Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು | ಕೆಆರ್ ಇಡಿಎಲ್ ಯೋಜನಾ...

ಮೈಸೂರು | ಕೆಆರ್ ಇಡಿಎಲ್ ಯೋಜನಾ ನಿರ್ದೇಶಕ ಅನುಮಾನಾಸ್ಪದ ಸಾವು: FIR ದಾಖಲು

29 Nov 2022 8:59 PM IST
share
ಮೈಸೂರು | ಕೆಆರ್ ಇಡಿಎಲ್ ಯೋಜನಾ ನಿರ್ದೇಶಕ ಅನುಮಾನಾಸ್ಪದ ಸಾವು: FIR  ದಾಖಲು

ಮೈಸೂರು,ನ.29: ನಗರದ ವಿಜಯನಗರ ನಿವಾಸಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ (ಕೆಆರ್ ಇಡಿಎಲ್) ಯೋಜನಾ ನಿರ್ದೇಶಕ ಡಿ.ಕೆ.ದಿನೇಶ್ ಕುಮಾರ್ (51) ಅನುಮಾನಾಸ್ಪದವಾಗಿ ಮೃತಪಟ್ಟಿರುವುದಾಗಿ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಶ್ರೀರಂಗಪಟ್ಟಣ ತಾಲುಕಿನ ದೊಡ್ಡಪಾಳ್ಯ ಗ್ರಾಮದ ದಿನೇಶ್ ಅವರು ಬೆಂಗಳೂರಿನ ನಾಗರಬಾವಿಯಲ್ಲಿರುವ ಕೆಆರ್ ಇಡಿಎಲ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್,  ರವಿವಾರ ರಾತ್ರಿ ಊಟ ಮಾಡಿ ಮಲಗಿದ್ದು, ಸೋಮವಾರ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ನೋಡಿ ಮೂರ್ಛೆ ಹೋದೆವು ಎಂದು ಪತ್ನಿ ಹೇಳಿಕೆ ನೀಡಿದ್ದಾರೆ. ಅಸ್ವಸ್ಥಗೊಂಡಿರುವ ಪತ್ನಿ ಹಾಗೂ ಪುತ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

'ದಿನೇಶ್ ಅವರ ಮೃತದೇಹ ಊದಿಕೊಂಡಿದ್ದು, ದೇಹದ ಹಲವು ಭಾಗಗಳಿಗೆ ಗಾಯಗಳಾಗಿದ್ದವು. ಮೃತಪಟ್ಟು 14 ಗಂಟೆಗಿಂತಲೂ ಹೆಚ್ಚಿನ ಸಮಯವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಶವಪರೀಕ್ಷೆ ವರದಿ ಆಧರಿಸಿ ತನಿಖೆ: ಮೃತರ ಪತ್ನಿ ನೀಡಿದ ಹೇಳಿಕೆಗೂ, ವೈದ್ಯರ ನೀಡಿರುವ ಹೇಳಿಕೆಗೂ ಹೊಂದಾಣಿಕೆಯಾಗುತ್ತಿಲ್ಲ. ಮೃತಪಟ್ಟಿರುವ ಸಮಯವನ್ನು ಹೇಳುತ್ತಿಲ್ಲ. ಕೌನ್ಸಲಿಂಗ್ ಮಾಡುವಂತೆ ಖಾಸಗಿ ಆಸ್ಪತ್ರೆ ವೈದ್ಯರಿಗೆ ಸೂಚಿಸಲಾಗಿದೆ. ಶವಪರೀಕ್ಷೆ ವರದಿ ಆಧರಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದಿನೇಶ್ ಅವರದ್ದು ಸಹಜ ಸಾವಲ್ಲ, ಕೊಲೆ: ಆರೋಪ

ದಿನೇಶ್ ಅವರದು ಸಹಜ ಸಾವಲ್ಲ, ಕೊಲೆ ಎಂದು ಆರೋಪಿಸಿ ಮೃತರ ಸೋದರ ಮಾವ ಎಚ್.ಎಂ.ನಾರಾಯಣ ಅವರು ಠಾಣೆಗೆ ದೂರು ನೀಡಿದ್ದಾರೆ. 

ನಾಲ್ಕೈದು ಜನ ಸೇರಿ ಕೃತ್ಯ: 

ಶನಿವಾರ ಬೆಂಗಳೂರಿನಿಂದ ಬಂದ ದಿನೇಶ್ ಹೆಬ್ಬಾಳದಲ್ಲಿ ನಿರ್ಮಾಣವಾಗುತ್ತಿದ್ದ ಸ್ವಂತ ಕಟ್ಟಡವನ್ನು ಪರಿಶೀಲಿಸಿ, ಮನೆಗೆ ತೆರಳಿದ್ದು, ಅಲ್ಲಿಂದ ಯಾರಿಗೂ ಲಭ್ಯವಾಗಿಲ್ಲ. ಅವರ ಫೋನ್ ಕೂಡ ಶನಿವಾರ ರಾತ್ರಿಯಿಂದಲೇ ಸ್ವಿಚ್ಡ್ ಆಫ್ ಆಗಿದೆ. ಅವರು ಮೃತಪಟ್ಟಿರುವ ವಿಷಯ ಸೋಮವಾರ ಮಧ್ಯಾಹ್ನ 2 ಗಂಟೆಗೆ ನನಗೆ ಗೊತ್ತಾಗಿದೆ. ಮೃತದೇಹದಲ್ಲಿ ಗಾಯಗಳಾಗಿದ್ದವು. ತಲೆ ಹಾಗೂ ಮುಖಕ್ಕೆ ಪೆಟ್ಟು ಬಿದ್ದು, ರಕ್ತಸ್ರಾವವಾಗಿದೆ. ಸಹಜ ಸಾವಲ್ಲ? ಎಂದು ದೂರುದಾರ ಎಚ್.ಎಂ.ನಾರಾಯಣ ಆರೋಪಿಸಿದರು.

''ಪೊಲೀಸರ ಗಮನಕ್ಕೆ ತಾರದೇ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆ ಆಂಬುಲೆನ್ಸ್ ಬಳಸದೇ ಖಾಸಗಿ ಆಂಬುಲೆನ್ಸ್ ಬಳಸಲಾಗಿದೆ. ಸಹಜ ಸಾವಾಗಿದ್ದರೆ, ಸಂಬಂಧಿಕರಿಗೆ ವಿಷಯ ತಿಳಿಸಬೇಕಿತ್ತು. ಅದನ್ನೂ ಅವರು ಮಾಡಿಲ್ಲ. ಅಲ್ಲದೆ, ಮನೆ ಕೆಲಸದವರಿಗೆ ಮಲಗುವ ಕೋಣೆಯನ್ನು ಸ್ವಚ್ಛಗೊಳಿಸಲು ಬಿಟ್ಟಿಲ್ಲ. ನಾಲ್ಕೈದು ಮಂದಿ ಸೇರಿ ಕೃತ್ಯ ಎಸಗಿದ್ದಾರೆ'' ಎಂದು ಆರೋಪಿಸಿದರು.

ಸಿಆರ್‍ಪಿಸಿ 174 (ಸಿ) ಅಡಿ ಪ್ರಕರಣ ದಾಖಲಿಸಿಕೊಂಡಿರುವ ಸರಸ್ವತಿಪುರಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶವಾಗಾರದಲ್ಲಿ ಮೃತರ ಶವಪರೀಕ್ಷೆ ಮಂಗಳವಾರ ನಡೆಯಿತು.

share
Next Story
X