ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪಿಸುವ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಸ್ಥಾಪಿಸುವ ವಿಚಾರವಾಗಿ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತ ಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
'ಇದು ಸರ್ಕಾರದ ನಿಲುವು ಅಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ, ವಕ್ಫ್ ಬೋರ್ಡ್ ಅಧ್ಯಕ್ಷರು ಹೇಳಿರುವುದು ಅವರ ವೈಯಕ್ತಿಕ ವಿಚಾರವಷ್ಟೇ' ಎಂದು ಅವರು ತಿಳಿಸಿದರು.
Next Story