15 ಸಾವಿರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆ
ಬೆಂಗಳೂರು, ನ.30: ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿಯಿರುವ 15 ಸಾವಿರಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿತ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹದಿನೈದು ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇತ್ತೀಚೆಗೆ ಪ್ರಕಟಿಸಲಾಗಿದ್ದು, ಆ ಪೈಕಿ 13,363 ಅಭ್ಯರ್ಥಿಗಳಷ್ಟೇ ಆಯ್ಕೆ ಆಗಿದ್ದರು.
ಉಳಿದ 1,637 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದ ಕಾರಣ ಅವು ಖಾಲಿ ಉಳಿದಿದ್ದವು. ಈ ಮಧ್ಯೆ ಶಿಕ್ಷಕರ ನೇಮಕಾತಿ ಸಂಬಂಧ ಹೊರಡಿಸಲಾಗಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ವಿರುದ್ಧ ಅಕ್ಷತಾ ಚೌಗಲೆ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಮುಂದಿನ ಆದೇಶದವರೆಗೆ ಅನ್ವಯಿಸುವಂತೆ ತಡೆ ಹಿಡಿದು ಆದೇಶ ಹೊರಡಿಸಿದ್ದಾರೆ. ಅರ್ಜಿದಾರರ ಪರವಾಗಿ ವಕೀಲೆ ಲತಾ ಶೆಟ್ಟಿ ವಾದ ಮಂಡಿಸಿದ್ದರು.
Next Story