Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾವಿಂದು ಪರಿಸರದ ತುರ್ತು...

ನಾವಿಂದು ಪರಿಸರದ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ: ಸಾಹಿತಿ ರೂಪ ಹಾಸನ ಕಳವಳ

27 Nov 2022 9:48 PM IST
share
ನಾವಿಂದು ಪರಿಸರದ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ: ಸಾಹಿತಿ ರೂಪ ಹಾಸನ ಕಳವಳ

ಮೈಸೂರು,ನ.27: ನಾವಿಂದು ಪರಿಸರದ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಸಾಹಿತಿ ರೂಪ ಹಾಸನ ಕಳವಳ ವ್ಯಕ್ತಪಡಿಸಿದ್ದಾರೆ.ನಗರದ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಸಭಾಂಗಣದಲ್ಲಿ ರವಿವಾರ ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಪ್ರಕಟಿಸಿರುವ ಅವಿನಾಶ್ ಟಿಜಿಎಸ್ ವಿರಚಿತ 'ಬೆಳಕಿನ ಬೇಸಾಯ' ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ನಾವು ವಿಷಮ ಕಾಲಘಟ್ಟದಲ್ಲಿದ್ದೇವೆ. ದೇಶದ ಶೇ 60ರಷ್ಟು ಮಂದಿ ತೊಡಗಿರುವ ಕೃಷಿ ಕ್ಷೇತ್ರ ಅವನತಿಯ ಹಾದಿಯಲ್ಲಿರುವ ಧಾರುಣತೆಯನ್ನು ಕಾಣುತ್ತಿದ್ದೇವೆ. ರೈತರ ಆತ್ಮಹತ್ಯೆ ಪ್ರಕರಣಗಳು ಬೇಸಾಯದ ಬದುಕಿನ ತಲ್ಲಣಗಳ ಪ್ರತಿರೂಪವಾಗಿವೆ. ಜಾಗತಿಕ ತಾಪಮಾನ ಹಾಗೂ ಹವಾಮಾನ ವೈಪತೀತ್ಯವು ಕೃಷಿಯ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.

ಕೃಷಿಯಲ್ಲಿ ರಚನಾತ್ಮಕ, ಕ್ರಿಯಾಶೀಲ ಹಾಗೂ ಪ್ರಕೃತಿಗೆ ಹತ್ತಿರವಾದ ಪ್ರಯೋಗಗಳನ್ನು ಇಂದು ಮಾಡಬೇಕು. ಪ್ರಕೃತಿ ಧರ್ಮವನ್ನು ಅರಿಯಬೇಕು ಅನುಸರಿಸಬೇಕು. ನಮ್ಮೊಂದಿಗಿರುವ ಜೀವವೈವಿಧ್ಯವನ್ನೂ ತಿಳಿದುಕೊಳ್ಳಬೇಕು. ಪ್ರಾಕೃತಿಕ ಸಂರಚನೆ ಇರುವುದು ನಮಗಾಗಿ ಮಾತ್ರವೇ ಎಂದು ಭಾವಿಸಿದ್ದೇವೆ. ಆದರೆ, ಮನುಷ್ಯನು ಜೀವವಿಕಸನ ಪ್ರಕ್ರಿಯೆಯಲ್ಲಿ ಬಂದವರು ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ಮಕ್ಕಳಿಗೆ ಪ್ರಕೃತಿಯ ಬಗ್ಗೆ ಅರ್ಥ ಮಾಡಿಸಬೇಕು. ಇಲ್ಲದಿದ್ದರೆ ಮನುಷ್ಯ ಸಂತತಿಗೆ ಹೆಚ್ಚು ಉಳಿಗಾಲವಿಲ್ಲ ಎಂದರು.

ಸರ್ಕಾರ ಬೆಂಬಲ ನೀಡಲಿ: ಪ್ರಕೃತಿಗೆ ಹತ್ತಿರವಾದ ನೈಸರ್ಗಿಕ ಮೂಲದ ಕೃಷಿಯನ್ನು ಬೆಂಬಲಿಸುತ್ತೇವೆ ಎಂಬುದನ್ನು ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ತಿಳಿಸಬೇಕು. ಸಾಮುದಾಯಿಕ ಹಾಗೂ ಸಂಘಟನಾತ್ಮಕ ಕೃಷಿ ಪ್ರಜ್ಞೆ ಬೆಳೆಸಬೇಕು. ಎಲ್ಲೆಲ್ಲಿ ಸರ್ಕಾರಿ ಜಾಗ ಲಭ್ಯವಿದೆಯೋ ಅಲ್ಲಿ ಬೆಳಕಿನ ಬೇಸಾಯದ ಪ್ರಯೋಗಗಳನ್ನು ಮಾಡಬೇಕು. ಇದಕ್ಕೆ ಗ್ರಾಮ ಪಂಚಾಯಿತಿಗಳ ಮೂಲಕ ಸರ್ಕಾರ ಬೆಂಬಲ ನೀಡಬೇಕು. ಇದಕ್ಕೆ ಬೆಳಕು ತೋರುವಲ್ಲಿ ಬೆಳಕಿನ ಬೇಸಾಯ ಕೃತಿಯು ಸಹಕಾರಿಯಾಗಿದೆ ಎಂದು ಹೇಳಿದರು.

ನಿಸರ್ಗದೊಂದಿಗೆ ಅನುಸಂಧಾನ ಅವಶ್ಯ: ಲೇಖಕ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಕೃಷಿಯು ಸುಲಭವಲ್ಲ. ವಿಪರೀತ ತಾಳ್ಮೆ ಮತ್ತು ಶ್ರಮವನ್ನು ಬೇಡುತ್ತದೆ. ಇದಕ್ಕಾಗಿ ದೃಢ ನಿಶ್ಚಯವೂ ಇರಬೇಕಾಗುತ್ತದೆ ಎಂದರು. ಸಾಮ್ರಾಜ್ಯಗಳನ್ನು ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕಿಳಿಯಬಾರದು ಎಂದು ತಿಳಿಸಿದರು.

ನಾವು ನಿಸರ್ಗದ ಚಕ್ರವರ್ತಿಗಳೂ ಅಲ್ಲ, ಸಾಮ್ರಾಟರೂ ಅಲ್ಲ. ಅದರ ಒಂದು ಭಾಗವಷ್ಟೆ. ಅನ್ನವನ್ನು ಚಿನ್ನ ಮಾಡುವ ದುರಾಸೆ ಸಲ್ಲದು. ಪ್ರಕೃತಿಯಲ್ಲಿರುವ ಎಲ್ಲವನ್ನೂ ದೇವರೆಂದು ಭಾವಿಸಬೇಕು ಎಂದರು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರೈತರು ಬಹಳ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸುವ ಕೆಲಸ ನಡೆಯಬೇಕಿದೆ ಎಂದರು.

ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, ಬೇಸಾಯದ ಮೇಲೆ ಹಲವು ವಿಷಯಗಳಲ್ಲಿ ಬೆಳಕು ಚೆಲ್ಲುವ ಕೆಲಸವನ್ನು ಬೆಳಕಿನ ಬೇಸಾಯ ಕೃತಿಯು ಮಾಡಿದೆ ಎಂದು ತಿಳಿಸಿದರು.

ಕಾಯಕ್ರಮದಲ್ಲಿ ಲೇಖಕ ಅವಿನಾಶ್ ಟಿಜಿಎಸ್, ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ, ಪತ್ರಕರ್ತ ಅಶೋಕ್ ರಾಮ್ ಡಿ.ಆರ್. ಉಪಸ್ಥಿತರಿದ್ದರು.

share
Next Story
X