ತೊಕ್ಕೊಟ್ಟು: ಯುನಿವೆಫ್‌ನಿಂದ ಸೀರತ್ ವಿಚಾರಗೋಷ್ಠಿ

ಮಂಗಳೂರು: ಯುನಿವೆಫ್ ಕರ್ನಾಟಕವು ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಪ್ರಯುಕ್ತ ಹಮ್ಮಿಕೊಂಡ ಸೀರತ್ ವಿಚಾರಗೋಷ್ಠಿಯು ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.
‘ಮಾನವ ಸಮಾಜ, ಸಂಸ್ಕೃತಿ ಮತ್ತು ಪ್ರವಾದಿ ಮುಹಮ್ಮದ್ (ಸ)’ ಎಂಬ ವಿಷಯದಲ್ಲಿ ನಡೆದ ವಿಚಾರಗೋಷ್ಠಿ ಯಲ್ಲಿ ಯುನಿವೆಫ್ ಕಾರ್ಯದರ್ಶಿ ಸೈಫುದ್ದೀನ್ ವಿಷಯ ಮಂಡಿಸಿದರು. ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಸಂದೇಶ ನೀಡಿದರು.
ಅತಿಥಿಯಾಗಿ ಪತ್ರಕರ್ತ ಶಶಿಧರ್ ಪೊಯ್ಯತ್ತಬೈಲ್ ಭಾಗವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಅಭಿಯಾನ ಸಂಚಾಲಕ ಯು. ಕೆ. ಖಾಲಿದ್, ಸಹಸಂಚಾಲಕ ಉಬೈದುಲ್ಲಾ ಬಂಟ್ವಾಳ ಉಪಸ್ಥಿತರಿದ್ದರು.
ಉಮರ್ ಮುಖ್ತಾರ್ ಕಿರಾಅತ್ ಪಠಿಸಿದರು. ಹುದೈಫ್ ಕುದ್ರೋಳಿ ಅನುವಾದಿಸಿದರು. ಉಳ್ಳಾಲ ಶಾಖಾಧ್ಯಕ್ಷ ಮುಹಮ್ಮದ್ ಫಝಲ್ ಸ್ವಾಗತಿಸಿದರು.
Next Story