Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಾಯ, ಹಿಂಸಾಚಾರದಿಂದ ಪ್ರತಿನಿತ್ಯ...

ಗಾಯ, ಹಿಂಸಾಚಾರದಿಂದ ಪ್ರತಿನಿತ್ಯ ವಿಶ್ವದಾದ್ಯಂತ 12,000 ಜನರ ಸಾವು: ವಿಶ್ವ ಆರೋಗ್ಯ ಸಂಸ್ಥೆ

30 Nov 2022 11:07 PM IST
share
ಗಾಯ, ಹಿಂಸಾಚಾರದಿಂದ ಪ್ರತಿನಿತ್ಯ ವಿಶ್ವದಾದ್ಯಂತ 12,000 ಜನರ ಸಾವು:  ವಿಶ್ವ ಆರೋಗ್ಯ ಸಂಸ್ಥೆ

ಅಡಿಲೇಡ್,  ನ.30: ಗಾಯ ಹಾಗೂ ಹಿಂಸಾಚಾರ ಪ್ರತಿನಿತ್ಯ ಪ್ರಪಂಚದಾದ್ಯಂತ 12,000 ಜನರ ಸಾವಿಗೆ ಕಾರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಇತ್ತೀಚಿನ ವರದಿ ಹೇಳಿದೆ.

5ರಿಂದ 29  ವರ್ಷದವರಲ್ಲಿ ಸಾವಿಗೆ ಕಾರಣವಾಗುವ ಪ್ರಮುಖ 5 ಅಂಶಗಳಲ್ಲಿ 3 ಗಾಯಕ್ಕೆ ಸಂಬಂಧಿಸಿವೆ. ರಸ್ತೆ ಅಪಘಾತದಿಂದ ಆಗುವ ಗಾಯ, ನರಹತ್ಯೆ ಮತ್ತು ಆತ್ಮಹತ್ಯೆ ಈ ಮೂರು ಅಂಶಗಳಾಗಿವೆ. ಇನ್ನುಳಿದಂತೆ ನೀರಲ್ಲಿ ಮುಳುಗುವುದು, ಮೇಲಿನಿಂದ ಕೆಳಗೆ ಬೀಳುವುದು, ಸುಟ್ಟ ಗಾಯ, ವಿಷಸೇವನೆ ಕೂಡಾ ಗಾಯದಿಂದ ಆಗುವ ಸಾವಿನ ವಿಭಾಗಕ್ಕೆ ಸೇರುತ್ತದೆ  ಎಂದು ` ಗಾಯಗಳು ಮತ್ತು ಹಿಂಸಾಚಾರವನ್ನು ತಡೆಗಟ್ಟುವುದು: ಒಂದು ಅವಲೋಕನ' ಎಂಬ ವರದಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿದೆ. ವಿಶ್ವದಾದ್ಯಂತ ವಾರ್ಷಿಕ 4.4 ಮಿಲಿಯನ್ ಸಾವಿನ ಪ್ರಕರಣಗಳು ಗಾಯಕ್ಕೆ ಸಂಬಂಧಿಸಿದೆ. ದಿನನಿತ್ಯ ಗಾಯದಿಂದ ಸಂಭವಿಸುವ ಸಾವಿನ ಪ್ರತೀ 3 ಪ್ರಕರಣದಲ್ಲಿ 1 ರಸ್ತೆ ಅಪಘಾತಕ್ಕೆ ಸಂಬಂಧಿಸಿದ್ದರೆ, ಪ್ರತೀ 6ರಲ್ಲಿ 1 ಆತ್ಮಹತ್ಯೆ, ಪ್ರತೀ 9ರಲ್ಲಿ 1 ನರಹತ್ಯೆ ಹಾಗೂ ಪ್ರತೀ 61ರಲ್ಲಿ 1 ಯುದ್ಧ ಮತ್ತು ಸಂಘರ್ಷದಿಂದಾಗುವ ಪ್ರಕರಣಗಳಾಗಿವೆ.

ಗಾಯದಿಂದ ಸಮಸ್ಯೆಗೆ ಒಳಗಾಗುವವರಲ್ಲಿ ಬಡತನದಲ್ಲಿ ವಾಸಿಸುವವರ ಪ್ರಮಾಣ ಹೆಚ್ಚಿದೆ. ಈ ಆರೋಗ್ಯ ಅಸಮಾನತೆಯನ್ನು ಪರಿಹರಿಸುವಲ್ಲಿ ಮತ್ತು ಗಾಯ ಹಾಗೂ ಹಿಂಸಾಚಾರ ತಡೆಗಟ್ಟುವಲ್ಲಿ ಆರೋಗ್ಯ ಕ್ಷೇತ್ರ ಪ್ರಮುಖ ಪಾತ್ರವನ್ನು ಹೊಂದಿದೆ. ಅಂಕಿಅಂಶ ಸಂಗ್ರಹಣೆ, ಕಾರ್ಯನೀತಿಯನ್ನು ರೂಪಿಸುವುದು, ಸೇವೆ ಒದಗಿಸುವುದು, ತಡೆಗಟ್ಟುವಿಕೆ ಮತ್ತು ಆರೈಕೆಗಾಗಿ ಕಾರ್ಯಕ್ರಮ ರೂಪಿಸುವುದು ಹಾಗೂ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಗಮನವನ್ನು ನೀಡಬೇಕಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟೆಡ್ರೋಸ್ ಅಧನಾಮ್ ಘೆಬ್ರಯೇಸಸ್ ಸಲಹೆ ನೀಡಿದ್ದಾರೆ.

ಸ್ಪೇನ್‍ನಲ್ಲಿ ನಗರಗಳ ವ್ಯಾಪ್ತಿಯಲ್ಲಿ ವಾಹನದ ವೇಗವನ್ನು ಗಂಟೆಗೆ 30 ಕಿ.ಮೀಗೆ ಸೀಮಿತಗೊಳಿಸಲಾಗಿದೆ. ವಿಯೆಟ್ನಾಮ್‍ನಲ್ಲಿ ನೀರಿನಲ್ಲಿ ಮುಳುಗುವುದನ್ನು ತಡೆಯುವ ಉದ್ದೇಶದಿಂದ ಈಜು ತರಬೇತಿ ಒದಗಿಸಿರುವುದು ಧನಾತ್ಮಕ ಬದಲಾವಣೆಗೆ ಕಾರಣವಾಗಿದೆ. ಆದರೆ ಬಹುತೇಕ ದೇಶಗಳಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ಸೂಕ್ತ ಅನುದಾನ ಒದಗಿಸದಿರುವುದು ಬಹುದೊಡ್ಡ ಸಮಸ್ಯೆಯಾಗಿದೆ. ಪ್ರತೀ ವರ್ಷ ಲಕ್ಷಾಂತರ ಕುಟುಂಬಗಳ ಈ ಅನಗತ್ಯ ಸಂಕಟವನ್ನು ತಪ್ಪಿಸಲು ತ್ವರಿತ ಕ್ರಮದ ಅಗತ್ಯವಿದೆ. ಏನು ಮಾಡಬೇಕೆಂಬುದು ನಮಗೆ ತಿಳಿದಿದೆ. ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಈಗಿನ ಅಗತ್ಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಾಮಾಜಿಕ ನಿರ್ಣಾಯಕ ವಿಭಾಗದ ನಿರ್ದೇಶಕ ಡಾ. ಎಟೀನ್ ಕ್ರಗ್ ಹೇಳಿದ್ದಾರೆ.

ಆಸ್ಟ್ರೇಲಿಯಾದ ಅಡಿಲೇಡ್‍ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ನೇತೃತ್ವದಲ್ಲಿ  ನಡೆಯುತ್ತಿರುವ `ಗಾಯ ತಡೆಗಟ್ಟುವಿಕೆ ಮತ್ತು ಹೆಚ್ಚುವರಿ ಸುರಕ್ಷತೆ' ವಿಷಯದ 14ನೇ ಜಾಗತಿಕ ಸಮಾವೇಶದಲ್ಲಿ ಈ ವರದಿಯನ್ನು ಮಂಡಿಸಲಾಗಿದೆ.  

share
Next Story
X