲ್‍ಒ ಗುರುತಿನ ಚೀಟಿ ಕೊಟ್ಟಿದ್ದಾರೆ ಎಂದು ಅವರು ಹೇಳಿದರು. 

ಇದರಲ್ಲಿ ಕೆಲವರು ಅಮಾಯಕರಿದ್ದು, ಕೆಲಸಕ್ಕೆ ಎಂದು ಸೇರಿದ್ದಾರೆ. ಆದರೆ ಇದರ ಮೂಲ ಕಿಂಗ್ ಪಿನ್ ಆಗಿ ಸರಕಾರದ ಸಚಿವರು, ಶಾಸಕರಿಲ್ಲದೇ ಈ ಅಕ್ರಮ ನಡೆಯಲು ಸಾಧ್ಯವಿಲ್ಲ. ಎಲ್ಲ 28 ಕ್ಷೇತ್ರಗಳಲ್ಲಿ ಈ ಅಕ್ರಮ ನಡೆದಿದೆ. ಈ ಎಲ್ಲ ಕಡೆ ತನಿಖೆ ಆಗಬೇಕು. ಇಲ್ಲೆಲ್ಲ ಮತದಾರರ ಪಟ್ಟಿ ಮರುಪರಿಷ್ಕರಣೆ ಆಗಬೇಕು ಎಂದು ಶಿವಕುಮಾರ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡಲು ವ್ಯಕ್ತಿ ಸತ್ತಿದ್ದರೂ ಪ್ರಮಾಣ ಪತ್ರ ನೀಡಿಲ್ಲ ಎಂದರೆ ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿ ಪರಿಶೀಲಿಸಬೇಕು. ಮನೆ ಬದಲಾವಣೆ ಮಾಡಿದ್ದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಬೇಕು ಎಂದು ಅವರು ಹೇಳಿದರು.

ಆದರೆ ಇವರು ಯಾವುದೋ ಸಂಸ್ಥೆ, ಶಾಸಕರು ಹಾಗೂ ಸಚಿವರ ಕಚೇರಿಯಲ್ಲಿ ಕೂತು ಅವರಿಗೆ ಬೇಕಾದಂತೆ ಕೆಲಸ ಮಾಡಿದ್ದಾರೆ. ಇದರ ಹಿಂದೆ ದೊಡ್ಡ ಸಂಚೆ ಇದೆ. ಕೇಂದ್ರ ಸರಕಾರದ ಸಂಸ್ಥೆ ಮೂಲಕ ಖಾಸಗಿ ರೈತರ ಖಾತೆಗೆ ಲಕ್ಷಗಟ್ಟಲೆ ಹಣ ಹೇಗೆ ವರ್ಗಾವಣೆ ಆಯಿತು? ಯಾವ ಕಾರಣಕ್ಕೆ ಹಣ ನೀಡಲಾಗಿದೆ? ಈ ಬಗ್ಗೆ ತನಿಖೆ ಆಗಬೇಕು ಎಂದು ಶಿವಕುಮಾರ್ ಆಗ್ರಹಿಸಿದರು. 

ಮಂತ್ರಿಯೊಬ್ಬರು ಆರಂಭದಲ್ಲಿ ನನಗೆ ಈ ಸಂಸ್ಥೆ ಗೊತ್ತೇ ಇಲ್ಲ ಎಂದರು. ನಂತರ ಈ ಸಂಸ್ಥೆ ಗೊತ್ತಿದೆ, ಆದರೆ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಹೇಳಿದರು. ಸಚಿವರು ಹಾಗೂ ಈ ಸಂಸ್ಥೆ ನಿರ್ದೇಶಕರ ಮಧ್ಯೆ ದೂರವಾಣಿ ಮಾತುಕತೆ ಎಲ್ಲವೂ ಇದೆ. ಪೊಲೀಸರು ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಚಾರವಾಗಿ ಸತ್ಯಾಂಶ ಹೊರಬರಲಿ ಎಂದು ಅವರು ಹೇಳಿದರು.

ಮಹದೇವಪುರ ಕ್ಷೇತ್ರದಲ್ಲಿ ಶಾಸಕರ ನೇತೃತ್ವದಲ್ಲಿ ಈ ಕೆಲಸ ಮಾಡಿದ್ದೇವೆ ಎಂಬ ಅಧಿಕೃತ ಹೇಳಿಕೆ ಹೊರಬಿದ್ದಿದೆ. ಒಂದು ಕುಟುಂಬದ ಮತಗಳನ್ನು ಬೇರೆ, ಬೇರೆ ಬೂತ್ ಗಳಿಗೆ ವರ್ಗಾವಣೆ ಮಾಡಬಾರದು. ಆ ಕೆಲಸವೂ ಇಲ್ಲಿ ನಡೆದಿದೆ. ಇದೆಲ್ಲವೂ ಸರಿಯಾಗಬೇಕು. ಮತ ಕಳ್ಳತನ ವಿಚಾರ ನಕಲಿ ನೋಟು ಮುದ್ರಣ ಮಾಡಿದಷ್ಟೇ ಅಪರಾಧ. ಇದಕ್ಕೆ ಜನರೇ ಶಿಕ್ಷೆ ನೀಡಬೇಕು ಎಂದು ಶಿವಕುಮಾರ್ ಮನವಿ ಮಾಡಿದರು. 

share
Next Story
X