Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ್ಯುವೆಲ್ಲರಿ ದರೋಡೆಗೆ ಯತ್ನಿಸಿದ...

ಜ್ಯುವೆಲ್ಲರಿ ದರೋಡೆಗೆ ಯತ್ನಿಸಿದ ಅಂತಾರಾಜ್ಯ 'ಸಾಹೀಬ್ ಗಂಜ್' ದರೋಡೆ ಗ್ಯಾಂಗ್‌ನ 9 ಮಂದಿಯ ಸೆರೆ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

30 Nov 2022 11:39 PM IST
share
ಜ್ಯುವೆಲ್ಲರಿ ದರೋಡೆಗೆ ಯತ್ನಿಸಿದ ಅಂತಾರಾಜ್ಯ ಸಾಹೀಬ್ ಗಂಜ್ ದರೋಡೆ ಗ್ಯಾಂಗ್‌ನ 9 ಮಂದಿಯ ಸೆರೆ
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

►ದರೋಡೆ ಉದ್ದೇಶದಿಂದ 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದ ಆರೋಪಿಗಳು

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅಲ್ಲದೆ ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. 

ನ. 29-30ರ ರಾತ್ರಿ ವೇಳೆ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ “ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು ತೊಕ್ಕೊಟ್ಟಿನ ಜ್ಯುವೆಲ್ಲರಿ ಅಂಗಡಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರು ಮೂಲತಃ ಬಂಟ್ವಾಳ ತಾಲೂಕಿನ ಕನ್ಯಾನದ ಪ್ರಸ್ತುತ ಗುಜರಾತ್‌ನಲ್ಲಿ‌ ವಾಸವಾಗಿರುವ ಭಾಸ್ಕರ ಬೆಳ್ಚಡ(65), ನೇಪಾಳ‌‌ ಮೂಲದ ಪ್ರಸ್ತುತ ಗುಜರಾತ್‌ನ ದಿನೇಶ್ ರಾವಲ್ ಯಾನೆ ಸಾಗರ್ ಯಾನೆ ದಿಲ್ಲಿ(38),  ಜಾರ್ಖಂಡ್‌ನ ಮುಹಮ್ಮದ್ ಜಾಮೀಲ್ ಶೇಖ್ (29) ಮತ್ತು ಇಂಜಮಾಮ್ ಉಲ್ ಹಕ್(27), ಮೂಲತಃ ನೇಪಾಳದ ಬಿಸ್ತ ರೂಪ್ ಸಿಂಗ್ (34), ಕೃಷ್ಣ ಬಹದ್ದೂರ್ ಬೋಗಟ (41), ಜಾರ್ಖಂಡ್‌ನ ಇಮ್ದದುಲ್ ರಝಾಕ್ ಶೇಖ್, (32), ಬಿವುಲ್ ಶೇಖ್ (31), ಇಮ್ರಾನ್ ಶೇಖ್(30), ಎಂಬವರನ್ನು ಬಂಧಿಸಿದ್ದಾರೆ. ಈ‌‌ ಮೂಲಕ ಜ್ಯುವೆಲ್ಲರಿ ದರೋಡೆಯನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿರುತ್ತಾರೆ. 

ಆರೋಪಿಗಳೆಲ್ಲರೂ ಉತ್ತರ ಭಾರತ ಮೂಲದ ಕುಖ್ಯಾತ “ಸಾಹೇಬ್ ಗಂಜ್” ದರೋಡೆ ಗ್ಯಾಂಗ್ ನ ಸದಸ್ಯರಾಗಿದ್ದು, ತೊಕ್ಕೊಟ್ಟಿನ ಸೂಪರ್ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದು ನಂತರ ತೊಕ್ಕೊಟ್ಟು ಬಳಿಯ ಲಾಡ್ಜ್ ವೊಂದರಲ್ಲಿ ಹಾಗೂ ತೊಕ್ಕೊಟ್ಟು ಮಂಚಿಲ ಬಳಿಯ ವ್ಯಕ್ತಿಯೊಬ್ಬರ ಮನೆಯೊಂದನ್ನು ಬಾಡಿಗೆಗೆ ಪಡೆದುಕೊಂಡು ದರೋಡೆಗೆ ಸಂಚು ರೂಫಿಸಿದ್ದರು ಎಂದು‌ ಪೊಲೀಸರು ತಿಳಿಸಿದ್ದಾರೆ.

ಸೂಪರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಜ್ಯುವೆಲ್ಲರಿಯನ್ನು ಗುರುತಿಸಿಕೊಂಡಿದ್ದು, ದರೋಡೆಗೆ ಬೇಕಾದ ಗ್ಯಾಸ್ ಕಟ್ಟರ್, ಅಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ಕಬ್ಬಿಣದ ರಾಡ್, ತಲವಾರು, ಅಕ್ಸೋ ಬ್ಲೇಡ್, ಹ್ಯಾಮರ್, ಸ್ಕ್ರೂಡ್ರೈವರ್, ಮೆಣಸಿನ ಹುಡಿ, ನೈಲಾನ್ ಹಗ್ಗ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,90,000/ಆಗಿರುತ್ತದೆ.  ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚೆಗೆ ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್,  ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಆಂಬಿಕಾ ರೋಡ್, ಉಚ್ಚಿಲ ಬಳಿಯಿಂದ ರಾತ್ರಿ ವೇಳೆಯಲ್ಲಿ ಮೂರು ದ್ವಿಚಕ್ರ ವಾಹನದ ಸವಾರರನ್ನು ಅಡ್ಡಗಟ್ಟಿ ಹಿಂದಿ ಭಾಷೆಯಲ್ಲಿ ಬೈದು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಅವರಿಂದ  ಸ್ಕೂಟರ್ ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ್ದರು, ಈ ಸ್ಕೂಟರ್ ನ ಪತ್ತೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಸಾಹೇಜ್ ಗಂಜ್ ದರೋಡೆ ಗ್ಯಾಂಗ್ ನ ಆರೋಪಿಗಳು ಜ್ಯುವೆಲ್ಲರಿ ದರೋಡೆ ನಡೆಸಲು ಸಂಚು ರೂಪಿಸುತ್ತಿರುವಾಗ  ಸ್ಥಳೀಯವಾಗಿ ಓಡಾಟದ ಸಲುವಾಗಿ ಈ ಸ್ಕೂಟರ್‌ಗಳ ಸವಾರರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಸುಲಿಗೆ ಮಾಡಿ ಉಪಯೋಗಿಸುತ್ತಿದ್ದರು. ಮೇಲ್ಕಂಡ ಮೂರು ಸ್ಕೂಟರ್ ಗಳನ್ನು ಕೂಡಾ ಸ್ವಾಧೀನಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ ಭಾಸ್ಕರ ಬೆಳ್ಚಡ, ದಿನೇಶ್ ರಾವಲ್ , ಇಂಜಮಾಮ್ ಉಲ್ ಹಕ್, ಬಿಸ್ತ ರೂಪ್ ಸಿಂಗ್, ಕೃಷ್ಣ ಬಹದ್ದೂರ್ ಬೋಗಟಿ ಎಂಬವರ ವಿರುದ್ಧ ಮುಂಬೈ,ಪುಣಿ, ಸೂರತ್, ಮಧ್ಯಪ್ರದೇಶದ ಮಾಧವ ನಗರ, ಕೇರಳದ ತ್ರಿಶೂರ್, ಪಂಜಾಬ್  ರಾಜ್ಯಗಳಲ್ಲಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಬ್ಯಾಂಕ್ ದರೋಡೆ, ಜ್ಯುವೆಲ್ಲರಿ ದರೋಡೆ ಪ್ರಕರಣಗಳು ದಾಖಲಾಗಿದೆ.

ಈ ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕಮಹೇಶ್ ಪ್ರಸಾದ್, ಎಸ್ಸೈ ರಾಜೇಂದ್ರ ಬಿ, ಪ್ರದೀಪ ಟಿ ಆರ್,  ಎಎಸ್ಸೈಗಳಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಸಾಹೇಬ್ ಗಂಜ್ ಗ್ಯಾಂಗ್
ಸಾಹೇಬ್ ಗಂಜ್ ಗ್ಯಾಂಗ್ ಎಂಬುವುದು ಉತ್ತರ ಭಾರತದ ಜಾರ್ಖಂಡ್ ರಾಜ್ಯದ ಕುಖ್ಯಾತ ದರೋಡೆ ಗ್ಯಾಂಗ್ ಆಗಿದ್ದು, ಈ ಗ್ಯಾಂಗ್‌ನಲ್ಲಿ ನೇಪಾಳ ದೇಶದ ಪ್ರಜೆಗಳು ಕೂಡಾ ಇದ್ದು, ಇವರು ಪ್ರಮುಖವಾಗಿ ದೊಡ್ಡ ದೊಡ್ಡ ನಗರಗಳಲ್ಲಿನ ಬ್ಯಾಂಕ್, ಜ್ಯುವೆಲ್ಲರಿ ಅಂಗಡಿಗಳನ್ನು ಗುರುತಿಸಿ ಅಲ್ಲಿಯ ಪರಿಸರದಲ್ಲಿ ಬಾಡಿಗೆಗೆ ಮನೆ/ಲಾಡ್ಜ್ ಗಳನ್ನು ಮಾಡಿಕೊಂಡು ಸ್ಥಳೀಯವಾಗಿ ದರೋಡೆ ಮಾಡಲು ಬೇಕಾದ ಸಲಕರಣೆಗಳನ್ನು ಖರೀದಿಸಿಕೊಂಡು ನಂತರ ಜ್ಯುವೆಲ್ಲರಿ ಅಂಗಡಿ, ಬ್ಯಾಂಕ್ ಗಳ ಗೋಡೆ ಕನ್ನ ಕೊರೆದು, ಗ್ಲಾಸ್ ಕಟ್ಟರ್ ಮೂಲಕ ತಿಜೋರಿಯನ್ನು ಒಡೆದು ಕೋಟ್ಯಂತರ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡುವ ಕುಖ್ಯಾತ ಗ್ಯಾಂಗ್ ಆಗಿದ್ದು, ಈ ಗ್ಯಾಂಗ್ ನಲ್ಲಿದ್ದವರು ದೇಶದ ವಿವಿಧಡೆಗಳಲ್ಲಿ ಈ ಹಿಂದೆ ನಡೆದ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾರೆ. ಈ ಗ್ಯಾಂಗ್ ನಲ್ಲಿ ನೇಪಾಳದ ಹಲವಾರು ಮಂದಿ ಆರೋಪಿಗಳಿದ್ದು, ಇವರು ಕೃತ್ಯ ನಡೆಸಿದ ನಂತರ ಸೊತ್ತಿನೊಂದಿಗೆ ನೇಪಾಳಕ್ಕೆ ಪರಾರಿಯಾಗುತ್ತಿದ್ದರು.

share
Next Story
X