Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರಿ ಮಾದರಿ ಶಾಲೆಗಳಿಗೆ ಅನುದಾನದ ಬರ!

ಸರಕಾರಿ ಮಾದರಿ ಶಾಲೆಗಳಿಗೆ ಅನುದಾನದ ಬರ!

ಹುಸಿಯಾದ ಬಜೆಟ್ ಭರವಸೆ

ಜಿ.ಮಹಾಂತೇಶ್ಜಿ.ಮಹಾಂತೇಶ್28 Nov 2022 8:24 AM IST
share
ಸರಕಾರಿ ಮಾದರಿ ಶಾಲೆಗಳಿಗೆ ಅನುದಾನದ ಬರ!
ಹುಸಿಯಾದ ಬಜೆಟ್ ಭರವಸೆ

ಬೆಂಗಳೂರು, ನ.28: ಸರಕಾರಿ ಶಾಲೆಗಳ ಪುನಃಶ್ಚೇತನ ಮತ್ತು ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಲು 4,900 ಕೋಟಿ ರೂ. ಅನುದಾನದಲ್ಲಿ ಪ್ರತಿ ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಿ ಬೀಗಿದ್ದ ರಾಜ್ಯ ಬಿಜೆಪಿ ಸರಕಾರವು ಈ ಯೋಜನೆಗಾಗಿ ಯಾವುದೇ ಅನುದಾನವನ್ನು ಲಭ್ಯಗೊಳಿಸಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.  

2022-23ನೇ ಸಾಲಿನ ಆಯವ್ಯಯ ಘೋಷಿತ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಮಾದರಿ ಶಾಲೆಗಳ ಸ್ಥಾಪನೆ ಕುರಿತು ಚರ್ಚೆಯಾಗಿದೆ. ಈ ಸಭೆಯ ನಡವಳಿಗಳ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಹೋಬಳಿ ಮಟ್ಟದಲ್ಲಿ ಮೂಲಭೂತ ಸೌಕರ್ಯವಿರುವ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಯಾವುದೇ ಅನುದಾನ ನಿಗದಿಯಾಗದ ಕಾರಣ ಶಾಸಕರ ನಿಧಿಯಿಂದ ಶಾಸಕರ ಸಹಕಾರದೊಂದಿಗೆ ಕ್ರಮ ವಹಿಸಲು ನಿರ್ದೇಶಿಸಲಾಗಿತ್ತು. ಅದರಂತೆ 1,441 ಶಾಲೆಗಳನ್ನು ಗುರುತಿಸಿ 4,900 ಕೋಟಿ ರೂ. ಅನುದಾನ ಅಗತ್ಯವಿದ್ದು ಅಂದಾಜು ಆಯವ್ಯಯ ಬೇಡಿಕೆಗಾಗಿ ಪ್ರಸ್ತಾವನೆ ಕಳುಹಿಸಲಾಗಿತ್ತು. ಆದರೆ ಪ್ರಸಕ್ತ ಸದರಿ ಕಾರ್ಯಕ್ರಮಕ್ಕೆ ಯಾವುದೇ ಅನುದಾನ ಲಭ್ಯವಿಲ್ಲದ ಕಾರಣ ಶಿಕ್ಷಣ ಸಚಿವರ ಸಭೆಯಲ್ಲಿ ಚರ್ಚಿಸಿದಂತೆ ಈಗಿರುವ ಹಳೆಯ ಶಾಲೆಗಳಲ್ಲಿ ಲಘು ಸಾಧನಗಳನ್ನು ಅಳವಡಿಸಿಕೊಂಡು ಮಾದರಿ ಶಾಲೆಗಳನ್ನಾಗಿ ಅಭಿವೃದ್ದಿಪಡಿಸಲು ಕ್ರಮವಹಿಸಬೇಕು ಎಂದು ಸಚಿವ ನಾಗೇಶ್ ಅವರು ಸೂಚಿಸಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಸಭೆಯ ಗಮನಕ್ಕೆ ತಂದಿರುವುದು ನಡವಳಿಯಿಂದ ಗೊತ್ತಾಗಿದೆ. 

ಸಚಿವರ ಸೂಚನೆಯಂತೆ ಮಕ್ಕಳ ಸಂಖ್ಯೆ ಹೆಚ್ಚು ಇರುವ, ಕನಿಷ್ಠ ಮೂಲಭೂತ ಸೌಕರ್ಯ ಹೊಂದಿರುವ ಶಾಲೆಗಳನ್ನು ಗುರುತಿಸಿ ಮಾದರಿ ಶಾಲೆಗಳನ್ನಾಗಿ ಘೋಷಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸಭೆಯಲ್ಲಿ ತಿಳಿಸಿದ್ದಾರೆ. 

ಸರಕಾರಿ ಶಾಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಸಾಧ್ಯ ಆಗದೇ ಇರುವುದರಿಂದ ಶೈಕ್ಷಣಿಕ ಸಾಧನೆ ಕುಂಠಿತಗೊಂಡು, ಅವು ಮುಚ್ಚುವ ಸ್ಥಿತಿಗೆ ಬಂದಿರುವ ಕಾರಣ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ರಾಜ್ಯದ 5,631 ಗ್ರಾಮ ಪಂಚಾಯಿತಿಗಳ ಕೇಂದ್ರ ಸ್ಥಾನದಲ್ಲಿ ತಲಾ ಒಂದರಂತೆ ಮಾದರಿ ಶಾಲೆಗಳನ್ನು ರೂಪಿಸಲು ಮುಂದಾಗಿತ್ತು.

ಪಠ್ಯದ ಜೊತೆಗೆ ದೈಹಿಕ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣಕ್ಕೂ ಪ್ರಾಮುಖ್ಯತೆ ನೀಡಿ ಮಕ್ಕಳ ದಾಖಲಾತಿ ಹೆಚ್ಚಿಸುವ ಉದ್ದೇಶವೂ ಹೊಂದಿತ್ತು. ಸುಸಜ್ಜಿತ ಬೋಧನಾ ಕೊಠಡಿ, ಮುಖ್ಯೋಪಾಧ್ಯಾಯರ ಕೊಠಡಿ, ಸಿಬ್ಬಂದಿ, ಗಣಕಯಂತ್ರ ಕೊಠಡಿ, ವಿದ್ಯಾರ್ಥಿಗಳಿಗೆ ಸಮರ್ಪಕ ಆಸನ ವ್ಯವಸ್ಥೆ, ಉತ್ತಮ ಗ್ರಂಥಾಲಯ, ಪ್ರಯೋಗಾಲಯ, ಬಾಲಕರು ಹಾಗೂ ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ, ಅಡುಗೆ ಕೋಣೆ, ಊಟದ ಕೋಣೆ, ಸುಸಜ್ಜಿತ ಆಟದ ಮೈದಾನ, ರಂಗ ಮಂಟಪ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶಾಲಾ ಕೈತೋಟ, ವ್ಯವಸಾಯೋಪಕರಣಗಳು, ಟೈಲರಿಂಗ್ ಮಷಿನ್, -ಶ್ರವಣ ಉಪಕರಣಗಳು, ಚಿತ್ರಕಲೆ ಸಾಮಗ್ರಿಗಳು, ಸಂಗೀತ ಉಪಕರಣಗಳು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಈ ಮಾದರಿ ಶಾಲೆಯಲ್ಲಿ ಒದಗಿಸಲಾಗುವುದು ಎಂದು ಹೇಳಲಾಗಿತ್ತು. 

ಪಂಚಾಯಿತಿಯ ಕೇಂದ್ರ ಭಾಗದಲ್ಲಿದ್ದು ಉತ್ತಮ ರಸ್ತೆ ಸಂಪರ್ಕ ಹೊಂದಿರುವ ಹಿರಿಯ ಪ್ರಾಥಮಿಕ ಶಾಲೆ ಮತ್ತು  ವಿಶಾಲವಾದ ಆಟದ ಮೈದಾನ, ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿರುವ ಶಾಲೆಗಳನ್ನು ವಿಲೀನಗೊಳಿಸಿ ಮಾದರಿ ಶಾಲೆಯನ್ನಾಗಿಸಲು ಮುಂದಾಗಿದ್ದನ್ನು ಸ್ಮರಿಸಬಹುದು.

ರಾಜ್ಯದಲ್ಲಿ ಹೋಬಳಿ ಮಟ್ಟದಲ್ಲಿ ಒಟ್ಟು 1,441 ಶಾಲೆಗಳನ್ನು ಗುರುತಿಸಿದ್ದ ಸರಕಾರವು 4,900 ಕೋಟಿ ರೂ. ಅನುದಾನದಲ್ಲಿ ಮಾದರಿ ಶಾಲೆಗಳನ್ನು ತೆರೆಯಲು ಯೋಜಿಸಿತ್ತು. ಆದರೆ ಇದಕ್ಕೆ ಅನುದಾನವನ್ನೇ ಲಭ್ಯವಾಗಿಸಿಲ್ಲ. ಅಲ್ಲದೇ ಅನುದಾನ ಲಭ್ಯವಿಲ್ಲದ ಕಾರಣ ಈಗಿರುವ ಹಳೆಯ ಶಾಲೆಗಳಲ್ಲಿ ಲಘು ಸಾಧನಗಳು (Soft Components) ಅಳವಡಿಸಿಕೊಂಡು ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ವಹಿಸಬೇಕು ಎಂದು ಸಚಿವ ಬಿ.ಸಿ. ನಾಗೇಶ್ ಅವರು ಸೂಚಿಸಿದ್ದರು ಎಂಬುದು ನಡವಳಿಯಿಂದ ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X