Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ತನ್ನನ್ನು ಕಸಬ್ ಎಂದು ಕರೆದ...

ಉಡುಪಿ: ತನ್ನನ್ನು ಕಸಬ್ ಎಂದು ಕರೆದ ಪ್ರಾಧ್ಯಾಪಕರನ್ನು ತರಾಟೆಗೆ ತೆಗದುಕೊಂಡ ವಿದ್ಯಾರ್ಥಿ

28 Nov 2022 4:51 PM IST
share
ಉಡುಪಿ: ತನ್ನನ್ನು ಕಸಬ್ ಎಂದು ಕರೆದ ಪ್ರಾಧ್ಯಾಪಕರನ್ನು ತರಾಟೆಗೆ ತೆಗದುಕೊಂಡ ವಿದ್ಯಾರ್ಥಿ

ಉಡುಪಿ, ನ.28: ತಗರತಿಯಲ್ಲಿ ತನ್ನನ್ನು ಭಯೋತ್ಪಾದಕನಿಗೆ ಹೋಲಿಸಿ ಕಸಬ್ ಎಂದು ಕರೆದ ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿಯೋರ್ವ ತೀವ್ರ ಆಕ್ಷೇಪ ವ್ಯಕ್ತಪಡಿಸುವ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕರ ಈ ಹೇಳಿಕೆಗೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಮಣಿಪಾಲ ಮಾಹೆಯ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂಜಿನಿಯರಿಂಗ್ ವಿಭಾಗದ ತರಗತಿಯಲ್ಲಿ ಮೂರು ನಾಲ್ಕು ದಿನಗಳ ಹಿಂದೆ ನಡೆದಿರುವುದಾಗಿ ತಿಳಿದುಬಂದಿದೆ. ವಿದ್ಯಾರ್ಥಿ ಹಂಝಾ ತನ್ನನ್ನು ಭಯೋತ್ಪಾದಕ ಎಂದು ಕರೆದ ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಅವರನ್ನು ಪ್ರಶ್ನಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

ವೀಡಿಯೊದಲ್ಲಿ ವಿದ್ಯಾರ್ಥಿ, ಪ್ರಾಧ್ಯಾಪಕರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿ, "ನೀವು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ" ಎಂದು ಪ್ರಶ್ನಿಸಿದ್ದಾರೆ. ನಾನು ಹಾಸ್ಯದ ಧಾಟಿಯಲ್ಲಿ ಇದನ್ನು ಹೇಳಿದ್ದೇನೆ ಎಂದ ಪ್ರಾಧ್ಯಾಪಕರಿಗೆ, 26/11 ಘಟನೆ ಹಾಸ್ಯ ಅಲ್ಲ ಮತ್ತು ಮುಸ್ಲಿಮನಾಗಿ ಈ ರೀತಿಯ ವರ್ತನೆಯನ್ನು ಪ್ರತಿನಿತ್ಯ ಅನುಭವಿಸುತ್ತಿದ್ದೇವೆ ಎಂದು ವಿದ್ಯಾರ್ಥಿ ತಿಳಿಸಿದ್ದಾರೆ.

ಇದೇ ವೇಳೆ ವಿದ್ಯಾರ್ಥಿಯ ಕ್ಷಮೆಯಾಚಿಸಿದ ಪ್ರಾಧ್ಯಾಪಕರು, "ನೀನು ನನ್ನ ಮಗನ ಸಮಾನ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿ, ನೀವು ನಿಮ್ಮ ಮಗನನ್ನು ಕೂಡ ಹಾಗೆ ನಡೆಸಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದಾರೆ. ನೀವು ಕ್ಷಮಿಸಿದ ಮಾತ್ರಕ್ಕೆ ನಿಮ್ಮ ಆಲೋಚನೆ ಬದಲಾಗಲು ಸಾಧ್ಯವೇ ಎಂದು ವಿದ್ಯಾರ್ಥಿ ಕೇಳಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರ ವರ್ತನೆಗೆ ವ್ಯಾಪಾಕ ಆಕ್ರೋಶ ಮತ್ತು ಆಕ್ಷೇಪ ವ್ಯಕ್ತವಾಗುತ್ತಿವೆ.

ಈ ವಿವಾದದ ಬಳಿಕ ಹೇಳಿಕೆ ನೀಡಿರುವ ವಿದ್ಯಾರ್ಥಿ ಹಂಝಾ, ಜನಾಂಗೀಯ ಟೀಕೆ ಎಂದಿಗೂ ಒಪ್ಪುವಂತದಲ್ಲ. ನಾನು ನನ್ನ ಪ್ರಾಧ್ಯಾಪಕರನ್ನು ಪ್ರಶ್ನಿಸುವ ವೀಡಿಯೊ ವೈರಲ್ ಆಗಿದೆ. ಈ ದೇಶ ಕಂಡ ದೊಡ್ಡ ಭಯೋತ್ಪಾದಕರಲ್ಲಿ ಒಬ್ಬನಾದ ಕಸಬ್ ಎಂಬ ಸ್ವೀಕಾರಾರ್ಹವಲ್ಲದ ಹೆಸರಿನಿಂದ ಅವರು ನನ್ನನ್ನು ಕರೆದಿರುವುದೇ ನನ್ನ ಆಕ್ಷೇಪಕ್ಕೆ ಕಾರಣ. ಬಳಿಕ ನಾನು ಪ್ರಾಧ್ಯಾಪಕರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು ಕ್ಷಮೆಯಾಚಿಸಿದ್ದಾರೆ. ಪ್ರಾಧ್ಯಾಪಕರಿಂದ ತಪ್ಪಾಗಿದೆ. ಅದೂ ಕೂಡ ನಾನು ಮೆಚ್ಚುವ ವ್ಯಕ್ತಿ ಹೀಗೆ ಮಾಡಿರುವುದು ಬೇಸರ ತಂದಿದೆ. ಆದರೆ ಒಂದು ಬಾರಿ ಇದನ್ನು ಕ್ಷಮಿಸಿ ಇಲ್ಲಿಗೇ ಬಿಟ್ಟು ಬಿಡಬೇಕು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಂಐಟಿ, ಈ ಘಟನೆ ಗುರುವಾರ ಅಥವಾ ಶುಕ್ರವಾರ ನಮ್ಮ ಸಂಸ್ಥೆಯಲ್ಲಿ ನಡೆದಿದೆ. ಈ ಬಗ್ಗೆ ಆಂತರಿಕ ವಿಚಾರಣೆ ನಡೆಯುವವರೆಗೆ ತರಗತಿ ತೆಗೆದುಕೊಳ್ಳದಂತೆ ಸಂಬಂಧಪಟ್ಟ ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕರಿಗೆ ಸೂಚನೆ ನೀಡಿದ್ದೇವೆ. ನಮ್ಮ ಕ್ಯಾಂಪಸ್ ನಲ್ಲಿರುವ  ವೈವಿಧ್ಯತೆ ಬಗ್ಗೆ  ನಮಗೆ  ಹೆಮ್ಮೆಯಿದೆ ಹಾಗು ಇಂತಹ ಯಾವುದೇ ನಿಂದನೆಯ ವರ್ತನೆಯನ್ನು ನಾವು ಸಹಿಸುವುದಿಲ್ಲ. ಇದು ಇಂತಹ ಒಂದೇ ಘಟನೆ. ನಾವು ಧರ್ಮ, ಜಾತಿ, ಲಿಂಗ ಹಾಗು ಪ್ರಾದೇಶಿಕ ಬೇಧ ಮಾಡದೆ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕ್ಯಾಂಪಸ್ ಎಂದು ಎಂದು ಹೇಳಿದೆ.

share
Next Story
X