Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅನುಮತಿಯಿಲ್ಲದಿದ್ದರೂ ನಾಡಕಚೇರಿಗಳಲ್ಲಿ...

ಅನುಮತಿಯಿಲ್ಲದಿದ್ದರೂ ನಾಡಕಚೇರಿಗಳಲ್ಲಿ ಮೀಸಲಾತಿರಹಿತ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ ವಿತರಣೆ

ಜಿ.ಮಹಾಂತೇಶ್ಜಿ.ಮಹಾಂತೇಶ್29 Nov 2022 8:32 AM IST
share
ಅನುಮತಿಯಿಲ್ಲದಿದ್ದರೂ ನಾಡಕಚೇರಿಗಳಲ್ಲಿ ಮೀಸಲಾತಿರಹಿತ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣಪತ್ರ ವಿತರಣೆ

ಬೆಂಗಳೂರು: ಮೀಸಲಾತಿ ಇಲ್ಲದೇ ಇರುವ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಅವಕಾಶಗಳಿಲ್ಲದಿದ್ದರೂ ನಾಡಕಚೇರಿಗಳಲ್ಲಿ ವಿತರಿಸುತ್ತಿರು ವುದು ಇದೀಗ ಬಹಿರಂಗವಾಗಿದೆ.

 ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಉಪಸ್ಥಿತಿಯಲ್ಲಿ 2022ರ ಅಕ್ಟೋಬರ್ 31ರಂದು ನಡೆದ ಸಭೆಗೆ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯವು ಈ ಮಾಹಿತಿಯನ್ನು ನೀಡಿದೆ. ಮಾಹಿತಿಯ ಪ್ರತಿಯು ''ಣhe-ಜಿiಟe.iಟಿ''ಗೆ ಲಭ್ಯವಾಗಿದೆ.

 ಕೇಂದ್ರ ಓಬಿಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇಲ್ಲದೇ ಇರುವ ಜಾತಿಯ ಅರ್ಹ ಅಭ್ಯರ್ಥಿಗಳಿಗೆ ಆದಾಯ ಮತ್ತು ಸ್ವತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಅಟಲ್ಜೀ ಜನಸ್ನೇಹಿ ನಿರ್ದೇಶನಾಲ ಯವು ಮಾಹಿತಿ ಒದಗಿಸಿರುವುದು ತಿಳಿದು ಬಂದಿದೆ.

‘ಕೇಂದ್ರ ಒಬಿಸಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇಲ್ಲದೇ ಇರುವ ಜಾತಿಯ ಅರ್ಹ ಅಭ್ಯರ್ಥಿ ಗಳಿಗೆ ಆದಾಯ ಮತ್ತು ಸ್ವತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ. ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳು, ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಜಾತಿಪಟ್ಟಿಗಳನ್ನು ನಾಡಕಚೇರಿ ತಂತ್ರಾಂಶದಲ್ಲಿ ಅಳವಡಿಸಿ ಸಾರ್ವಜನಿಕರು ಕೋರಿರುವ ಜಾತಿಗೆ ಸಂಬಂಧಿಸಿದ ಅರ್ಜಿ, ದಾಖಲೆಗಳನ್ನು ಪರಿಶೀಲಿಸಿ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮವಹಿಸಲಾಗುತ್ತಿದೆ,’ ಎಂದು ಮಾಹಿತಿಯಲ್ಲಿ ವಿವರಿಸಲಾಗಿದೆ.

 ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ 2022ರ ಜನವರಿ 1ರಿಂದ 2022ರ ಅಕ್ಟೋಬರ್ 28ರವರೆಗೆ ಒಟ್ಟು 6,59,743 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 6,36,458 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಪರಿಶಿಷ್ಟ ಪಂಗಡಗಳ ಜಾತಿಗೆ ಸಂಬಂಧಿಸಿದಂತೆ 2022ರ ಅಕ್ಟೋಬರ್ 28ರಚರೆಗೆ ಒಟ್ಟು 2,30,288 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 22,390 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

ಇತರ ಜಾತಿಗಳಿಗೆ ಸಂಬಂಧಿಸಿದಂತೆ 2022ರ ಜನವರಿ 1ರಿಂದ ಅಕ್ಟೋಬರ್ 28ರವರೆಗೆ ಒಟ್ಟು 26, 56,822 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 25,90,539 ಅರ್ಜಿಗಳು ವಿಲೇವಾರಿಯಾಗಿವೆ.

ಹಾಗೆಯೇ ಆದಾಯ ಸೊತ್ತು ಪ್ರಮಾಣಪತ್ರಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 28ರವರೆಗೆ ಒರಟು 36,360 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 35,494 ಅರ್ಜಿಗಳು ವಿಲೇವಾರಿಯಾಗಿವೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X