Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.1ರಿಂದ ಎನ್‌ಎಸ್‌ಯುಐನಿಂದ 'ಕ್ಯಾಂಪಸ್...

ಡಿ.1ರಿಂದ ಎನ್‌ಎಸ್‌ಯುಐನಿಂದ 'ಕ್ಯಾಂಪಸ್ ಗೇಟ್ ಮೀಟ್': ಕೀರ್ತಿ ಗಣೇಶ್

28 Nov 2022 3:19 PM IST
share
ಡಿ.1ರಿಂದ ಎನ್‌ಎಸ್‌ಯುಐನಿಂದ ಕ್ಯಾಂಪಸ್ ಗೇಟ್ ಮೀಟ್: ಕೀರ್ತಿ ಗಣೇಶ್

ಮಂಗಳೂರು, ನ. 28: ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವರಿಗೆ ನೆರವು, ಸಹಕಾರ ನೀಡುವ ನಿಟ್ಟಿನಲ್ಲಿ ಎನ್‌ಎಸ್‌ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್ ಆಯೋಜಿಸಲಾಗಿದೆ ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಎಸ್‌ಯುಐ ದ.ಕ. ಜಿಲ್ಲಾ ಘಟಕದ ವತಿಯಿಂದ ಚಿಂತನ ಮಂಥನ ಕಾರ್ಯಕ್ರಮ ರವಿವಾರ ನಡೆದಿದ್ದು, ಅದರಲ್ಲಿ ಜಿಲ್ಲೆಯ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಕ್ಯಾಂಪಸ್ ಗೇಟ್ ಮೀಟ್ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡುವ ಎನ್‌ಎಸ್‌ಯುಐ ಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಫಾರಂ ನೀಡಿ ಅದರಲ್ಲಿ ಸಮಸ್ಯೆಗಳನ್ನು ಬರೆದು ತಿಳಿಸುವಂತೆ ಸೂಚಿಸಲಿದ್ದಾರೆ. ಬಳಿಕ ಸಮಸ್ಯೆಗಳ ಪಟ್ಟಿ ಮಾಡಿಕೊಂಡು ಅದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೋರಾಟವನ್ನು ರೂಪಿಸಲಾಗುವುದು ಎಂದು ಅವರು ಹೇಳಿದರು.

ಹಿಂದೆಂದಿಗಿಂತಲೂ ಹೆಚ್ಚಾಗಿ ಪ್ರಸಕ್ತ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿಶ್ವವಿದ್ಯಾನಿಲಯಗಳಲ್ಲಿ ಪರೀಕ್ಷೆ ನಡೆದು ಒಂದು ವರ್ಷ ಕಳೆದರೂ ಫಲಿತಾಂಶ ಪ್ರಕಟವಾಗುತ್ತಿಲ್ಲ. ಎನ್‌ಇಪಿಯನ್ನು ರಾಜ್ಯದಲ್ಲಿ ಪ್ರಥಮವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆಯಾದರೂ ಈ ಬಗ್ಗೆ ಕುಲಪತಿ, ಉಪ ಕುಲಪತಿಗಳಿಗೆ ಸ್ಪಷ್ಟತೆ ಇಲ್ಲವಾಗಿದೆ. ಶಿಕ್ಷಣ ಸಚಿವರು ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಕೀರ್ತಿ ಗಣೇಶ್ ದೂರಿದರು.

ಇತ್ತೀಚೆಗೆ ತಿಪಟೂರಿನಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಗಮನಕ್ಕೆ ತರುವ ನಿಟ್ಟಿನಲ್ಲಿ ಶಿಕ್ಷಣ ಸಚಿವರ ಮನೆಗೆ ಎನ್‌ಎಸ್‌ಯುಐ ಪ್ರತಿನಿಧಿಗಳು ತೆರಳಿದರೆ ಮನೆ ಸುಡಲು ಬಂದಿದ್ದಾರೆಂಬ ರೀತಿ ಸುಳ್ಳನ್ನು ಬಿಂಬಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸಾಕ್ಸ್ ಕೇಳಿದರೆ ಸಾಕ್ಸ್ ಇದ್ದರೆ ಮಾತ್ರ ಕಲಿಯುವುದೇ ಎಂಬ ಹೇಳಿಕೆ ನೀಡುವ ಶಿಕ್ಷಣ ಸಚಿವರ ಮಕ್ಕಳು ವಿದೇಶದಲ್ಲಿ ಶಿಕ್ಷಣ ಪಡೆಯುತ್ತಾರೆ. ಹಾಗಿದ್ದರೆ ವಿದೇಶದಲ್ಲಿ ಮಾತ್ರ ಶಿಕ್ಷಣ ಪಡೆಯಬಹುದೇ ಎಂದು ಶಿಕ್ಷಣ ಸಚಿವರನ್ನು ನಾವೂ ಕೇಳಬಹುದಲ್ಲವೇ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಭರತ್ ಗೌಡ, ಸುಹಾನ್ ಆಳ್ವ, ಅನ್ವಿತ್ ಕಟೀಲ್, ಸುಪ್ರೀದ್ ಗೌಡ, ಪವನ್ ಸಾಲ್ಯಾನ್, ಫಾರೂಕ್ ಮೊದಲಾದವರು ಉಪಸ್ಥಿತರಿದ್ದರು.


ಪ್ರತಿಭಾವಂತ ವಿದ್ಯಾಥಿಗಳಿಗೆ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ

ಎನ್‌ಎಸ್‌ಯುಐ ವತಿಯಿಂದ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಪುತ್ತೂರು ಕ್ಷೇತ್ರಗಳಲ್ಲಿ ತಲಾ 250ರಂತೆ ವಿದ್ಯಾರ್ಥಿಗಳಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಮಂಗಳೂರು ದಕ್ಷಿಣ ವಿಧಾಸನಭಾ ಕ್ಷೇತ್ರದಲ್ಲಿ ಸುಮಾರು 1,000 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಶೀಘ್ರವೇ ಪುರಸ್ಕಾರ ನೀಡಲಾಗುವುದು ಎಂದು ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ತಿಳಿಸಿದರು.

share
Next Story
X