Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. "ಸುರತ್ಕಲ್ ಟೋಲ್ ಶುಲ್ಕ ಹೆಜಮಾಡಿ ಟೋಲ್...

"ಸುರತ್ಕಲ್ ಟೋಲ್ ಶುಲ್ಕ ಹೆಜಮಾಡಿ ಟೋಲ್ ಜತೆ ವಿಲೀನ ಅವೈಜ್ಞಾನಿಕ"

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಶಾಸಕ ರಘುಪತಿ ಭಟ್ ಮನವಿ

1 Dec 2022 7:13 PM IST
share
ಸುರತ್ಕಲ್ ಟೋಲ್ ಶುಲ್ಕ ಹೆಜಮಾಡಿ ಟೋಲ್ ಜತೆ ವಿಲೀನ ಅವೈಜ್ಞಾನಿಕ
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಶಾಸಕ ರಘುಪತಿ ಭಟ್ ಮನವಿ

ಉಡುಪಿ, ಡಿ.1: ಸುರತ್ಕಲ್ ಟೋಲ್‌ಗೇಟ್‌ನ್ನು ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್‌ ಶುಲ್ಕದೊಂದಿಗೆ ವಿಲೀನ ಮಾಡಿರುವ ಕ್ರಮ ಅವೈಜ್ಞಾನಿಕವಾಗಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್, ಇಂದು ಹೊಸದಿಲ್ಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಅದರಿಂಟಾಗುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ವಿನಂತಿಸಿದರು.

ಮನವಿ ಸ್ವೀಕರಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಈ ವಿಷಯದ ಕುರಿತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಗಳೊಂದಿಗೆ ಡಿ.5ರಂದು ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದರು ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ - ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಗುಜರಾತ್ ಚುನಾವಣಾ ಪ್ರಚಾರದಲ್ಲಿರುವುದರಿಂದ ಅವರ ಸೂಚನೆಯಂತೆ ಸಚಿವರ ಹೊಸದಿಲ್ಲಿ ಕಚೇರಿ ಅಧಿಕಾರಿಗಳು ಹಾಗೂ ಆಪ್ತ ಕಾರ್ಯದರ್ಶಿಯೊಂದಿಗೆ ಈ ವಿಷಯದ ಕುರಿತು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿರುವುದಾಗಿ ರಘುಪತಿ ಭಟ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಸಚಿವರ ಭೇಟಿಯ ಬಳಿಕ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿಯಾಗಿ ಸುರತ್ಕಲ್ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದರಿಂದ ಸ್ಥಳೀಯವಾಗಿ ಉಂಟಾಗುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.

ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿ 2 ಟೋಲ್ ಶುಲ್ಕವನ್ನು ಒಂದೇ ಟೋಲ್ ಮೇಲೆ ಹೇರುವುದರಿಂದ ಉಡುಪಿ ಜಿಲ್ಲೆಯ ವಾಹನ ಸವಾರರು ದುಬಾರಿ ಶುಲ್ಕ ಪಾವತಿಸಬೇಕಾಗುತ್ತದೆ. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಟ್ಯಾಕ್ಸಿ ಅಥವಾ ಇತರ ವಾಹನಗಳು ಮುಲ್ಕಿಯಿಂದ ಕಿನ್ನಿಗೋಳಿ ಮುಖಾಂತರ ಹೋಗುತ್ತಿದ್ದರಿಂದ ಸುರತ್ಕಲ್ ಟೋಲ್ ಪಾವತಿಸುವ ಅವಶ್ಯಕತೆ ಇರಲಿಲ್ಲ. ಆದರೆ ಈಗ ಸುರತ್ಕಲ್ ಟೋಲ್ ಶುಲ್ಕ ಹೆಜಮಾಡಿ ಟೋಲ್ ಜತೆ ವಿಲೀನದಿಂದ ಮುಲ್ಕಿಯಿಂದ ಕಿನ್ನಿಗೋಳಿ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಟ್ಯಾಕ್ಸಿ ಸೇರಿದಂತೆ ಇತರ ವಾಹನ ಸವಾರರು ಹೆಜಮಾಡಿ ಟೋಲ್ ನಲ್ಲಿ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ. 

ಅಲ್ಲದೆ ಸುರತ್ಕಲ್ ಟೋಲ್‌ನಲ್ಲಿ ಸ್ಥಳೀಯ ವಾಣಿಜ್ಯ ಉದ್ದೇಶಕ್ಕೆ ಬಳಸುವ ವಾಹನಗಳಿಗೆ ಶೇ.50ರಷ್ಟು ರಿಯಾಯಿತಿ ಇತ್ತು. ಅದನ್ನು ಈ ಟೋಲ್‌ನಲ್ಲಿ ವಿಲೀನ ಮಾಡುವಾಗ ಪರಿಗಣಿಸದೆ ಇರುವ ಬಗ್ಗೆಯೂ ಮನವಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಡಿ.5ರಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಸುವ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವವರೆಗೆ ಟೋಲ್ ದರ ಹೆಚ್ಚಳ ಮಾಡದಂತೆ ಶಾಸಕ ರಘುಪತಿ ಭಟ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರ ಆಪ್ತ ಕಾರ್ಯದರ್ಶಿ ಸಾಕತ್‌ ಸಿಂಗ್ ರಾಣಾವತ್, ಹೆಚ್ಚುವರಿ ಆಪ್ತ ಕಾರ್ಯದರ್ಶಿ ಮಂಜುನಾಥ್ ಗೌಡ ಹಾಗೂ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

share
Next Story
X