Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಎನ್‍ಡಿಆರ್ ಪುರಸ್ಕಾರಕ್ಕೆ...

ಉಪ್ಪಿನಂಗಡಿ: ಎನ್‍ಡಿಆರ್ ಪುರಸ್ಕಾರಕ್ಕೆ ಗೃಹ ರಕ್ಷಕ ದಳದ ದಿನೇಶ್ ಆಯ್ಕೆ

1 Dec 2022 10:34 PM IST
share
ಉಪ್ಪಿನಂಗಡಿ: ಎನ್‍ಡಿಆರ್ ಪುರಸ್ಕಾರಕ್ಕೆ ಗೃಹ ರಕ್ಷಕ ದಳದ ದಿನೇಶ್ ಆಯ್ಕೆ

ಉಪ್ಪಿನಂಗಡಿ: ಇಲ್ಲಿನ ಗೃಹ ರಕ್ಷಕ ದಳದ ಪ್ರಭಾರ ಘಟಕಾಧಿಕಾರಿ  ಹಾಗೂ ಸೆಕ್ಷನ್ ಲೀಡರ್ ದಿನೇಶ್ ಬಿ. ಯವರ  ಉತ್ಕೃಷ್ಠ ಸೇವೆಯನ್ನು ಪರಿಗಣಿಸಿ ಭಾರತ ಸರಕಾರ ನೀಡುವ ಎನ್‍ಡಿಆರ್ ಪ್ರಶಂಸನೀಯ ಪತ್ರ ಹಾಗೂ ಕಂಚಿನ ಪದಕಕ್ಕೆ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಭಾರತ ಸರಕಾರದ ಗೃಹ ವ್ಯವಹಾರಗಳ ಸಚಿವಾಲಯ, ಗೃಹ ರಕ್ಷಕ ದಳ ಮಹಾ ನಿರ್ದೇಶನಾಲಯ,  ಅಗ್ನಿ ಶಾಮಕ ಮತ್ತು ನಾಗರಿಕ ರಕ್ಷಣಾ ಇಲಾಖೆ ದೆಹಲಿ ಇವರು ಸಂಕಷ್ಟ ಸಮಯದಲ್ಲಿ ಸಮರ್ಪಣಾ ಭಾವದಿಂದ ಕಾರ್ಯ ನಿರ್ವಹಿಸುವ ವಿವಿಧ ಇಲಾಖೆಗಳ ಸಾಧಕರನ್ನು ಗುರುತಿಸಿ ಪದಕ ಸಹಿತ ಪ್ರಶಂಸನೀಯ ಪತ್ರಕ್ಕೆ ಆಯ್ಕೆ ನಡೆಸಿ ಅಧಿಸೂಚನೆ ಹೊರಡಿಸಿದ್ದಾರೆ. ದೇಶದ ಕೇಂದ್ರಾಡಳಿತ ಪ್ರದೇಶವನ್ನೂ ಒಳಗೊಂಡಂತೆ ಒಟ್ಟು  19 ರಾಜ್ಯಗಳ  ಸಾಧಕರನ್ನು ಗುರುತಿಸಲಾಗಿದ್ದು, ಕರ್ನಾಟಕದಲ್ಲಿ ಹಿರಿಯ ಪ್ಲಟೂನ್ ಕಮಾಂಡರ್ ಆಗಿರುವ ಬಿ.ಕೆ. ಬಸವಲಿಂಗ ಹಾಗೂ ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್ ಆಗಿರುವ ದಿನೇಶ್ ಬಿ. ರವರು ಮಾತ್ರ ಆಯ್ಕೆಗೊಂಡಿರುತ್ತಾರೆ. 

ಗೃಹ ರಕ್ಷಕ ದಳದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ದಿನೇಶ್ ಬಿ. ಅವರಿಗೆ 2018 ಹಾಗೂ 2019 ರಲ್ಲಿ ಇಲಾಖೆಯಿಂದ ನಗದು ಹಾಗೂ ಪ್ರಶಂಸನೀಯ ಪತ್ರ ನೀಡಿ ಗೌರವಿಸಲಾಗಿತ್ತು. ಇದೀಗ ಭಾರತ ಸರಕಾರದಿಂದ ಕೊಡ ಮಾಡುವ ಕಂಚಿನ ಪದಕ ಹಾಗೂ ಪ್ರಶಂಸನೀಯ ಪತ್ರಕ್ಕೆ ಆಯ್ಕೆಯಾಗುವ ಮೂಲಕ ದಿನೇಶ್ ಅವರು ಪ್ರ್ರಾಮಾಣಿಕ ಸೇವೆಗೆ ಯೋಗ್ಯ ಪುರಸ್ಕಾರವನ್ನು ಪಡೆದಂತಾಗಿದೆ. ಈ ಪುರಸ್ಕಾರಕ್ಕೆ ಇವರ ಹೆಸರನ್ನು ಕೇಂದ್ರ ಕಚೇರಿಗೆ ಗೃಹರಕ್ಷಕದಳದ ದ.ಕ. ಜಿಲ್ಲಾ ಸಮಾದೇಷ್ಟರಾದ ಡಾ. ಮುರಳೀ ಮೋಹನ್ ಚೂಂತಾರುರವರು ಶಿಫಾರಸ್ಸು ಮಾಡಿದ್ದರು.

ಪೋಟೋ: 1ಯುಪಿಪಿದಿನೇಶ್ 

share
Next Story
X