ಡಿ.1ರಿಂದ ಸುರತ್ಕಲ್ ಟೋಲ್ ಸಂಗ್ರಹವಿಲ್ಲ: ದ.ಕ. ಜಿಲ್ಲಾಧಿಕಾರಿ ರವಿ ಕುಮಾರ್

ಮಂಗಳೂರು, ನ. 28: ಸುರತ್ಕಲ್ ಟೋಲ್ ರದ್ದುಗೊಳಿಸಿ ಆದೇಶಿಸಿರುವಂತೆಯೇ ಡಿ. 1ರಿಂದ ಸುರತ್ಕಲ್‌ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈಗಗಾಲೇ ಸುರತ್ಕಲ್ ಟೋಲನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ವಿಲೀನಗೊಳಿಸಿರುವ ಬಗ್ಗೆ ಆದೇಶ ಹೊರಡಿಸಲಾಗಿತ್ತು.
ವಿಶೇಷವೆಂದರೆ ಜಿಲ್ಲಾಧಿಕಾರಿಯವರು ಹೊರಡಿಸಿರುವ (ನವೆಂಬರ್ 24ರಂದು ಹೊರಡಿಸಿರುವ ಅಧಿಕೃತ ಆದೇಶ ಪತ್ರ) ಆದೇಶ ಇಂದು ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಅದರಂತೆ ಡಿ. 1ರಿಂದ ಸುರತ್ಕಲ್‌ನಲ್ಲಿ ಟೋಲ್ ಸಂಗ್ರಹ ಇರುವುದಿಲ್ಲ ಎಂದು ತಿಳಿಸಲಾಗಿದೆ.
Next Story