ಜ.15ರೊಳಗೆ ಶಿರಾಡಿ ರಸ್ತೆಯ ಗುಂಡಿ ಮುಚ್ಚಲು ನಿರ್ದೇಶನ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಡಿ.2: ಶಿರಾಡಿ ಘಾಟಿ ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಜತೆಗೆ ಮರಗಳು, ವಿದ್ಯುತ್ ಕಂಬ ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆಗೆಗಳಿಗೆ ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಶಿರಾಡಿ ರಸ್ತೆಯ ಗುಂಡಿಯನ್ನು ಡಿಸೆಂಬರ್ 20ರೊಳಗೆ ಮುಚ್ಚುವಂತೆ ತಿಳಿಸಲಾಗಿತ್ತು. ಆದರೆ ಅದು ಕಷ್ಯ ಸಾಧ್ಯ ಎಂದು ಅಧಿಕಾರಿಗಳು ತಿಳಿಸಿರುವುದರಿಂದ ಜನವರಿ 15ರೊಳಗೆ ಸಂಪೂರ್ಣವಾಗಿ ಗುಂಡಿ ಮುಚ್ಚುವ ಕೆಲಸ ಮುಗಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.
Next Story





