ಪ್ರಹ್ಲಾದ್ ಜೋಶಿಯನ್ನು ಭೇಟಿಯಾದ ರಮೇಶ್ ಜಾರಕಿಹೊಳಿ
![ಪ್ರಹ್ಲಾದ್ ಜೋಶಿಯನ್ನು ಭೇಟಿಯಾದ ರಮೇಶ್ ಜಾರಕಿಹೊಳಿ ಪ್ರಹ್ಲಾದ್ ಜೋಶಿಯನ್ನು ಭೇಟಿಯಾದ ರಮೇಶ್ ಜಾರಕಿಹೊಳಿ](https://www.varthabharati.in/sites/default/files/images/articles/2022/11/28/358017-1669627303.gif)
ಹುಬ್ಬಳ್ಳಿ, ನ.28: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕೂಗು ಕೇಳಿಬರುತ್ತಿರುವುದರ ನಡುವೆಯೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ.
ಹುಟ್ಟುಹಬ್ಬದ ನೆಪದಲ್ಲಿ ಕಳೆದ ರಾತ್ರಿ ಕೇಂದ್ರ ಸಚಿವರನ್ನ ಭೇಟಿಯಾಗಿರುವ ಜಾರಕಿಹೊಳಿ ಕೆಲಹೊತ್ತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕೂಡ ಭೇಟಿಯಾದ ರಮೇಶ್ ಜಾರಕಿಹೊಳಿ, ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
![](https://www.varthabharati.in/sites/default/files/images/galllery/2022/11/28/jaraki.jpeg)
Next Story