Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿಸೆಂಬರ್‌ನೊಳಗೆ ಸಮಾಜ ಕಲ್ಯಾಣ ಇಲಾಖೆಯ...

ಡಿಸೆಂಬರ್‌ನೊಳಗೆ ಸಮಾಜ ಕಲ್ಯಾಣ ಇಲಾಖೆಯ ಎಲ್ಲ ಯೋಜನೆಗಳ ಪ್ರಗತಿಗೆ ಸೂಚನೆ: ಸಚಿವ ಕೋಟ

2 Dec 2022 6:57 PM IST
share
ಡಿಸೆಂಬರ್‌ನೊಳಗೆ ಸಮಾಜ ಕಲ್ಯಾಣ ಇಲಾಖೆಯ ಎಲ್ಲ ಯೋಜನೆಗಳ ಪ್ರಗತಿಗೆ ಸೂಚನೆ: ಸಚಿವ ಕೋಟ

ಮಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಶೇ. 42 ಪ್ರಗತಿ ಸಾಧಿಸಲಾಗಿದೆ. ಎಲ್ಲ ಯೋಜನೆಗಳನ್ನು ಪೂರ್ತಿ ಅನುಷ್ಠಾನಕ್ಕೆ ತರಲು ಮಾರ್ಚ್‌ವರೆಗೆ ಕಾಲಾವಕಾಶ ಇದ್ದರೂ ಡಿಸೆಂಬರ್ ಅಂತ್ಯದೊಳಗೆ ಪ್ರಗತಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳು ಸರಿಯಾಗಿ ಕಾರ್ಯಗತಗೊಳ್ಳುತ್ತಿಲ್ಲ ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ಇಲಾಖೆಯ ನೋಡೆಲ್ ಏಜೆನ್ಸಿಯ ಸಭೆಯನ್ನು ಬೆಂಗಳೂರಿನ ವಿಕಾಸ ಸೌಧದಲ್ಲಿ ಗುರುವಾರ ನಡೆಸಲಾಗಿದೆ.  ಈ ವೇಳೆ ಕಳೆದ ಬಾರಿಗಿಂತ ಹೆಚ್ಚಿನ ಪ್ರಗತಿ ಸಾಧನೆಯಾಗಿರುವುದು ಕಂಡು ಬಂದಿದೆ ಎಂದು ಮಂಗಳೂರಿನ ಜಿ.ಪಂ.ನಲ್ಲಿ ಸಚಿವರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾಹಿತಿ ನೀಡಿದರು.

2022-23ನೇ ಸಾಲಿನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಪ.ಪಂಗಡ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಲ್ಲಿ ಹಂಚಿಕೆಯಾದ 29,165.81 ಕೋಟಿ ರೂ. ಹಂಚಿಕೆ ಮಾಡಿದೆ. ನವೆಂಬರ್ ಅಂತ್ಯ ವರೆಗೆ 13,702.45 ಕೋಟಿ ರೂ. ಬಿಡುಗಡೆಯಾಗಿದ್ದು, 12,227 ಕೋಟಿ ರೂ. ವೆಚ್ಚವಾಗಿದ್ದು, ಶೇ.42 ಪ್ರಗತಿ ಸಾಧಿಸಲಾಗಿದೆ. ಇದು ಬಿಡುಗಡೆಯಾದ ಮೊತ್ತಕ್ಕೆ ಹೋಲಿಸಿದರೆ ಶೇ.89 ಪ್ರಗತಿಯಾಗುತ್ತದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯಡಿ ಎಲ್ಲ 43 ಇಲಾಖೆಗಳಿಗೆ ಹಿಂದುಳಿದವರ ಅಭಿವೃದ್ಧಿಗೆಅನುದಾನ ನೀಡಲಾಗು ತ್ತಿದ್ದು, ಸಾಧಾರಣ ಪ್ರಗತಿ ದಾಖಲಿಸಿವೆ. ಕೃಷಿ ಇಲಾಖೆ ಶೇ.16, ಅರಣ್ಯ ಇಲಾಖೆ ಶೇ.12, ಯುವ ಸಬಲೀಕರಣ ಶೇ.23, ಆಹಾರ ಸರಬರಾಜು ಇಲಾಖೆ ಶೇ.28, ವಾರ್ತಾ ಇಲಾಖೆ ಶೇ.28, ಉನ್ನತ ಶಿಕ್ಷಣ ಶೇ.6, ಪ್ರಾಥಮಿಕ ಶಿಕ್ಷಣ ಶೇ.18, ಆರೋಗ್ಯ ಇಲಾಖೆ ಶೇ.27, ಕೌಶಲಾಭಿವೃದ್ಧಿ ಇಲಾಖೆ ಶೇ.5, ಯೋಜನಾ ಇಲಾಖೆ ಶೇ.29, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ್ತಿರಾಜ್ ಇಲಾಖೆ ಶೇ. 24 ಪ್ರಗತಿ ಸಾಧಿಸಿದೆ. ಅನುದಾನ ಸರಿಯಾಗಿ ಬಳಕೆ ಮಾಡದಿದ್ದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಆ ಮೊತ್ತವನ್ನು ಇಲಾಖೆಯ ಬೇರೆ ಯೋಜನೆಗಳಿಗೆ ಮರು ಹೊಂದಾಣಿಕೆ ಮಾಡಲು ಕ್ರಮಕೈಗೊಳ್ಳಲಾಗುವುದು.

ಕಡಿಮೆ ಅನುದಾನ ವೆಚ್ಚ ಮಾಡಿರುವ ಇಲಾಖೆಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಎಸ್‌ಸಿ ಎಸ್‌ಟಿ, ಟಿಎಸ್‌ಪಿ ಅನುದಾನವನ್ನು ನಿಗದಿತ ಉದ್ದೇಶಕ್ಕೆ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ವೆಚ್ಚ ಮಾಡಿರುವ ಬಗ್ಗೆ ದೂರುಗಳು ಬಂದಿದೆ. ಐದು ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಸೂಚಿಸಲಾಗಿದೆ. ಈ ಹಿಂದೆ ಸಣ್ಣ ನೀರಾವರಿ ಇಲಾಖೆಯಿಂದ ಅನರ್ಹ ಫಲಾನುಭವಿಗಳಿಗೆ ಕೊಳವೆ ಬಾವಿಗೆ 2.40 ಲಕ್ಷ ರೂ. ವೆಚ್ಚ ಮಾಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಜಮೆ ಮಾಡಲಾಗಿದೆ ಎಂದರು.

ಹಾಸ್ಟೆಲ್‌ಗಳಿಗೆ ದಿಂಬು, ಹಾಸಿಗೆ ಪೂರೈಕೆಗೆ ಕ್ರಮ

ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್‌ಗಳಿಗೆ ದಿಂಬು ಮತ್ತು ಹಾಸಿಗೆ ಪೂರೈಕೆಗೆಮುಖ್ಯಮಂತ್ರಿಗಳು 100 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಹಾಸ್ಟೆಲ್‌ಗಳಿಗೆ ಮೂಲಸೌಕರ್ಯ ಯೋಜನೆಯಡಿ ಈ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಾಜ್ಯದಲ್ಲಿ 2,439 ಹಾಸ್ಟೆಲ್‌ಗಳಿದ್ದು, ಅವುಗಳಲ್ಲಿ 2.20 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇನ್ನೂ 1.20 ಲಕ್ಷ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಹೊರಗಿದ್ದು, ವಿದ್ಯಾನಿಧಿ ಯೋಜನೆ ಮೂಲಕ ಮನೆಯಿಂದ ಶಾಲೆಗೆ ಹೋಗಿ ಬರುವ ಮೊತ್ತವನ್ನು ಪಡೆದುಕೊಂಡು ಕಲಿಕೆ ಮುಂದುವರಿಸುತ್ತಿದ್ದಾರೆ. ಇವರ ಬೇಡಿಕೆಯಂತೆ ಶೇ.25ರಷ್ಟು ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದು, 37 ಸಾವಿರ ವಿದ್ಯಾರ್ಥಿಗಳನ್ನು ಸ್ಥಳಾವಾಕಾಶ ಇರುವ ಹಾಸ್ಟೆಲ್‌ ಗಳಿಗೆ ಭರ್ತಿಗೊಳಿಸಲಾಗಿದೆ ಎಂದರು.

ಕಲಬುರಗಿ, ಬೆಳಗಾವಿ, ದ.ಕ., ಬೆಂಗಳೂರು ಮತ್ತು ಮೈಸೂರುಗಳಲ್ಲಿ ದೀನದಯಾಳ್ ಹೆಸರಿನ ವಸತಿ ನಿಲಯ ತೆರೆಯಲಾಗುತ್ತಿದ್ದು, ಇದರಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೂ ಅವಕಾಶ ಇರುತ್ತದೆ. ಹಾಸ್ಟೆಲ್‌ಗಳಲ್ಲಿ ತಲಾ 1 ಸಾವಿರ ವಿದ್ಯಾರ್ಥಿಗಳಿಗೆ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಮಂಗಳೂರಿನಲ್ಲಿ ಮೂರು ಕಡೆಗಳಲ್ಲಿ ಹಾಸ್ಟೆಲ್ ನಿರ್ಮಿಸಲು ಉದ್ದೇಶಿಸಲಾಗಿದ್ದು,ಶೀಘ್ರವೇ ಮುಖ್ಯಮಂತ್ರಿಗಳು ಶಿಲಾನಾಸ ನೆರವೇರಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.

ಮಂಗಳೂರಲ್ಲಿ ಟೈಲರ್ಸ್ ಸಮಾವೇಶ

ಟೈಲರ್ಸ್ ಅಸೋಸಿಯೇಷನ್ ಬೇಡಿಕೆಯಂತೆ ವಿದ್ಯಾನಿಧಿ ಯೋಜನೆಯನ್ನು ಟೈಲರ್ಸ್ ಮಕ್ಕಳಿಗೂ ಸರ್ಕಾರ ವಿಸ್ತರಿಸಿದ್ದು, ಈ ಬಗ್ಗೆ ಶೀಘ್ರವೇ ಮಂಗಳೂರಿಗೆ ಮುಖ್ಯಮಂತ್ರಿಯನ್ನು ಕರೆಸಿ ಟೈಲರ್ಸ್ ಸಮಾವೇಶ ನಡೆಸ ಲಾಗುವುದು  ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಪೊಲೀಸ್, ಮಿಲಿಟರಿ ಹಾಗೂ ಅಗ್ನಿಪಥ ಸೇನಾ ಸೇರ್ಪಡೆಗಾಗಿ ಪೂರ್ವ ತರಬೇತಿಕೇಂದ್ರವನ್ನು ಕರಾವಳಿಯ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೆರೆಯಲಾಗಿದೆ. ವರ್ಷದಲ್ಲಿ ಮೂರು ಬ್ಯಾಚ್‌ಗಳನ್ನು ಕಲಿಸಲು ಉದ್ದೇಶಿಸಲಾಗಿದ್ದು, ಬ್ಯಾಚ್‌ನಲ್ಲಿ 100 ಮಂದಿಗೆ ಅವಕಾಶ ಇದ್ದು, ಈಗ ಸರಾಸರಿ 50ರಿಂದ 80 ಅಭ್ಯರ್ಥಿಗಳಿದ್ದಾರೆ. ಜನವರಿಯಲ್ಲಿ ಮತ್ತೆ ಅರ್ಜಿ ಆಹ್ವಾನಿಸಲಾಗುವುದು. ಪ್ರತಿ ಬ್ಯಾಚ್‌ಗೆ 65ರಿಂದ 70 ಲಕ್ಷ ರು. ತರಬೇತಿಗೆ ವೆಚ್ಚವಾಗುತ್ತಿದೆ ಎಂದು ಸಚಿವ ಶ್ರೀನಿವಾಸ ಕೋಟ ತಿಳಿಸಿದರು.

share
Next Story
X