Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಸಿಕೆ ತೆಗೆದುಕೊಳ್ಳುವಂತೆ ಯಾವುದೇ...

ಲಸಿಕೆ ತೆಗೆದುಕೊಳ್ಳುವಂತೆ ಯಾವುದೇ ಪ್ರಜೆಯನ್ನು ಒತ್ತಾಯಿಸಿಲ್ಲ: ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರಕಾರ

29 Nov 2022 8:40 PM IST
share
ಲಸಿಕೆ ತೆಗೆದುಕೊಳ್ಳುವಂತೆ  ಯಾವುದೇ ಪ್ರಜೆಯನ್ನು ಒತ್ತಾಯಿಸಿಲ್ಲ: ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರಕಾರ

ಹೊಸದಿಲ್ಲಿ, ನ. 29: ಕೊರೋನ ವೈರಸ್ ಲಸಿಕೆಯ ವ್ಯತಿರಿಕ್ತ ಪರಿಣಾಮಗಳಿಂದ ಸಂಭವಿಸುವ ಸಾವುಗಳಿಗೆ ಸರಕಾರ ಪರಿಹಾರ ನೀಡಬೇಕೆಂದು ಹೇಳುವುದು ಕಾನೂನಾತ್ಮಕವಾಗಿ ಕಾರ್ಯಸಾಧುವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.

ಲಸಿಕೆ ತೆಗೆದುಕೊಳ್ಳುವಂತೆ ತಾನು ಯಾವತ್ತೂ ಯಾವುದೇ ಪ್ರಜೆಯನ್ನು ಒತ್ತಾಯಿಸಿಲ್ಲ ಎಂದು ಲಸಿಕೆ ಸಂಬಂಧಿ ಸಾವಿಗೆ ಪರಿಹಾರ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಯಾಗಿ ಸಲ್ಲಿಸಿದ ಅಫಿದಾವಿತ್ ನಲ್ಲಿ ಸಚಿವಾಲಯ ಹೇಳಿದೆ. ಲಸಿಕೆ ತೆಗೆದುಕೊಳ್ಳುವುದು ಐಚ್ಛಿಕವಾಗಿತ್ತು ಎಂದು ಅದು ಸ್ಪಷ್ಟಪಡಿಸಿದೆ.

ವೈದ್ಯಕೀಯ ಪ್ರಯೋಗಗಳ ಮೂಲಕ ಲಸಿಕೆಯ ಪರೀಕ್ಷೆ ನಡೆಯುತ್ತಿರುವಾಗ ಸಾವು ಸಂಭವಿಸಿದರೆ ಲಸಿಕೆಯ ಉತ್ಪಾದಕರು ಮಾತ್ರ ಪರಿಹಾರ ನೀಡಬಹುದಾಗಿದೆ ಎಂದು ಅಫಿದಾವಿತ್ ಹೇಳಿದೆ. ಲಸಿಕೆ ಒಮ್ಮೆ ಮಾರುಕಟ್ಟೆಗೆ ಬಂದ ಬಳಿಕ ಅದನ್ನು ಪಡೆದು ಸಾವು ಸಂಭವಿಸಿದರೆ ಜನರು ವೈಯಕ್ತಿಕ ನೆಲೆಯಲ್ಲಿ ಸಿವಿಲ್ ನ್ಯಾಯಾಲಯಗಳಲ್ಲಿ ಪರಿಹಾರ ಕೋರಬೇಕು ಎಂದು ಸರಕಾರ ಹೇಳಿದೆ.

ಕೊರೋನ ವೈರಸ್ ಜಾಗತಿಕ ಮಟ್ಟದಲ್ಲಿ ಸ್ಫೋಟಿಸಿದ ಒಂದು ವರ್ಷದ ಬಳಿಕ, 2021 ಜನವರಿಯಲ್ಲಿ ಭಾರತವು ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ವಯಸ್ಕರಿಗೆ ಲಸಿಕಾ ಕಾರ್ಯಕ್ರಮವನ್ನು ಜಾರಿಗೆ ತಂದಿತು. ನವೆಂಬರ್ 19ರವರೆಗೆ, ದೇಶಾದ್ಯಂತ 219 ಕೋಟಿಗೂ ಅಧಿಕ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ಲಸಿಕೆ ತೆಗೆದುಕೊಂಡ ಬಳಿಕ, 92,114 ವ್ಯತಿರಿಕ್ತ ಪರಿಣಾಮಗಳು ಅಥವಾ ಅಡ್ಡ ಪರಿಣಾಮಗಳ ಪ್ರಕರಣಗಳು ವರದಿಯಾಗಿವೆ. ಈ ಪೈಕಿ, 2,782 ಪ್ರಕರಣಗಳು ಗಂಭೀರ ಪ್ರಕರಣಗಳಾಗಿವೆ. ಆದರೆ, ಈ ಎಲ್ಲಾ ಪ್ರಕರಣಗಳು ಲಸಿಕೆಗೆ ಸಂಬಂಧಿಸಿದವುಗಳಲ್ಲ ಎಂದು ಸರಕಾರ ಹೇಳಿದೆ.

ಆಗಸ್ಟ್ ನಲ್ಲಿ, ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಮಕ್ಕಳನ್ನು ಕಳೆದುಕೊಂಡ ಹೆತ್ತವರ ಅರ್ಜಿಗಳಿಗೆ ಪ್ರತಿಕ್ರಿಯಿಸುವಂತೆ ಸೂಚಿಸಿತ್ತು. ಕೇಂದ್ರ ಸರಕಾರವು ನವೆಂಬರ್ 25ರಂದು ತನ್ನ ಪ್ರತಿಕ್ರಿಯೆ ನೀಡಿದೆ.

ಲಸಿಕೆ ತೆಗೆದುಕೊಂಡ ದಿನಗಳ ಬಳಿಕ ಮೃತಪಟ್ಟ ಯುವತಿಯರು

ತಮ್ಮ ಪುತ್ರಿಯರ ಸಾವುಗಳಿಗೆ ಪರಿಹಾರ ನೀಡಬೇಕೆಂದು ಕೋರಿ ಹೈದರಾಬಾದ್ ನ ರಚನಾ ಗಂಗು ಮತ್ತು ಕೊಯಂಬತೋರ್ನ ವೇಣುಗೋಪಾಲನ್ ಗೋವಿಂದನ್, 2021 ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಿಸಿದ್ದರು.

ಗಂಗು ಅವರ ಪುತ್ರಿ ರಿತೈಕಾ ಓಮ್ಟ್ರಿ 2021 ಜೂನ್ನಲ್ಲಿ ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡ 15 ದಿನಗಳಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿಗೂ ಕೋವಿಶೀಲ್ಡ್ ಲಸಿಕೆಗೂ ಸಂಬಂಧವಿರುವುದನ್ನು, ಲಸಿಕೆಯ ಅಡ್ಡ ಪರಿಣಾಮ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ನೇಮಿಸಲಾದ ರಾಷ್ಟ್ರೀಯ ಸಮಿತಿಯೊಂದು ಬಳಿಕ ಖಚಿತಪಡಿಸಿತ್ತು.

ಗೋವಿಂದನ್ ರ ಪುತ್ರಿ 20 ವರ್ಷದ ಕಾರುಣ್ಯ 2021 ಜುಲೈಯಲ್ಲಿ ಮೃತಪಟ್ಟಿದ್ದಾರೆ. ಲಸಿಕೆ ತೆಗೆದುಕೊಂಡ ಒಂದು ತಿಂಗಳಲ್ಲಿ ಅವರ ಸಾವು ಸಂಭವಿಸಿದೆ. ಆದರೆ, ಅವರ ಸಾವನ್ನು ಲಸಿಕೆಯ ಅಡ್ಡ ಪರಿಣಾಮಗಳೊಂದಿಗೆ ಜೋಡಿಸಲು ಬೇಕಾದಷ್ಟು ಪುರಾವೆಯನ್ನು ಕಂಡುಕೊಳ್ಳಲು ರಾಷ್ಟ್ರೀಯ ಸಮಿತಿಗೆ ಸಾಧ್ಯವಾಗಲಿಲ್ಲ.

ಮೊದಲೇ ಎಚ್ಚರಿಸಿದ್ದೆವು: ಸರಕಾರ

ಅರ್ಜಿಯನ್ನು ವಜಾಗೊಳಿಸುವಂತೆ ನ್ಯಾಯಾಲಯವನ್ನು ಕೋರಿರುವ ಕೇಂದ್ರ ಸರಕಾರ, ವ್ಯತಿರಿಕ್ತ ಪರಿಣಾಮಗಳ ಮೇಲೆ ನಿಗಾ ಇಡುವ, ತನಿಖೆ ಮಾಡುವ ಮತ್ತು ವಿಶ್ಲೇಷಿಸುವ ವ್ಯವಸ್ಥೆ ಪರಿಪೂರ್ಣ ಮತ್ತು ಪಾರದರ್ಶಕವಾಗಿದೆ ಎಂದು ಹೇಳಿದೆ.

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಸಾವಿನ ಸಾಧ್ಯತೆಯ ಕುರಿತ ವಿವರಗಳನ್ನು ಸಚಿವಾಲಯವು ತನ್ನ ವೆಬ್ಸೈಟ್, ಪತ್ರಿಕಾ ಪ್ರಕಟನೆಗಳು ಮತ್ತು ಸಾಮೂಹಿಕ ಮಾಧ್ಯಮಗಳಲ್ಲಿ ಪ್ರಕಟಿಸಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಈವರೆಗೆ, ಕೋವಿಡ್-19 ವೈರಸ್ ವಿರುದ್ಧದ 12 ಲಸಿಕೆಗಳಿಗೆ ಭಾರತ ಅನುಮೋದನೆ ನೀಡಿದೆ. ಲಸಿಕಾ ಕಾರ್ಯಕ್ರಮದಲ್ಲಿ ಸಿಂಹಪಾಲನ್ನು ಕೋವಿಶೀಲ್ಡ್ ಲಸಿಕೆ ಪಡೆದಿದೆ.

share
Next Story
X