Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಕಳ ಪುರಸಭೆಯಿಂದ ಕಲುಷಿತ ನೀರು...

ಕಾರ್ಕಳ ಪುರಸಭೆಯಿಂದ ಕಲುಷಿತ ನೀರು ಸರಬರಾಜು: ಶುಭದರಾವ್ ಆರೋಪ

28 Nov 2022 10:01 PM IST
share
ಕಾರ್ಕಳ ಪುರಸಭೆಯಿಂದ ಕಲುಷಿತ ನೀರು ಸರಬರಾಜು: ಶುಭದರಾವ್ ಆರೋಪ

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಕಲುಷಿತ ಕುಡಿಯುವ ನೀರು ಸರಬರಾಜು ಆಗುತ್ತಿದ್ದು, ಇದರಿಂದ ನಾಗರಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿವೆ ಇದರ ಬಗ್ಗೆ ಕಟ್ಟೆಚ್ಚರ ವಹಿಸುವುದು ಅತೀ ಅಗತ್ಯ ಎಂದು ಪ್ರತಿಪಕ್ಷ ಸದಸ್ಯ ಶುಭದರಾವ್ ಪುರಸಭಾ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪಿಸಿದರು.

ಪುರಸಭಾ ಅಧ್ಯಕ್ಷೆ ಸುಮಾ ಕೇಶವ್ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಪುರಸಭಾ ವ್ಯಾಪ್ತಿಗೆ ಕಲುಷಿತ ನೀರು ಸರಬರಾಜು ಆಗುತ್ತಿರುವ ಕುರಿತು ಮಾತನಾಡಿದ ಶುಭದರಾವ್, ತೆಳ್ಳಾರು ಬಲ್ಮಗುಂಡಿಯ ಕಿಂಡಿ ಅಣೆಕಟ್ಟಿನಿಂದ ರಾಮಸಮುದ್ರಕ್ಕೆ ನೀರು ಸರಬರಾಜು ಆಗುತ್ತಿದ್ದು, ರಾಮಸಮುದ್ರದ ನೀರು ಶುದ್ಧೀಕರಣ ಘಟಕ ನಿಷ್ಕ್ರಿಯಗೊಂಡು ವರ್ಷವೇ ಕಳೆದಿದ್ದು, ಅದರ ಬಗ್ಗೆ ಗಮನ ಹರಿಸಬೇಕಾಗಿದ್ದ ಆಡಳಿತ ವರ್ಗವು ನಿರ್ಲಕ್ಷ್ಯ ತೋರಿ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಇದರಿಂದ ಬೆಳ್ಳಾರಿನ ಬಲ್ಮಗುಂಡಿಯ ನೀರು ನೇರವಾಗಿ ನಾಗರಿಕರಿಗೆ ತಲುಪುತ್ತಿದೆ, ಆ ನೀರು ಕುಡಿಯಲು ಯೋಗ್ಯವಲ್ಲವೆಂದು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಯಲ್ಲಿ ಬಂದ ವರದಿಯಿಂದ ದೃಢಪಟ್ಟಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದೇ ವಿಚಾರವಾಗಿ ಮಾತನಾಡಿದ ಪ್ರತಿಪಕ್ಷ ಸದಸ್ಯ ಅಶ್ಫಕ್ ಅಹ್ಮದ್, ರಾಮಸಮುದ್ರ ಕುಡಿಯುವ ನೀರಿನ ಘಟಕ ದುರಸ್ಥಿಗೆ ಕಳೆದ ಸಾಮಾನ್ಯ ಸಭೆ ಕಳೆದು ಐದು ದಿನಗಳ ಬಳಿಕ ಜಿಲ್ಲಾಧಿಕಾರಿಯಿಂದ ಒಪ್ಪಿಗೆ ದೊರೆತಿದೆ. ಕಳೆದ ಸಾಮಾನ್ಯ ಸಭೆಯಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆದಿದ್ದು, ರೂ. 34 ಲಕ್ಷ ಅದಕ್ಕಾಗಿ ವಿನಿಯೋಗಿಸಲು ಸಾಮಾನ್ಯ ಸಭೆಯಲ್ಲಿ ಒಪ್ಪಿಗೆಗಾಗಿ ಮುಂದಿಡಲಾಗಿತ್ತು. ಮಾತ್ರವಲ್ಲದೇ ಕಂಟ್ರಾಕ್ಟರ್‌ದಾರರ ಪರವಾಗಿ ಅಭಿಯಂತರರು 10 ನಿಮಷ ಕಾಲ ಬ್ಯಾಂಟಿಂಗ್ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ಕರೆದಿರುವ ಟೆಂಡರ್‌ನಲ್ಲಿ ಏನೋ ಎಡವಟ್ಟು ನಡೆದಿದೆ. ಜಿಲ್ಲಾಧಿಕಾರಿಯ ಅನುಮತಿಯ ಪೂರ್ವದಲ್ಲಿ ಇಂಜಿನಿಯರ್ ಟೆಂಡರ್ ಕರೆದಿರುವ ಉದ್ದೇಶವಾದರೂ ಏನೆಂಬುವುದನ್ನು ಬಯಲಾಗಬೇಕೆಂದು ಆಗ್ರಹಿಸಿದರು.

ಇದೇ ವಿಚಾರದಲ್ಲಿ ಆಡಳಿತ ಪಕ್ಷದ ಸ್ಥಾಯೀ ಸಮಿತಿ ಅಧ್ಯಕ್ಷ ಯೋಗೀಶ್ ದೇವಾಡಿಗ ಮಾತನಾಡಿ, ಸ್ಥಾಯೀ ಸಮಿತಿಯಲ್ಲಿ ಕೈಗೊಳ್ಳುವ ಅಗತ್ಯ ಕಾಮಗಾರಿಗಳನ್ನು ಮಾಡುವುದಕ್ಕೆ ಅಭಿಯಂತರರು ನಾನಾ ಕಾರಣ ನೀಡಿ ತಡೆಯೊಡ್ಡುತ್ತಿದ್ದಾರೆ. 24 ಲಕ್ಷ ರೂ. ವೆಚ್ಚದಲ್ಲಿ ಟೆಂಡರ್ ಕರೆದಿರುವ ಒಳಮರ್ಮ ಏನೆಂಬುವುದು ಸಭೆಯಲ್ಲಿ ಅಭಿಯಂತರರೇ ಉತ್ತರಿಸಬೇಕು. ಸದಸ್ಯ ಕಾರ್ಯದರ್ಶಿಯಾಗಿರುವ ಪುರಸಭಾ ಮುಖ್ಯಾಧಿಕಾರಿ ಅವರು ಈ ಲೋಪದ ಜವಾಬ್ದಾರಿಯಾಗಿರುತ್ತಾರೆ ಎಂದು ಆರೋಪಿಸಿದರು.

ಪ್ರತಿಯೊಂದು ವಾರ್ಡ್ ಅಭಿವೃದ್ಧಿಯಾದಾಗ ಮಾತ್ರ ಪುರಸಭಾ ವ್ಯಾಪ್ತಿ ಸಮಗ್ರ ರೀತಿಯಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳು ಪುರಸಭೆಯಲ್ಲಿ ಸಮಬಲದಲ್ಲಿ ಚುನಾಯಿತರಾಗಿದ್ದಾರೆ. ಸಂಸದ,ಶಾಸಕರ ಬೆಂಬಲದೊಂದಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆಯಷ್ಟೇ. ಹೀಗೆಂದ ಮಾತ್ರಕ್ಕೆ ಪ್ರತಿಪಕ್ಷ ಸದಸ್ಯರನ್ನು ಹಾಗೂ ಅವರು ಪ್ರತಿನಿಧಿಸುವ ಕ್ಷೇತ್ರವನ್ನು ಪುರಸಭಾ ಅಧ್ಯಕ್ಷರು ಕಡೆಗಣಿಸಬಾರದು. ಇಂತಹದೊಂದು ಸನ್ನಿವೇಶ ನನ್ನ ವಾರ್ಡ್ನಲ್ಲಿ ಆಗಿದೆ ಎಂದು ವಿನ್ನಿಬೋಲ್ಡ್ ಮೆಂಡೋನ್ಸಾ ಆರೋಪಿಸಿದರು.

ನನ್ನ ವಾರ್ಡ್ಗೆ ಇತ್ತೀಚೆಗಷ್ಟೇ ಅಧ್ಯಕ್ಷರು ಅಗಮಿಸಿದಾಗ ನನ್ನ ಗಮನಕ್ಕೂ ತಂದಿರಲಿಲ್ಲ. ಅವರೊಂದಿಗೆ ನಾಮನಿರ್ದೇಶಿತ ಸದಸ್ಯರು ಇದ್ದರು. ಆ ಸಂದರ್ಭದಲ್ಲಿ ನನ್ನ ವಿರುದ್ಧವೇ ಮಾತನಾಡಿ, ನಿಮ್ಮ ವಾರ್ಡ್ನ ಸದಸ್ಯರು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಏನ್ನನ್ನೂ ಮಾತನಾಡುವುದಿಲ್ಲ. ಏನು ಕೆಲಸ ಮಾಡುವುದಿಲ್ಲ. ಇಲ್ಲಿನ ಸಮಸ್ಯೆ ನಮ್ಮ ಗಮನಕ್ಕೆ ತಂದು ಹೇಳೀರುವುದು ಪ್ರಜಾಪ್ರಭುತ್ವಕ್ಕೆ ನೀಡಿದ ಅಗೌರವ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿನ್ನಿಬೋಲ್ಡ್ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಧ್ಯಕ್ಷೆ ಸುಮ, ಯಾವುದೇ ಕೌನ್ಸಿಲರ್ ಬಗ್ಗೆ ಅಗೌರವ ತೋರಿಲ್ಲ. ಅಂತಹ ಪ್ರವೃತ್ತಿ ನನ್ನದಲ್ಲ ಎಂದರು.

ಸ್ವಚ್ಚತಾ ಕಾರ್ಯವು ಸಮಗ್ರ ರೀತಿಯಲ್ಲಿ ನಿರ್ವಹಿಸಲು ಅಸಾಧ್ಯವಾದರೆ ಅದಕ್ಕೆ ಕಾರಣ ನೀಡಿ ಪತ್ರ ಬರೆದಿಟ್ಟು ಮನೆಗೆ ಹೋಗಿ. ನಿಮ್ಮ ಕರ್ತವ್ಯ ಲೋಪದಿಂದಾಗಿ ನಾಗರಿಕರು ತಲೆ ತಗ್ಗಿಸುವಂತಹ ಸಂದರ್ಭ ಎದುರಾಗಿದೆ ಎಂದು ಆರೋಗ್ಯ ನೀರಿಕ್ಷಕಿ ಲೈಲಾ ಥೋಮಸ್ ಅವರ ಕರ್ತವ್ಯ ಲೋಪದ ಕುರಿತು ಶುಭದರಾವ್ ಸಭೆಯಲ್ಲಿ ಪ್ರಸ್ತಾಪಿಸಿದರು.

ಹಲವು ಬಾರಿ ನಾಗರಿಕರು ಪ್ರತಿಭಟನೆ ನಡೆಸಿದ ಬಳಿಕ ಕಾಮಗಾರಿಗೆ ಚಾಲನೆ ಎಂಬಂತೆ ಪ್ರತಿಬಿಂಬಿಸಿ ಪ್ರಚಾರದ ನಡುವೆ ಕಾಮಗಾರಿ ಕೈಗೊಳ್ಳಲಾಗಿದೆ. ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಮಾಡದೇ ಕೇವಲ ರಸ್ತೆಗೆ ಡಾಂಬರೀಕರಣ ಮಾಡುವುದರಿಂದ ಎಷ್ಟು ದಿನಗಳವರೆಗೆ ಆ ಕಾಮಗಾರಿಯ ಗುಣಮಟ್ಟ ಕಾಪಾಡಲು ಸಾಧ್ಯವೆಂದು ಪ್ರಶ್ನಿಸಿದ ಸದಸ್ಯ ಹರೀಶ್ ದೇವಾಡಿಗ, ಆನೆಕೆರೆ-ಮೂರುಮಾರ್ಗವನ್ನು ಪ್ರತಿಭಟನಾ ರಸ್ತೆ ಎಂದೇ ಮರುನಾಮಕರಣ ಲೇವಡಿ ಮಾಡಿದರು.

ಉಪಾಧ್ಯಕ್ಷೆ ಪಲ್ಲವಿ ರಾವ್, ಮುಖ್ಯಾಧಿಕಾರಿ ರೂಪಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
Next Story
X