ಸಹಪಾಠಿ ಮೇಲೆ ಅತ್ಯಾಚಾರ ಎಸಗಿ ವಾಟ್ಸ್ಆ್ಯಪ್ನಲ್ಲಿ ವೀಡಿಯೊ ಶೇರ್ ಮಾಡಿದ ವಿದ್ಯಾರ್ಥಿಗಳು !
ಐದು ಮಂದಿ ಸೆರೆ
![ಸಹಪಾಠಿ ಮೇಲೆ ಅತ್ಯಾಚಾರ ಎಸಗಿ ವಾಟ್ಸ್ಆ್ಯಪ್ನಲ್ಲಿ ವೀಡಿಯೊ ಶೇರ್ ಮಾಡಿದ ವಿದ್ಯಾರ್ಥಿಗಳು ! ಸಹಪಾಠಿ ಮೇಲೆ ಅತ್ಯಾಚಾರ ಎಸಗಿ ವಾಟ್ಸ್ಆ್ಯಪ್ನಲ್ಲಿ ವೀಡಿಯೊ ಶೇರ್ ಮಾಡಿದ ವಿದ್ಯಾರ್ಥಿಗಳು !](https://www.varthabharati.in/sites/default/files/images/articles/2022/11/30/358232-1669774591.jpg)
ಹೈದರಾಬಾದ್ : ಹದಿನೇಳು ವರ್ಷದ ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ ಐದು ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎಲ್ಲ ಐದೂ ಮಂದಿ ವಿದ್ಯಾರ್ಥಿಗಳು 9 ಮತ್ತು 10ನೇ ತರಗತಿಯವರಾಗಿದ್ದು, ತಮ್ಮ ಸಹಪಾಠಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಘಟನೆಯ ವೀಡಿಯೊ ಚಿತ್ರೀಕರಣ ಮಾಡಿಕೊಂಡು ವಾಟ್ಸ್ಆ್ಯಪ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ ಎಂದು ಆಪಾದಿಸಲಾಗಿದೆ. ಈ ಬಗ್ಗೆ ndtv.com ವರದಿ ಮಾಡಿದೆ.
ಆರೋಪಿ ವಿದ್ಯಾರ್ಥಿಗಳು ಹಾಗೂ ಸಂತ್ರಸ್ತೆ ಸಹಪಾಠಿ ಸ್ನೇಹಿತರಾಗಿದ್ದರು ಎಂದು ರಾಚಕೊಂಡ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಕಳೆದ ಆಗಸ್ಟ್ನಲ್ಲಿ ಮನೆಯಲ್ಲಿ ಯಾರೂ ಇಲ್ಲದ ಅವಧಿಯಲ್ಲಿ ವಿದ್ಯಾರ್ಥಿನಿಯ ಮನೆಗೆ ತೆರಳಿ ಬೆದರಿಕೆ ಹಾಕಿ ಈ ಕೃತ್ಯ ಎಸಗಿದ್ದಾರೆ. ಹುಡುಗರು ಈ ಘಟನೆಯನ್ನು ಚಿತ್ರೀಕರಿಸಿಕೊಂಡಿದ್ದು, 10 ದಿನಗಳ ಬಳಿಕ ಆರೋಪಿಗಳ ಪೈಕಿ ಒಬ್ಬ ಮತ್ತೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿವರಿಸಿದ್ದಾರೆ.
ವೀಡಿಯೊವನ್ನು ವಿದ್ಯಾರ್ಥಿಗಳು ವಾಟ್ಸ್ಆ್ಯಪ್ನಲ್ಲಿ ಶೇರ್ ಮಾಡಿದ್ದು, ಆ ಬಳಿಕ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ನಂತರ ಹಯಾತ್ನಗರ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ವಿದ್ಯಾರ್ಥಿಗಳ ವಿರುದ್ಧ ಪೋಕ್ಸೊ ಹಾಗೂ ಐಟಿ ಕಾಯ್ದೆಯ ಸೂಕ್ತ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳನ್ನು ಮುಂದಿನ ಕ್ರಮಕ್ಕಾಗಿ ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ ಎಂದು ndtv.com ವರದಿ ಮಾಡಿದೆ.