ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು: ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಮತ್ತು ಸಂವಿಧಾನದ ಸ್ಥಾಪಕರ ಕೊಡುಗೆ ಯನ್ನು ಗೌರವಿಸಲು ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಶನಿವಾರ ಸಂವಿಧಾನ ದಿನವನ್ನು ಆಚರಿಸಿತು.
ಪ್ರಾಂಶುಪಾಲ ಡಾ. ಸುಭಾಷಿಣಿ ಶ್ರೀವತ್ಸ ಅವರ ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆ ವಾಚನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮ ಅಧಿಕಾರಿ ಆಶಾಲತಾ ಕಾರ್ಯಕ್ರಮ ನಿರೂಪಿಸಿದರು.
Next Story