Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಲೆಕ್ಟೋರಲ್ ಬಾಂಡ್‍ಗಳ ಮಾರಾಟ ಅವಧಿ...

ಇಲೆಕ್ಟೋರಲ್ ಬಾಂಡ್‍ಗಳ ಮಾರಾಟ ಅವಧಿ ಕುರಿತ ನಿಯಮಗಳನ್ನು ಕೇಂದ್ರ ಉಲ್ಲಂಘಿಸಿರುವುದು RTI ವಿವರದಿಂದ ಬಹಿರಂಗ: ವರದಿ

2 Dec 2022 12:56 PM IST
share
ಇಲೆಕ್ಟೋರಲ್ ಬಾಂಡ್‍ಗಳ ಮಾರಾಟ ಅವಧಿ ಕುರಿತ ನಿಯಮಗಳನ್ನು ಕೇಂದ್ರ ಉಲ್ಲಂಘಿಸಿರುವುದು RTI ವಿವರದಿಂದ ಬಹಿರಂಗ: ವರದಿ

ಹೊಸದಿಲ್ಲಿ: ಇಲೆಕ್ಟೋರಲ್ ಬಾಂಡ್ ಯೋಜನೆ 2018ರ ನಿಯಮಗಳಿಗೆ ವಿರುದ್ಧವಾಗಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರವು  2018 ರಲ್ಲಿ  ಇಲೆಕ್ಟೋರಲ್ ಬಾಂಡ್‍ಗಳ ಮಾರಾಟಕ್ಕೆ ಮೂರು ಅವಧಿಗಳನ್ನು ತೆರೆದಿತ್ತು ಎಂದು ಮಾಹಿತಿ ಹಕ್ಕು ಕಾಯಿದೆಯಡಿ (RTI) ದೊರೆತ ವಿವರಗಳಿಂದ ತಿಳಿದು ಬಂದಿದೆ. ಆ ನಿರ್ದಿಷ್ಟ ವರ್ಷದಲ್ಲಿ ಎಂಟು ರಾಜ್ಯಗಳ ವಿಧಾನಸಭೆಗಳಿಗೆ ಮುಂಚಿತವಾಗಿ ಹಾಗೂ ನಂತರ ಮೂರು ಅವಧಿಗಳಿಗೆ ಇಲೆಕ್ಟೋರಲ್ ಬಾಂಡ್‍ಗಳ ಮಾರಾಟಕ್ಕೆ ಅನುಮತಿಸಲಾಗಿತ್ತು ಎಂದು RTI ಉತ್ತರದಿಂದ ತಿಳಿದು ಬಂದಿದೆ ಎಂದು newslaundry.com ವರದಿ ಮಾಡಿದೆ.

RTI ಕಾರ್ಯಕರ್ತ ನಿವೃತ್ತ ಕೊಮ್ಮೊಡೋರ್ ಲೋಕೇಶ್ ಬಾತ್ರ ಅವರಿಗೆ RTI ಉತ್ತರದ ರೂಪದಲ್ಲಿ ದೊರೆತ ವಿತ್ತ ಸಚಿವಾಲಯದ ಮಾಹಿತಿ ಪ್ರಕಾರ 2018 ರಲ್ಲಿ ಮಾರ್ಚ್ ಮೇ ಮತ್ತು ನವೆಂಬರ್ ಹಾಗೂ ಎಪ್ರಿಲ್, ಜುಲೈ ಮತ್ತು ಅಕ್ಟೋಬರ್ ನಲ್ಲಿ ಇಲೆಕ್ಟೋರಲ್ ಬಾಂಡ್‍ಗಳ ಮಾರಾಟಕ್ಕೆ ಅನುಮತಿ ಕಲ್ಪಿಸಲಾಗಿತ್ತು.

ಆದರೆ ಇಲೆಕ್ಟೋರಲ್ ಬಾಂಡ್ ಯೋಜನೆಯ ಪ್ರಕಾರ ಇಲೆಕ್ಟೋರಲ್ ಬಾಂಡ್‍ಗಳನ್ನು ಲೋಕಸಭಾ ಚುನಾವಣೆ ನಡೆಯದ ವರ್ಷದಲ್ಲಿ ಜನವರಿ, ಎಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಮಾರಾಟ ಮಾಡಬಹುದಾಗಿದೆ.

ಆದರೆ ಕೇಂದ್ರ ಸರ್ಕಾರ 2018 ರಲ್ಲಿ ಮಾರ್ಚ್ 1 ಮತ್ತು 10, ಮೇ 1 ಮತ್ತು 10 ಹಾಗೂ ನವೆಂಬರ್ 1 ಮತ್ತು 10 ನಡುವೆ ಮಾರಾಟಕ್ಕೆ  ಅನುಮತಿಸಿತ್ತು. ಆದರೆ ಅದೇ ವರ್ಷದ ಫೆಬ್ರವರಿಯಲ್ಲಿ ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ಚುನಾವಣೆಗಳು ನಡೆದಿದ್ದವು.

ದೊರೆತ ವಿವರಗಳ ಪ್ರಕಾರ ಕರ್ನಾಟಕದಲ್ಲಿನ ಚುನಾವಣೆಗಳ ಕಾರಣ ಮೇ ತಿಂಗಳಲ್ಲಿ  ಬಾಂಡ್‍ಗಳ ಮಾರಾಟಕ್ಕೆ ಅನುಮತಿಸಲಾಗಿದ್ದರೆ ಛತ್ತೀಸಗಢ, ಮಧ್ಯಪ್ರದೇಶ, ಮಿಝೋರಾಂ, ರಾಜಸ್ಥಾನ ಮತ್ತು ತೆಲಂಗಾಣ ಚುನಾವಣೆಗಳ ಹಿನ್ನೆಲೆಯಲ್ಲಿ ನವೆಂಬರ್ ತಿಂಗಳಿನಲ್ಲಿ ಬಾಂಡ್‍ಗಳ ಮಾರಾಟಕ್ಕೆ ಅನುಮತಿಸಲಾಗಿತ್ತು.

ಇಲೆಕ್ಟೋರಲ್ ಬಾಂಡ್ ಯೋಜನೆ 2018 ಅನ್ವಯ ಬಾಂಡ್‍ಗಳನ್ನು ಕೇಂದ್ರ ಸರ್ಕಾರ ನಿರ್ಧರಿಸಿದಂತೆ ಜನವರಿ, ಎಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ತಲಾ ಹತ್ತು ದಿನಗಳ ಕಾಲ ಮಾರಾಟಕ್ಕೆ ಅನುಮತಿಸಬಹುದಾಗಿದೆ. ಅಷ್ಟೇ ಅಲ್ಲದೆ ಸಾರ್ವತ್ರಿಕ ಚುನಾವಣೆಯ ವರ್ಷದಲ್ಲಿ ಕೇಂದ್ರ ಸರ್ಕಾರ ನಿರ್ದಿಷ್ಟ ಪಡಿಸಿದ ಹೆಚ್ಚುವರಿ 30 ದಿನಗಳ ಕಾಲ ಮಾರಾಟ ಮಾಡಬಹುದಾಗಿದೆ.

ಸಾರ್ವತ್ರಿಕ ಚುನಾವಣೆ ಎಪ್ರಿಲ್, ಮೇ 2019 ರಲ್ಲಿ ನಡೆದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

share
Next Story
X