Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗೃಹ ಶೌಚಾಲಯ ಹೊಂದಿದ ಪರಿಶಿಷ್ಟರಿಗೆ...

ಗೃಹ ಶೌಚಾಲಯ ಹೊಂದಿದ ಪರಿಶಿಷ್ಟರಿಗೆ ಪ್ರೋತ್ಸಾಹ ಧನ: ಆರ್ಥಿಕ ಇಲಾಖೆಯಿಂದ ತಿರಸ್ಕಾರ

ಜಿ. ಮಹಾಂತೇಶ್ಜಿ. ಮಹಾಂತೇಶ್1 Dec 2022 8:35 AM IST
share
ಗೃಹ ಶೌಚಾಲಯ ಹೊಂದಿದ ಪರಿಶಿಷ್ಟರಿಗೆ ಪ್ರೋತ್ಸಾಹ ಧನ: ಆರ್ಥಿಕ ಇಲಾಖೆಯಿಂದ ತಿರಸ್ಕಾರ

ಬೆಂಗಳೂರು: ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣ ಮಾಡಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 3,000 ರೂ. ಪ್ರೋತ್ಸಾಹ ಧನ ನೀಡಲು ಆರ್ಥಿಕ ಇಲಾಖೆಯು ತಿರಸ್ಕರಿಸಿರುವುದು ಇದೀಗ ಬಹಿರಂಗವಾಗಿದೆ.

 ಭಾರತೀಯ ಜನತಾ ಪಕ್ಷವು ಬಳ್ಳಾರಿಯಲ್ಲಿ ಕಳೆದೆರಡು ದಿನಗಳ ಹಿಂದೆಯಷ್ಟೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಾವೇಶ ನಡೆಸಿದ್ದ ಬೆನ್ನಲ್ಲೇ ಹೆಚ್ಚುವರಿ ಪ್ರೋತ್ಸಾಹ ಧನವನ್ನು ನೀಡುವ ಪ್ರಸ್ತಾವವನ್ನು ತಳ್ಳಿ ಹಾಕಿರುವುದು ಮುನ್ನೆಲೆಗೆ ಬಂದಿದೆ. ಈ ಸಂಬಂಧ ಕೆಲ ಟಿಪ್ಪಣಿ ಹಾಳೆಗಳು ‘ದಿ ಫೈಲ್’ಗೆ ಲಭ್ಯವಾಗಿವೆ.

 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಹೆಚ್ಚುವರಿ ಪ್ರೋತ್ಸಾಹ ಧನ ನೀಡಿದರೆ ಉಳಿದ ಜಾತಿ, ಸಮುದಾಯದವರು ಹೆಚ್ಚಿನ ಪ್ರೋತ್ಸಾಹ ಧನ ಕೇಳುವ ಸಾಧ್ಯತೆ ಇದೆ ಎಂಬ ಕಾರಣವನ್ನು ಮುಂದಿರಿಸಿರುವ ಆರ್ಥಿಕ ಇಲಾಖೆಯು ಈ ಪ್ರಸ್ತಾವವನ್ನು ತಿರಸ್ಕರಿಸಿದೆ ಎಂದು ಗೊತ್ತಾಗಿದೆ.

‘ಪ್ರಸ್ತಾವವನ್ನು ಪರಿಶೀಲಿಸಲಾಯಿತು. ಎಸ್‌ಸಿ, ಎಸ್‌ಟಿ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 3,000 ರೂ. ಪ್ರೋತ್ಸಾಹ ಧನವನ್ನು ನೀಡಬೇಕು ಎಂದು ಆಡಳಿತ ಇಲಾಖೆಯು ಕೋರಿದೆ. ಇತರರು ಪ್ರೋತ್ಸಾಹ ಧನವನ್ನು ಕೇಳುವ ಸಾಧ್ಯತೆ ಇರುವುದರಿಂದ ಈ ಪ್ರಸ್ತಾವವನ್ನು ತಿರಸ್ಕರಿಸಲಾಗುತ್ತಿದೆ,’ ಎಂದು 2022ರ ಮಾರ್ಚ್ 18ರಂದು ಸಮಾಜ ಕಲ್ಯಾಣ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆ ವಿಭಾಗಕ್ಕೆ ಅಭಿಪ್ರಾಯ ನೀಡಿರುವುದು ತಿಳಿದು ಬಂದಿದೆ. ಆದರೂ ಸಮಾಜ ಕಲ್ಯಾಣ ಇಲಾಖೆಯು ಈ ಪ್ರಸ್ತಾವವನ್ನು ಆರ್ಥಿಕ ಇಲಾಖೆಯ ಮುಂದೆ 2022ರ ನವೆಂಬರ್ 17ರಂದು ಮತ್ತೊಮ್ಮೆ ಮಂಡಿಸಿದೆ.

 ಮತ್ತೊಂದು ವಿಶೇಷ ಸಂಗತಿ ಎಂದರೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ವೈಯಕ್ತಿಕ ಗೃಹ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಾಣಕ್ಕಾಗಿ 20,000 ರೂ. ಸಹಾಯ ಧನ ಒದಗಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 2021ರ ಜುಲೈ 2ರಂದು ನಡೆದಿದ್ದ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯು ನಿರ್ಣಯಿಸಿತ್ತು. ಆದರೆ ಈ ನಿರ್ಣಯ ಕೈಗೊಂಡು 2 ವರ್ಷಗಳಾದರೂ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. 2 ವರ್ಷಗಳಿಂದಲೂ ಈ ಸಂಬಂಧದ ಕಡತವು ಇನ್ನೂ ಪ್ರಗತಿಯಲ್ಲೇ ಇದೆ ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

2020-21ನೇ ಸಾಲಿನಲ್ಲಿ ಗೃಹ ಶೌಚಾಲಯ ನಿರ್ಮಾಣ ಮಾಡಿಕೊಂಡಿರುವ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿಗಳಿಗೆ ಪ್ರತೀ ಶೌಚಾಲಯಕ್ಕೆ 15,000 ರೂ. ಮತ್ತು ರಾಜ್ಯ ಘಟಕದಡಿ ಹೆಚ್ಚುವರಿ 3,000 ರೂ. ನಂತೆ ಪ್ರೋತ್ಸಾಹ ಧನ ಪಾವತಿಸಲು ಎಸ್ಸಿಪಿ ಅಡಿ 847.71 ಲಕ್ಷ ಮತ್ತು ಟಿಎಸ್ಪಿ ಅಡಿ 331.32 ಲಕ್ಷ ರೂ. ಸೇರಿ ಒಟ್ಟಾರೆ 1,179.03 ಲಕ್ಷ ರೂ. ಅನುದಾನನವನ್ನು ಎಸ್ಸಿಪಿ ಟಿಎಸ್ಪಿ ಅಡಿ ಒದಗಿಸಬೇಕಿದೆ.

 ಆದರೆ 2020-21ನೇ ಸಾಲಿನಲ್ಲಿ ಉಳಿಕೆಯಾದ ಅನುದಾನದಲ್ಲಿ 2020-21ನೇ ಸಾಲಿನಲ್ಲಿ ಜಿಲ್ಲೆಗಳಿಗೆ 436.77 ಲಕ್ಷ ರೂ. ಬಿಡುಗಡೆಯಾಗಿದೆ. ಕೇಂದ್ರ ಕಚೇರಿಯಲ್ಲಿ 268.00 ಲಕ್ಷ ರೂ. ಲಭ್ಯವಿದೆ. ಈ ಅನುದಾವನ್ನು ಹೊರತುಪಡಿಸಿ 474.26 ಲಕ್ಷ ರೂ.  ಅಗತ್ಯವಿದೆ ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X