ಉಡುಪಿ: ಲಾರಿಯಿಂದ ಡೀಸೆಲ್ ಕಳವು

ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳವು ಮಾಡಿರುವ ಘಟನೆ ಡಿ.1ರಂದು ಬೆಳಗಿನ ಜಾವ ಅಂಬಲಪಾಡಿ ಜಂಕ್ಷನ್ ಬಳಿ ನಡೆದಿದೆ.
ವಾಹನದಲ್ಲಿ ಬಂದ ಮೂವರು ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಲಾರಿಯಿಂದ 20 ಲೀಟರ್ ಡಿಸೇಲ್ ಕಳವು ಮಾಡಿಕೊಂಡು ಹೋಗಿದ್ದಾರೆ. ಕಳವಾದ ಸೊತ್ತಿನ ಮೌಲ್ಯ 1745ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





