Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ಟೋಲ್ ಹೆಜಮಾಡಿಯಲ್ಲಿ ವಸೂಲಿಗೆ...

ಸುರತ್ಕಲ್ ಟೋಲ್ ಹೆಜಮಾಡಿಯಲ್ಲಿ ವಸೂಲಿಗೆ ಆದೇಶ : ಸ್ಮಶಾನ ಸೇರಿದ ಅಭಿನಂದನೆ ಬ್ಯಾನರ್ ಗಳು !

28 Nov 2022 5:02 PM IST
share
ಸುರತ್ಕಲ್ ಟೋಲ್ ಹೆಜಮಾಡಿಯಲ್ಲಿ ವಸೂಲಿಗೆ ಆದೇಶ : ಸ್ಮಶಾನ ಸೇರಿದ ಅಭಿನಂದನೆ ಬ್ಯಾನರ್ ಗಳು !

ಸುರತ್ಕಲ್‌, ನ.28: ಸುರತ್ಕಲ್‌ ಟೋಲ್‌ಗೇಟ್‌ ನ.30ರಿಂದ ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನವಾಗು ತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಶಾಸಕರಿಗೆ ಅಭಿನಂದನೆ ತಿಳಿಸುವ ಬೃಹತ್‌ ಬ್ಯಾನರ್‌ಗಳು ಸುರತ್ಕಲ್ ನ ಸ್ಮಶಾನ ಸೇರಿವೆ.

ಸುರತ್ಕಲ್‌ ಹೃದಯಭಾಗದಲ್ಲಿರುವ ಸ್ಮಶಾನದ ಒಳಭಾಗದಲ್ಲಿ ಹಲವು ಬ್ಯಾನರ್‌ಗಳು ಪತ್ತೆಯಾಗಿದ್ದು, "ಸುರತ್ಕಲ್‌ ಟೋಲ್‌ಗೇಟ್‌ ರದ್ದು ಮಾಡುವ ಭರವಸೆಯನ್ನು ಈಡೇರಿಸಿದ ಮಾನ್ಯ ಮಂಗಳೂರು ಲೋಕಸಭಾ ಸದಸ್ಯರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಸ್ಥಳೀಯ ಶಾಸಕರಾದ ಡಾ. ಭರತ್‌ ಶೆಟ್ಟಿ ವೈ. ರವರಿಗೆ ಹಾರ್ದಿಕ ಅಭಿನಂದನೆಗಳು" ಎಂದು ಬ್ಯಾನರ್ ಗಳಲ್ಲಿ ಮುದ್ರಿಸಲಾಗಿದೆ.

ಈ ಬ್ಯಾನರ್ ಗಳು ಜನ ಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆಗಳು ಇರುವುದರಿಂದ ಮತ್ತು ತೆರವಿಗೆ ಬಿಜೆಪಿಯ ಯಾವುದೇ ಪಾತ್ರಗಳಿಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವುದರಿಂದ ಬ್ಯಾನರ್ ಗಳನ್ನು ಸ್ಮಶಾನದಲ್ಲಿ ಇಡಲಾಗಿದೆ ಎಂದು ಹೇಳಲಾಗುತ್ತಿದೆ.‌

ಈ ಕುರಿತು ಪ್ರತಿಕ್ರಿಸಿರುವ ಟೋಲ್‌ಗೇಟ್‌ ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ, "ಟೋಲ್‌ ಗೇಟ್‌ ತೆರವುಗೊಂಡಿರುವುದು ಬಿಜೆಪಿಯ ಅಸಮರ್ಥ ಸಂಸದರು, ಶಾಸಕರಿಂದ ಅಲ್ಲ, ಅದು ಹೋರಾಟ ಸಮಿತಿ ಮತ್ತು  ಸಮಾನ ಮನಸ್ಕ ಸಂಘಟನೆಗಳ ಅವಿರತ ಹೋರಾಟದ ಫಲವಾಗಿ ತೆರವುಗೊಳ್ಳುತ್ತಿದೆ. ಟೋಲ್‌ ಗೇಟ್‌ ತೆರವಿನ ಕ್ರೆಡಿಟ್‌ ಪಡೆದುಕೊಳ್ಳುವ ಸಲುವಾಗಿ ಬಿಜೆಪಿ ಇಂತಹಾ ಫ್ಲೆಕ್ಸ್‌ಗಳನ್ನು ಅಳವಡಿಸಲು ಮುಂದಾಗಿತ್ತು. ಆದರೆ, ಬಿಜೆಪಿಯ ಒಳಗಿಂದಲೇ ಅಸಮಾಧಾನಗಳು ಇರುವುದರಿಂದ ಅವುಗಳನ್ನು ಅಳವಡಿಸದೇ ಸುರತ್ಕಲ್‌ ಸ್ಮಶಾನದಲ್ಲಿ ಮುಚ್ಚಿಡಲಾಗಿದೆ. ಇದು ಬಿಜೆಪಿಯ ಇಂದಿನ ಸ್ಥಿತಿಯನ್ನು ತೋರಿಸುತ್ತಿದೆ. ಕೇವಲ ಪ್ರಚಾರ ಮಾತ್ರ ಬಯಸುವ ಬಿಜಿಪಿಯ ಶಾಸಕರು, ಸಂಸದರು ಜನಪರವಾಗಿ ಕೆಲಸ ಮಾಡಿದ್ದರೆ, ಕಳೆದ 7 ವರ್ಷಗಳಿಂದ ಟೋಲ್‌ಗೇಟ್‌ ಇಲ್ಲಿ ಅಕ್ರಮವಾಗಿ ಸುಲಿಗೆ ಮಾಡುತ್ತಿರಲಿಲ್ಲ. ಇದು ಬಿಜೆಪಿಯ ದೌರ್ಬಲ್ಯವನ್ನು ಸೂಚಿಸುತ್ತಿದೆ" ಎಂದು ಹೇಳಿದ್ದಾರೆ.

share
Next Story
X