Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ.29ರಂದು ದಿಲ್ಲಿಗೆ; ರಾಜ್ಯ ಗಡಿ...

ನ.29ರಂದು ದಿಲ್ಲಿಗೆ; ರಾಜ್ಯ ಗಡಿ ವಿಚಾರವಾಗಿ ವಕೀಲರು, ಕೇಂದ್ರ ಸಚಿವರ ಜೊತೆ ಚರ್ಚೆ: ಸಿಎಂ ಬೊಮ್ಮಾಯಿ

'ಮಂಡ್ಯ, ಮೈಸೂರಿನಲ್ಲಿ ಭತ್ತ ಖರೀದಿ ಕೇಂದ್ರ'

28 Nov 2022 3:08 PM IST
share
ನ.29ರಂದು ದಿಲ್ಲಿಗೆ; ರಾಜ್ಯ ಗಡಿ ವಿಚಾರವಾಗಿ ವಕೀಲರು, ಕೇಂದ್ರ ಸಚಿವರ ಜೊತೆ ಚರ್ಚೆ: ಸಿಎಂ ಬೊಮ್ಮಾಯಿ
'ಮಂಡ್ಯ, ಮೈಸೂರಿನಲ್ಲಿ ಭತ್ತ ಖರೀದಿ ಕೇಂದ್ರ'

ಮೈಸೂರು, ನ.28: ನಾನು ನ.29ರಂದು ಹೊಸದಿಲ್ಲಿಗೆ ತೆರಳಲಿದ್ದು, ಹಿರಿಯ ವಕೀಲ ಮುಕುಲ್ ರೋಹ್ಟಗಿಯವರನ್ನು ಭೇಟಿಯಾಗಲಿದ್ದು, ಗಡಿವಿಚಾರದ ಬಗ್ಗೆ ಚರ್ಚೆ ನಡೆಸಲಿದ್ದೇನೆ. ಅಲ್ಲದೆ ಕೇಂದ್ರ ಕೈಗಾರಿಕಾ ಸಚಿವರು, ಜಲಸಂಪನ್ಮೂಲ ಸಚಿವರನ್ನೂ ಸಹ ಭೇಟಿಯಾಗುವ ಉದ್ದೇಶವಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಮಹಾರಾಷ್ಟ್ರದೊಂದಿಗಿನ ಗಡಿ ವಿವಾವಕ್ಕೆ ಸಂಬಂಧಿಸಿ ನ.30ರಂದು ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಇದೆ. ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಮೂರ್ತಿ ಶಿವರಾಜಪಾಟೀಲ್ ಅವರನ್ನು ನೇಮಿಸಲಾಗಿದ್ದು, ಸಭೆ ಕೂಡ ನಡೆಸಲಾಗಿದೆ. ನ.30ರಂದು ಗಡಿ ವಿಚಾರದ ಬಗ್ಗೆ ಕಾನೂನು ಸಮರಕ್ಕೆ ರಾಜ್ಯ ಸಿದ್ಧವಿದ್ದು, ರಾಜ್ಯದ ನಿಲುವು, ಕಾನೂನುಗಳ ಬಗ್ಗೆ ವಾದ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

 ಮಹಾರಾಷ್ಟ್ರದ ಗಡಿಭಾಗದ ಗ್ರಾಮದ ಜನರು, ಕರ್ನಾಟಕಕ್ಕೆ ಸೇರುವುದಾಗಿ ಮನವಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯ ಸದ್ಯಕ್ಕೆ ನ್ಯಾಯಾಲಯದಲ್ಲಿರುವುದರಿಂದ ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ ಎಂದರು.

ಮಂಡ್ಯ ಹಾಗೂ ಮೈಸೂರಿನಲ್ಲಿ ಭತ್ತ ಖರೀದಿ ಕೇಂದ್ರ:

ಭತ್ತ ಖರೀದಿ ಕೇಂದ್ರವನ್ನು ಮಂಗಳೂರಿನಲ್ಲಿ ಮಾತ್ರ ತೆರೆಯಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಂಗಳೂರಿನಲ್ಲಿ ಕುಚ್ಚಲಕ್ಕಿಯನ್ನು ಜನರು ಬಳಸುವುದರಿಂದ, ಈ ಭಾಗದಲ್ಲಿ ಕುಚ್ಚಲಕ್ಕಿಯ ಖರೀದಿ ಮಾಡಲಾಗುತ್ತಿದೆ. ಭತ್ತವನ್ನು ರಾಜ್ಯದೆಲ್ಲೆಡೆಯಿಂದ ಖರೀದಿಸಲಾಗುವುದು. ಉತ್ತರ ಕರ್ನಾಟಕದಲ್ಲಿ ಗಂಗಾವತಿ, ಸಿಂಧನೂರು, ಮಂಡ್ಯ ಹಾಗೂ ಮೈಸೂರುಗಳಲ್ಲೂ ಖರೀದಿಸಲಾಗುವುದು ಎಂದರು.

ಸಂವಿಧಾನದ ಚೌಕಟ್ಟಿನೊಳಗೆ ಕ್ರಮ :

ಹಿಂದುಳಿದ ವರ್ಗದ ಮೀಸಲಾತಿಗೆ ಸಂಬಂಧಿಸಿದಂತೆ, ಎಲ್ಲ ಸಮುದಾಯಗಳ ಆಕಾಂಕ್ಷೆಗಳು ಹೆಚ್ಚಾಗಿದೆ. ಆದರೆ ಸಂವಿಧಾನದ ಚೌಕಟ್ಟಿನೊಳಗೆ ಎಲ್ಲ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಹಿಂದುಳಿದ ವರ್ಗ ಆಯೋಗವಿದೆ. ಸಮುದಾಯಗಳ ಮೀಸಲಾತಿ ಹೆಚ್ಚಳ ಮನವಿಯನ್ನು ಮೊದಲು ಪರಿಶೀಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ತನಿಖೆಯ ನಂತರ ವಿಷಯಗಳು ಸ್ಪಷ್ಟವಾಗಲಿವೆ :

ಬೆಂಗಳೂರಿನಲ್ಲಿ ವೆಬ್ ಸೈಟೊಂದರ ಮೂಲಕ ನಕಲಿ ಆಧಾರ್ ಕಾರ್ಡ್, ವೋಟರ್ ಐಡಿಯನ್ನು ಪಡೆಯಬಹುದು, ಮಂಗಳೂರಿನ ಬಾಂಬ್ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ಕೂಡ ಇಂತಹದೇ ನಕಲಿ ದಾಖಲೆಗಳನ್ನು ಪಡೆದಿರುವುದು ಬೆಳಕಿಗೆ ಬಂದಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಂತಹ ಬಹಳಷ್ಟು ವೆಬ್ ಸೈಟ್ ಗಳಿವೆ. ಮತ ಪರಿಷ್ಕರಣೆ ಹಾಗೂ ಮತದಾರರಿಗೆ ಸಂಬಂಧಿಸಿದಂತೆ ತನಿಖೆ ಈಗಾಗಲೇ ನಡೆಯುತ್ತಿದ್ದು, ತನಿಖೆಯ ನಂತರ ಈ ಎಲ್ಲ ವಿಷಯಗಳೂ ಸ್ಪಷ್ಟವಾಗಲಿವೆ ಎಂದರು.

ವಿಪಕ್ಷಗಳ ಸಹಕಾರ :

ಗಡಿ ವಿಚಾರಗಳ ಬಗ್ಗೆ ವಿಪಕ್ಷಗಳ ಸಹಕಾರವಿದೆಯೇ ಎಂಬುದಕ್ಕೆ ಉತ್ತರ ನೀಡಿ, ರಾಜ್ಯ ಗಡಿ, ನೆಲ, ಜಲಗಳ ವಿಚಾರದಲ್ಲಿ ವಿಪಕ್ಷಗಳು ಸಹಕಾರ ನೀಡುತ್ತಿವೆ. ಆದರೆ ರಾಜಕಾರಣದಲ್ಲಿ ಅವರವರ ರಾಜಕಾರಣವನ್ನು ಎಲ್ಲ ಪಕ್ಷಗಳೂ ಮಾಡುತ್ತವೆ ಎಂದರು.

ಮೈಸೂರಿನ ಪಾರಂಪರಿಕ ಕಟ್ಟಡಗಳ ದುರಸ್ತಿ ಬಗ್ಗೆ ಚರ್ಚಿಸಿ ತೀರ್ಮಾನ :

ಮೈಸೂರಿನಲ್ಲಿ ವಿಮಾನ ನಿಲ್ದಾಣದ ಅಭಿವೃದ್ಧಿ ಅನುದಾನ ನೀಡಲಾಗಿದೆ. ಆದರೆ ಮೈಸೂರಿನಲ್ಲಿನ ಪಾರಂಪರಿಕ ಕಟ್ಟಡಗಳು ಒಂದೊಂದಾಗಿ ಕುಸಿಯುತ್ತಿರುವ ಬಗ್ಗೆ ಉತ್ತರಿಸಿ, ಈ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಪಡೆದು, ಕಟ್ಟಡಗಳ ದುರಸ್ತಿಗಾಗಿ ಹಣಕಾಸಿನ ವ್ಯವಸ್ಥೆಗಳ ಬಗ್ಗೆ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

 ಏಕರೂಪ ನಾಗರಿಕ ಸಂಹಿತೆ :

ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಬಿಜೆಪಿ  30 ವರ್ಷಗಳಿಂದಲೂ ಹೇಳುತ್ತಿದೆ. ಕೆಲವು ರಾಜ್ಯಗಳಲ್ಲಿ ಈ ಸಂಹಿತೆಯನ್ನು ಜಾರಿಗೆ ತರಲು ಸಮಿತಿಗಳನ್ನು ರಚಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ ಈ ಬಗೆಗಿನ ಬೆಳವಣಿಗೆ, ಸಂವಿಧಾನದಲ್ಲಿನ ಅವಕಾಶಗಳ ಸಂಪೂರ್ಣ ಮಾಹಿತಿಯನ್ನು ಪಡೆದು, ನಂತರ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದರು.

share
Next Story
X